ಕ್ರೀಡಾಕೂಟಗಳು ದೈಹಿಕ, ಮಾನಸಿಕ ಆರೋಗ್ಯಕ್ಕೆ ಸಹಕಾರಿ: ಎಚ್.ಡಿ.ತಮ್ಮಯ್ಯ

| Published : Sep 02 2025, 01:00 AM IST

ಕ್ರೀಡಾಕೂಟಗಳು ದೈಹಿಕ, ಮಾನಸಿಕ ಆರೋಗ್ಯಕ್ಕೆ ಸಹಕಾರಿ: ಎಚ್.ಡಿ.ತಮ್ಮಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು, ಕ್ರೀಡಾಕೂಟಗಳು ಮಕ್ಕಳನ್ನು ಮಾನಸಿಕ, ದೈಹಿಕವಾಗಿ ಸದೃಢಗೊಳಿಸುವ ಜೊತೆಗೆ ಆರೋಗ್ಯಪೂರ್ಣ ಬದುಕಿಗೆ ದಾರಿ ಮಾಡಿಕೊಟ್ಟು ಜೀವನದಲ್ಲಿ ಶಿಸ್ತಿನ ಪಾಠವನ್ನು ಕಲಿಸುತ್ತದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

- ಉಪ್ಪಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಗರ ಕ್ಲಸ್ಟರ್‌ನ ಕಸಬಾ ವಲಯದ ಮಟ್ಟದ ಕ್ರೀಡಾಕೂಟ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಕ್ರೀಡಾಕೂಟಗಳು ಮಕ್ಕಳನ್ನು ಮಾನಸಿಕ, ದೈಹಿಕವಾಗಿ ಸದೃಢಗೊಳಿಸುವ ಜೊತೆಗೆ ಆರೋಗ್ಯಪೂರ್ಣ ಬದುಕಿಗೆ ದಾರಿ ಮಾಡಿಕೊಟ್ಟು ಜೀವನದಲ್ಲಿ ಶಿಸ್ತಿನ ಪಾಠವನ್ನು ಕಲಿಸುತ್ತದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.ನಗರದ ಜಿಲ್ಲಾ ಆಟದ ಮೈದಾನದಲ್ಲಿ ಸೋಮವಾರ ತಾಲೂಕು ಪಂಚಾಯ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಶಾಲಾ ಶಿಕ್ಷಣ ಇಲಾಖೆಯಡಿ ಉಪ್ಪಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಗರ ಕ್ಲಸ್ಟರ್‌ನ ಕಸಬಾ ವಲಯದ ಮಟ್ಟದ ಕ್ರೀಡಾ ಕೂಟವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿ ತೀರ್ಪುಗಾರರು ಕೂಡಾ ಪಾರದಶರ್ಕವಾಗಿ ತೀರ್ಪುಗಳನ್ನು ನೀಡಬೇಕು ಎಂದು ಸೂಚಿಸಿದರು.ಯಾವುದೇ ಕ್ರೀಡೆಯಿರಲಿ ಸೋಲು ಮತ್ತು ಗೆಲುವು ಸಾಮಾನ್ಯವಾದ ವಿಚಾರ. ಗೆಲುವು ಸಾಧಿಸಿದವನು ಬಿಗದೇ, ಸೋತವರು ಕುಗ್ಗದೇ ಮುಂದಿನ ಗೆಲುವಿನ ಹೆಜ್ಜೆಗೆ ಈ ಸ್ಪರ್ಧೆಗಳು ನಾಂದಿಯಾಗಬೇಕು ಎಂ ದ ಅವರು ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲವಿದ್ದರೆ ಬದುಕಿನಲ್ಲಿ ಯಶಸ್ವಿಯಾಗಲು ಸಾಧ್ಯ ಎಂದರು.ಓದಿನ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಲು ವಿದ್ಯಾರ್ಥಿಗಳು ಮುಂದಾಗಬೇಕು. ಅದರಂತೆ ಶಿಕ್ಷಕರು ಕೂಡಾ ವಿದ್ಯಾರ್ಥಿಗಳಿಗೆ ಆಸಕ್ತಿಯಿರುವ ಚಟುವಟಿಕೆಗಳಲ್ಲಿ ಹೆಚ್ಚಿನ ಪ್ರೋತ್ಸಾಹಿಸಿದರೆ ಭವಿಷ್ಯದಲ್ಲಿ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಬಹುದು ಎಂದು ತಿಳಿಸಿದರು.ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ ಕಸಬಾ ವಲಯಮಟ್ಟದ ಕ್ರೀಡಾಕೂಟದಲ್ಲಿ ಸುಮಾರು ೧೫ಕ್ಕೂ ಹೆಚ್ಚು ಶಾಲೆಗಳು ಸ್ಪರ್ಧೆಗಳಲ್ಲಿ ಭಾಗವಹಿಸಿವೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಆಟೋಟ ಹಾಗೂ ಪ್ರತಿಭೆ ಕೂಡಿಟ್ಟುಕೊಳ್ಳದೇ ಅನಾವರಣಗೊಳಿಸಬೇಕು. ಕ್ರೀಡೆಗಳಲ್ಲಿ ಹೆಚ್ಚಿನ ಶ್ರಮ ವಹಿಸಿದರೆ ಉನ್ನತ ಹೆಸರು ಸಂಪಾದಿಸಬೇಕು ಎಂದು ಕಿವಿಮಾತು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಪ್ಪಳ್ಳಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಸೀಪ್‌ಪಾಷ ಇಂದಿನ ಆಟೋಟ ಸ್ಪರ್ಧೆಗಳು ಸಂಪೂರ್ಣವಾಗಿ ವಿದ್ಯಾರ್ಥಿಗಳಿಗೆ ಮೀಸಲಿಟ್ಟಿದ್ದು, ಭಯವನ್ನು ದೂರ ಗೊಳಿಸಿ ಧೈರ್ಯದಿಂದ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಶಕ್ತಿ ಪ್ರದರ್ಶಿಸಬೇಕು ಎಂದರು.ತಾಲೂಕು ಗ್ಯಾರಂಟಿ ಪ್ರಾಧಿಕಾರ ಉಪಾಧ್ಯಕ್ಷ ಅನ್ಸರ್‌ಆಲಿ ಮಾತನಾಡಿ ಕ್ರೀಡಾಪಟುಗಳು ಕ್ರೀಡಾ ಮ ನೋ ಭಾವದಿಂದ ಸ್ಪರ್ಧೆಯಲ್ಲಿ ಭಾಗವಹಿಸಬೇಕು. ಸ್ಪರ್ಧೆಗಳಲ್ಲಿ ದ್ವೇಷ, ಅಸೂಯೆಗೆ ಆಸ್ಪದ ಕೊಡದೇ ಕ್ರೀ ಡಾ ಕೂಟದದಲ್ಲಿ ತಂಡದ ಗೆಲುವಿನತ್ತ ಚಿಂತನೆ ಇರಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಪರಮೇಶ್ವರಪ್ಪ, ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಜಯ್ಯ, ಕ್ಷೇತ್ರ ಶಿಕ್ಷಣ ಇಲಾಖೆ ಸಂಯೋಜಕ ಕೃಷ್ಣ ಮೂರ್ತಿ ಅರಸ್, ಜಾನಕಮ್ಮ, ಶಾಲೆ ಮುಖ್ಯ ಶಿಕ್ಷಕ ಸೋಮಶೆಖರ್, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಯ್ಯ ಮತ್ತತಿರರು ಉಪಸ್ಥಿತರಿದ್ದರು.