ಸಾರಾಂಶ
ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ಜಿಲ್ಲಾ ಮಟ್ಟದ ಕ್ರೀಡಾಕೂಟ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುದೈಹಿಕ ಶಿಕ್ಷಣ ಶಿಕ್ಷಕರ ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕ್ರೀಡಾಕೂಟಗಳು ಸಹಕಾರಿ ಎಂದು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಭೈರೇಗೌಡ ಹೇಳಿದರು.ನಗರದ ನೇತಾಜಿ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾಡಳಿತ, ಜಿ.ಪಂ, ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಚೇರಿ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಬುಧವಾರ ನಡೆದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಹೋರಾಟದ ಫಲವಾಗಿ ಬಹು ದಿನಗಳ ಬೇಡಿಕೆಯಾಗಿದ್ದ ದೈಹಿಕ ಶಿಕ್ಷಣ ಶಿಕ್ಷಕರಿಗೆ ಕ್ರೀಡಾಕೂಟ ಏರ್ಪಡಿಸಬೇಕೆಂಬ ಉದ್ದೇಶದಿಂದ ಸರ್ಕಾರ ಅನುಮತಿ ನೀಡಿರುವುದರಿಂದ ಇಂದು ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ ಎಂದು ಹೇಳಿದರು.ದೈಹಿಕ ಶಿಕ್ಷಕರು ಕ್ರೀಡಾಕೂಟದಲ್ಲಿ ಭಾಗವಹಿಸಬೇಕೆಂಬ ಆಶಾಭಾವನೆ ವ್ಯಕ್ತಪಡಿಸಿದ್ದು, ಕ್ರೀಡೆಯಲ್ಲಿ ಪರಿಣಿತಿ ಪಡೆದು ಕ್ರೀಡಾಕೂಟದಲ್ಲಿ ಬಹಳ ಆಸಕ್ತಿಯಿಂದ ಭಾಗವಹಿಸಿದ್ದೀರಿ, ಅರಣ್ಯ, ದೈಹಿಕ, ಪೊಲೀಸ್ ಈ ಇಲಾಖೆಗಳ ನೌಕರರಿಗೆ ಕ್ರೀಡಾಕೂಟದಲ್ಲಿ ಭಾಗವಹಿಸಲು ಅನುಮತಿ ಇರಲಿಲ್ಲ. ಈಗ ಸಾಮಾನ್ಯ ನೌಕರರೊಂದಿಗೆ ಒಡಗೂಡಿ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿರುವ ಬಗ್ಗೆ ಸರ್ಕಾರವನ್ನು ಅಭಿನಂದಿಸಿದರು.
ದೈಹಿಕ ಶಿಕ್ಷಕರ ದೇಹ ಸದೃಢತೆಗೆ ಸರ್ಕಾರ ಒಳ್ಳೆಯ ನಿರ್ಧಾರ ಮಾಡಿದೆ. ಮಕ್ಕಳನ್ನು ಕ್ರೀಡೆಯಲ್ಲಿ ಪ್ರೋತ್ಸಾಹಿಸುವ ದೈಹಿಕ ಶಿಕ್ಷಕರು, ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ ಮುಂತಾದ ರಾಷ್ಟ್ರೀಯ ಹಬ್ಬಗಳಲ್ಲಿ ತಮ್ಮ ಉಪಸ್ಥಿತಿಯಲ್ಲಿ ಕ್ರೀಡೆಗಳನ್ನು ಯಶಸ್ವಿಗೊಳಿಸುತ್ತಿದ್ದೀರಿ ಎಂದು ಹೇಳಿದರು.ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬಿ.ಪಿ. ಕುಮಾರಸ್ವಾಮಿ ಮಾತನಾಡಿ, ಇಂದು ಉತ್ತಮ ರೀತಿಯಲ್ಲಿ ಈ ಕ್ರೀಡಾಕೂಟ ಆಯೋಜನೆಯಾಗಿದ್ದು, ಎಲ್ಲಾ ಸೌಲಭ್ಯ ನೀಡಿರುವ ಇಲಾಖೆ ಹಾಗೂ ಸಕ್ರಿಯವಾಗಿ ಪಾಲ್ಗೊಂಡಿ ರುವ ದೈಹಿಕ ಶಿಕ್ಷಕರಿಗೆ ಶುಭಾಶಯ ಕೋರಿದರು.ಮಕ್ಕಳಲ್ಲಿರುವ ಪ್ರತಿಭೆ ಹೊರತರಲು ದೈಹಿಕ ಶಿಕ್ಷಕರ ಶ್ರಮ ಅವಿಸ್ಮರಣೀಯ, ರಾಜ್ಯ, ರಾಷ್ಟ್ರಮಟ್ಟಕ್ಕೆ ತಂಡವನ್ನು ಆಯ್ಕೆ ಮಾಡಿ ಕಳುಹಿಸುವಲ್ಲಿ ಪರಿಶ್ರಮ ವಹಿಸುತ್ತಿದ್ದಾರೆ ಎಂದು ತಿಳಿಸಿದರು.
ಈ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಜಿಲ್ಲೆಯ ತಂಡಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಲಿ ಎಂದು ಶುಭ ಹಾರೈಸಿದರು. ಡಯಟ್ ದೈಹಿಕ ಶಿಕ್ಷಣ ಉಪನ್ಯಾಸಕ ಜ್ಞಾನಮೂರ್ತಿ ದೈಹಿಕ ಶಿಕ್ಷಕರಿಗೆ ಕ್ರೀಡಾಕೂಟದ ಮೂಲಕ ಉಲ್ಲಾಸ ಉತ್ಸಾಹ ಮೂಡಿಸಲು ಸರ್ಕಾರ ಉತ್ತೇಜನ ನೀಡಿದೆ ಎಂದು ಹೇಳಿದರು.ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಯು.ವಿ ಪಾಲಾಕ್ಷಮೂರ್ತಿ ಮಾತನಾಡಿ, ಜಿಲ್ಲಾಮಟ್ಟದ ಪ್ರಥಮ ಕ್ರೀಡಾಕೂಟ ಆಯೋಜನೆ ಮಾಡಲು ಸರ್ಕಾರ ಅನುಮತಿ ನೀಡಿರುವ ಬಗ್ಗೆ ಕೃತಜ್ಞತೆ ಸಲ್ಲಿಸಿದ ಅವರು, ಸೋಲು-ಗೆಲುವು ಸಮಾನವಾಗಿ ಸ್ವೀಕರಿಸಿ ಇಲ್ಲಿ ಗೆದ್ದು ಆಯ್ಕೆಯಾದ ತಂಡ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವಂತಾಗಲಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಪ್ಪ, ಎ.ಪಿ, ಶಂಕರೇಗೌಡ, ಫೈರೋಜ್ ಅಹಮದ್, ಚಂದ್ರಯ್ಯ, ಪಿ.ವಿ. ಗಂಗಾಧರ, ಕೆ.ಎನ್. ಮಂಜುನಾಥ್, ಬಿ.ಆರ್. ಕಿರಣ್ ಕುಮಾರ್, ಶ್ರೀನಿವಾಸ್, ಪ್ರವೀಣ್ ಪಿಂಟೋ, ಎ.ಆರ್. ಪರಮೇಶ್, ಶಿವಪ್ಪ, ವಿನುತ ಇದ್ದರು.ಪಾಂಡುಕುಮಾರ್ ಸ್ವಾಗತಿಸಿ, ನಾಗರಾಜ್ ನಿರೂಪಿಸಿದರು. ಪರಮೇಶ್ವರಪ್ಪ ವಂದಿಸಿದರು. 19 ಕೆಸಿಕೆಎಂ 1ಜಿಲ್ಲಾ ಆಟದ ಮೈದಾನದಲ್ಲಿ ಬುಧವಾರ ನಡೆದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಭೈರೇಗೌಡ ಕ್ರೀಡಾ ಜ್ಯೋತಿ ಸ್ವೀಕರಿಸುವ ಮೂಲಕ ಉದ್ಘಾಟಿಸಿದರು.
------------------------------