ವಿದ್ಯಾರ್ಥಿಗಳಿಗೆ ಕ್ರೀಡಾಕೂಟ ಭದ್ರಬುನಾದಿ: ರಮೇಶ್ ಬಂಡಿಸಿದ್ದೇಗೌಡ

| Published : Aug 31 2024, 01:44 AM IST / Updated: Aug 31 2024, 01:45 AM IST

ವಿದ್ಯಾರ್ಥಿಗಳಿಗೆ ಕ್ರೀಡಾಕೂಟ ಭದ್ರಬುನಾದಿ: ರಮೇಶ್ ಬಂಡಿಸಿದ್ದೇಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಸಮಾನತೆ ಹಾಗೂ ಸೋದರತ್ವ ಭಾವನೆ ಮೂಡಿಸಲು ಸಹಕಾರಿಯಾಗಿದೆ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಗ್ರಾಮೀಣ ಪ್ರತಿಭಾ ವಿದ್ಯಾರ್ಥಿಗಳಿಗೆ ಕ್ರೀಡಾಸಕ್ತಿ ಮೂಡಿಸಲು ಹಾಗೂ ಸಮಾಜದ ಮುಖ್ಯವಾಹಿನಿಗೆ ಗುರುತಿಸಿಕೊಳ್ಳಲು ಕ್ರೀಡಾಕೂಟ ಭದ್ರಬುನಾದಿಯಾಗಿದೆ ಎಂದು ಶಾಸಕ ಹಾಗೂ ಸೆಸ್ಕ್ ಅಧ್ಯಕ್ಷ ರಮೇಶ ಬಂಡಿಸಿದ್ದೇಗೌಡ ತಿಳಿಸಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ್ದ ಬೆಳಗೊಳ ಹೋಬಳಿ ಮಟ್ಟದ 2024- 25ನೇ ಸಾಲಿನ ಕ್ರೀಡಾಕೂಟಕ್ಕೆ ವಾಲಿಬಾಲ್ ಎಸೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಸದೃಢ ದೇಹ, ಏಕಾಗ್ರತೆ ಮನಸ್ಸಿನ ಮತ್ತು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ದೈನಂದಿನ ಚಟುವಟಿಕೆಗಳಲ್ಲಿ ಕ್ರೀಡೆಯನ್ನು ಒಂದು ಪ್ರಮುಖ ಭಾಗವಾಗಿ ಪರಿಗಣಿಸಿ ತೊಡಗಿಸಿಕೊಳ್ಳಬೇಕು. ಸೋಲು ಮತ್ತು ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾಕೂಟದಲ್ಲಿ ಭಾಗವಹಿಸಿ, ಕ್ರೀಡೆ ಘನತೆಯನ್ನು ಉಳಿಸಿ ಬೆಳೆಸುವಂತೆ ಸಲಹೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಪಿ ಮಹೇಶ್ ಮಾತನಾಡಿ, ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಸಮಾನತೆ ಹಾಗೂ ಸೋದರತ್ವ ಭಾವನೆ ಮೂಡಿಸಲು ಸಹಕಾರಿಯಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬೆಳಗೊಳ ಸರ್ಕಾರಿ ಪ್ರೌಢಶಾಲೆ ಎಸ್‌ಡಿಎಂಸಿ ಅಧ್ಯಕ್ಷೆ ಉಷಾ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಜೆ ಶ್ರೀನಿವಾಸ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಚಂದ್ರು, ಟಿಪಿಒ ಸಿದ್ದರಾಜು, ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಸೀತಾರಾಮು, ಬಿ ಆರ್‌ಸಿ ಡಾ.ಪ್ರಭಾ ನಂಜಪ್ಪ, ಬಿಆರ್‌ಪಿ ರಮೇಶ್, ಕರ್ನಾಟಕ ಜಾನಪದ ಪರಿಷತ್ತು ಅಧ್ಯಕ್ಷ ಸಿದ್ದಲಿಂಗು, ಎಸ್‌ಡಿಎಂಸಿ ಸದಸ್ಯ ಸುಬ್ರಹ್ಮಣ್ಯ, ಶ್ವೇತಾ, ಮುಖ್ಯ ಶಿಕ್ಷಕ ಕೆ. ರಾಜು, ರಮೇಶ್ ಮಾನಗಾಂವ, ದೈಹಿಕ ಶಿಕ್ಷಣ ಶಿಕ್ಷಕಿ ಟಿ. ರತ್ನಮ್ಮ ಸೇರಿದಂತೆ ಇತರ ಶಿಕ್ಷಕರು ಹಾಜರಿದ್ದರು.