ಸಾರಾಂಶ
ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಶನಿವಾರಸಂತೆ ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ಶಾಲೆ ವತಿಯಿಂದ ಗುರುವಾರ 2024-25ನೇ ಶೈಕ್ಷಣಿಕ ಸಾಲಿನ ಪ್ರಾಥಮಿಕ ಶಾಲಾ ವಿಭಾಗದ ಶನಿವಾರಸಂತೆ ವಲಯ ಮಟ್ಟದ ಕ್ರೀಡಾಕೂಟ ನಡೆಯಿತು.
ಕನ್ನಡಪ್ರಭ ವಾರ್ತೆ ಶನಿವಾರಸಂತೆ
ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ. ಈ ಉದ್ದೇಶದಿಂದ ಸರ್ಕಾರ ಮತ್ತು ಶಿಕ್ಷಣ ಇಲಾಖೆ ಪ್ರತಿವರ್ಷ ಕ್ರೀಡಾಕೂಟಗಳನ್ನು ಹಮ್ಮಿಕೊಳ್ಳುತ್ತದೆ. ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಪಾಲ್ಗೊಂಡು ಕ್ರೀಡೆಯಲ್ಲಿರುವ ಗೆಲವು ಮತ್ತು ಸೋಲನ್ನು ಸಮಾನವಾಗಿ ಸ್ವೀಕರಿಸುವಂತೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಟಿ.ವಿಶ್ವನಾಥ್ ಹೇಳಿದ್ದಾರೆ.ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಶನಿವಾರಸಂತೆ ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ಶಾಲೆ ವತಿಯಿಂದ ಗುರುವಾರ ಹಮ್ಮಿಕೊಂಡಿದ 2024-25ನೇ ಶೈಕ್ಷಣಿಕ ಸಾಲಿನ ಪ್ರಾಥಮಿಕ ಶಾಲಾ ವಿಭಾಗದ ಶನಿವಾರಸಂತೆ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಹಾಕಿ ಪಂದ್ಯಾವಳಿ ಮೂಲಕ ಕೂಟಕ್ಕೆ ಚಾಲನೆ ನೀಡಲಾಯಿತು. ಶನಿವಾರಸಂತೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಬಾಲಕರ ವಿಭಾಗದ ಹಾಕಿ ಪಂದ್ಯಾವಳಿ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಶನಿವಾರಸಂತೆ ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲೆ ಡಿ.ಸುಜಲಾದೇವಿ ಹಾಕಿ ಪಂದ್ಯಾವಳಿಗೆ ಚಾಲನೆ ನೀಡಿದರು.ಶನಿವಾರಸಂತೆ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಸಿ.ಕೆ.ದಿನೇಶ್, ವಲಯ ಕ್ರೀಡಾ ಕಾರ್ಯದರ್ಶಿ ಕೆ.ಪಿ.ಸುನಂದ, ವಿವಿಧ ಶಾಲಾ ದೈಹಿಕ ಶಿಕ್ಷಣ ಶಿಕ್ಷರಾದ ಪವನ್‍ಕುಮಾರ್, ಸುನಂದ, ಭಾಸ್ಕರ್, ರಾಜೇಶ್, ರಂಗಸ್ವಾಮಿ, ಆದರ್ಶ ಹಾಗೂ ವಿವಿಧ ಶಾಲಾ ತಂಡಗಳ ವ್ಯವಸ್ಥಾಪಕರು ಹಾಜರಿದ್ದರು.