ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಕ್ರೀಡೆ ಸಹಕಾರಿ

| Published : Sep 04 2024, 01:48 AM IST

ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಕ್ರೀಡೆ ಸಹಕಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಕ್ರೀಡೆಗಳು ಆರೋಗ್ಯಯುತ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಬಿಎಲ್‌ಡಿಇ ಸಂಸ್ಥೆಯ ಮುಖ್ಯ ಸಲಹೆಗಾರ ಮತ್ತು ಬಿಎಲ್‌ಡಿಇ ಡೀಮ್ಡ್ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ ಡಾ.ಆರ್‌.ವಿ.ಕುಲಕರ್ಣಿ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಕ್ರೀಡೆಗಳು ಆರೋಗ್ಯಯುತ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಬಿಎಲ್‌ಡಿಇ ಸಂಸ್ಥೆಯ ಮುಖ್ಯ ಸಲಹೆಗಾರ ಮತ್ತು ಬಿಎಲ್‌ಡಿಇ ಡೀಮ್ಡ್ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ ಡಾ.ಆರ್‌.ವಿ.ಕುಲಕರ್ಣಿ ಹೇಳಿದರು.

ನಗರದ ಬಿಎಲ್‌ಡಿಇ ಸಂಸ್ಥೆಯ ಶ್ರೀ ಬಿ.ಎಂ.ಪಾಟೀಲ ನರ್ಸಿಂಗ್ ಕಾಲೇಜಿನ ಸಹಯೋಗದಲ್ಲಿ ನಡೆದ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕಲಬುರಗಿ ವಲಯ ಮಟ್ಟದ ಎರಡು ದಿನಗಳ ಪುರುಷರ ಕಬಡ್ಡಿ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ನಾನಾ ಕಾರಣಗಳಿಂದ ಕ್ರೀಡೆಗಳ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿದೆ. ಆದರೆ, ಪ್ರತಿಯೊಬ್ಬರು ಕ್ರೀಡೆಗಳಲ್ಲಿ ಪಾಲ್ಗೊಂಡರೆ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕವಾಗಿಯೂ ಸದೃಢರಾಗಬಹುದು. ಇದರಿಂದ ಆರೋಗ್ಯಯುತ ಸಮಾಜ ನಿರ್ಮಾಣಕ್ಕೂ ಅನುಕೂಲವಾಗುತ್ತದೆ ಎಂದರು.ಪ್ರಾಚಾರ್ಯ ಪ್ರೊ.ಶಾಲ್ಮೊನ್ ಚೊಪಡೆ ಮಾತನಾಡಿ, ಕ್ರೀಡೆಗಳಲ್ಲಿ ಸೋಲು ಮತ್ತು ಗೆಲುವು ಸಾಮಾನ್ಯ. ಎರಡನ್ನೂ ಸಮಾನವಾಗಿ ಸ್ವೀಕರಿಸಿ ಮುನ್ನಡೆಯಬೇಕು. ಮರಳಿ ಪ್ರಯತ್ನ ಮಾಡಿದರೆ ಮುಂದಿನ ಪಂದ್ಯಗಳಲ್ಲಿ ಗೆಲುವು ಸಾಧ್ಯ ಎಂದು ಹೇಳಿದರು. ಸಮಾರೋಪದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಆಡಳಿತಾಧಿಕಾರಿ ಐ.ಎಸ್.ಕಾಳಪ್ಪನವರ ಪ್ರಶಸ್ತಿ ಪ್ರಧಾನ ಮಾಡಿದರು.ಈ ವೇಳೆ ಡಾ.ಜಯಶ್ರೀ ಪೂಜಾರ, ರೂಪಾ, ಸಂಸ್ಥೆಯ ದೈಹಿಕ ನಿರ್ದೇಶಕ ಎಸ್.ಎಸ್.ಕೋರಿ, ಉಪನಿರ್ದೇಶಕ ಕೈಲಾಸ ಹಿರೇಮಠ, ಕಾಲೇಜಿನ ಕ್ರೀಡಾ ವಿಭಾಗದ ಮುಖ್ಯಸ್ಥ ಸುಧೀರ ಬಾಳಿ, ಕ್ರಿಕೆಟ್ ತರಬೇತುದಾರ ಪ್ರಶಾಂತ ಹಜೇರಿ, ಎಸ್.ಸಿ.ಪವಾರ, ಸೌಜನ್ಯ ಪೂಜಾರ, ಪಂದ್ಯಾವಳಿಯ ಮುಖ್ಯ ನಿರ್ವಾಹಕ ಪ್ರವಿಣ ಬಗಲಿ, ಅಮರನಾಥ ಶಣ್ಮುಗೆ, ಗುರುರಾಜ ಗುಗ್ಗರಿ, ಬಾಪು ಖೋದ್ನಾಪುರ, ಡಾ.ಸತೀಶ ನಡಗಡ್ಡಿ, ಮಂಜುನಾಥ ಪಾಟೀಲ, ಅಮಿತಕುಮಾರ ಪಾಟೀಲ, ನಜೀರ್ ಬಳಗಾರ, ಕಿರಣ, ಪ್ರ್ಯಾನ್ಸಿಸ್, ಸಚಿನ, ಶಂಕರ, ಪರಶುರಾಮ, ಶ್ವೇತಾ ಹಿಟ್ನಾಳ, ಲಕ್ಷ್ಮಿ, ಸುಮಾ, ಅನಿತಾ, ಆಶಾ ಹಾಗೂ ಕಾಲೇಜಿನ ಶಿಕ್ಷಕರು ಉಪಸ್ಥಿತರಿದ್ದರು.

ಪಂದ್ಯಾವಳಿಯ ಫಲಿತಾಂಶ:

ಈ ಪಂದ್ಯಾವಳಿಯಲ್ಲಿ ರಾಯಚೂರಿನ ರಾಯಚೂರು ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್(ರಿಮ್ಸ್) ಕಾಲೇಜು ಮೊದಲ ಸ್ಥಾನ ಪಡೆದರೆ, ಇದೇ ರಾಯಚೂರಿನ ನವೋದಯ ಫಾರ್ಮಸಿ ಕಾಲೇಜು ದ್ವಿತೀಯ ಸ್ಥಾನ ಪಡೆಯಿತು. ಬಾಗಲಕೋಟೆಯ ಸಜ್ಜಲಶ್ರೀ ನರ್ಸಿಂಗ್ ಕಾಲೇಜು ತೃತೀಯ ಹಾಗೂ ಕೊಪ್ಪಳದ ಕಿಮ್ಸ್ ಕಾಲೇಜು ನಾಲ್ಕನೇ ಸ್ಥಾನ ಪಡೆದವು. ಕಲಬುರಗಿ ವಲಯದ ಒಟ್ಟು 28 ನಾನಾ ನರ್ಸಿಂಗ್ ಕಾಲೇಜುಗಳು ತಂಡಗಳು ಈ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದವು.ಇತ್ತೀಚಿನ ದಿನಗಳಲ್ಲಿ ನಾನಾ ಕಾರಣಗಳಿಂದ ಕ್ರೀಡೆಗಳ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿದೆ. ಆದರೆ, ಪ್ರತಿಯೊಬ್ಬರು ಕ್ರೀಡೆಗಳಲ್ಲಿ ಪಾಲ್ಗೊಂಡರೆ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕವಾಗಿಯೂ ಸದೃಢರಾಗಬಹುದು. ಇದರಿಂದ ಆರೋಗ್ಯಯುತ ಸಮಾಜ ನಿರ್ಮಾಣಕ್ಕೂ ಅನುಕೂಲವಾಗುತ್ತದೆ.

-ಡಾ.ಆರ್‌.ವಿ.ಕುಲಕರ್ಣಿ, ಬಿಎಲ್‌ಡಿಇ ಡೀಮ್ಡ್ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌.