ನಾಯಕತ್ವದ ಗುಣವೃದ್ಧಿಗೆ ಕ್ರೀಡೆ ಸಹಕಾರಿ: ಮಲ್ಲಯ್ಯ ಪ್ರತಿಪಾದನೆ

| Published : Aug 05 2025, 11:45 PM IST

ನಾಯಕತ್ವದ ಗುಣವೃದ್ಧಿಗೆ ಕ್ರೀಡೆ ಸಹಕಾರಿ: ಮಲ್ಲಯ್ಯ ಪ್ರತಿಪಾದನೆ
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣವೃದ್ಧಿಯಾಗಬೇಕಾದರೆ ಕ್ರೀಡೆಗಳು ಸಹಕಾರಿಯಾಗುತ್ತವೆ ಎಂದು ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ ಹೇಳಿದರು.ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ವಲಯ ಮಟ್ಟದ ಪ್ರೌಢ ಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕ್ರೀಡೆಗಳಲ್ಲಿ ಸೋಲು, ಗೆಲವು ಮುಖ್ಯ ಅಲ್ಲ. ಅದರಲ್ಲಿ ಭಾಗವಹಿಸುವಿಕೆ ಮುಖ್ಯ ಎಂದರು.

ಕನ್ನಡಪ್ರಭ ವಾರ್ತೆ ಮಸ್ಕಿ

ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣವೃದ್ಧಿಯಾಗಬೇಕಾದರೆ ಕ್ರೀಡೆಗಳು ಸಹಕಾರಿಯಾಗುತ್ತವೆ ಎಂದು ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ ಹೇಳಿದರು.

ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ವಲಯ ಮಟ್ಟದ ಪ್ರೌಢ ಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕ್ರೀಡೆಗಳಲ್ಲಿ ಸೋಲು, ಗೆಲವು ಮುಖ್ಯ ಅಲ್ಲ. ಅದರಲ್ಲಿ ಭಾಗವಹಿಸುವಿಕೆ ಮುಖ್ಯ ಎಂದರು.

ಪ್ರಾಥಮಿಕ ಹಾಗೂ ಪ್ರೌಢ ಶಾಲಾಮಟ್ಟದಲ್ಲಿಯೇ ವಿದ್ಯಾರ್ಥಿಗಳು ಅಭ್ಯಾಸದ ಜೊತೆಗೆ ಹೆಚ್ಚು ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದರೆ ಮುಂದೆ ಅವರು ಉತ್ತಮ ನಾಯಕರಾಗಲು ಸಾಧ್ಯ ಎಂದರು.

ಪುರಸಭೆ ಸದಸ್ಯ ದೊಡ್ಡ ಕರಿಯಪ್ಪ, ಕೃಷ್ಣ ಡಿ. ಚಿಗರಿ. ಶಾಲಾ ಉಸ್ತುವಾರಿ ಸಮಿತಿ ಅಧ್ಯಕ್ಷ ಎಂ.ಡಿ. ಅನ್ವರ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪಂಪಾಪತಿ ಹೂಗಾರ, ಶಂಕರ್ ಎನ್., ಸಿ.ಎ. ಮೇಟಿ ಸೇರಿದಂತೆ ಪುರಸಭೆ ಸದಸ್ಯರು, ಶಾಲಾ ಉಸ್ತುವಾರಿ ಸಮಿತಿ ಪದಾಧಿಕಾರಿಗಳು ಇದ್ದರು.

ಕ್ರೀಡಾ ಧ್ವಜಾರೋಹಣ ನಡೆಯಿತು. ಕ್ರೀಡಾಪಟುಗಳ ತಂದಿದ್ದ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿದ ನಂತರ ಪಾಲ್ಗೊಂಡಿದ್ದ ಎಲ್ಲಾ ಶಾಲೆಗಳ ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ವಲಯ ಮಟ್ಟದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಪಾಲ್ಗೊಂಡಿದ್ದರು.