ದೈಹಿಕ, ಮಾನಸಿಕ ಆರೋಗ್ಯ ಕಾಪಾಡುವಲ್ಲಿ ಕ್ರೀಡೆ ಸಹಾಯಕ: ಮಂಜುನಾಥ್‌

| Published : Apr 11 2025, 12:33 AM IST

ದೈಹಿಕ, ಮಾನಸಿಕ ಆರೋಗ್ಯ ಕಾಪಾಡುವಲ್ಲಿ ಕ್ರೀಡೆ ಸಹಾಯಕ: ಮಂಜುನಾಥ್‌
Share this Article
  • FB
  • TW
  • Linkdin
  • Email

ಸಾರಾಂಶ

ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡುವಲ್ಲಿ ಕ್ರೀಡೆ ಅತಿ ಅವಶ್ಯಕ ಎಂದು ವಾಣಿಜ್ಯ ತೆರಿಗೆ ಉಪ ಆಯುಕ್ತ ಮಂಜುನಾಥ್ ಅಭಿಪ್ರಾಯಪಟ್ಟರು.

ಕ್ರೀಡಾಕೂಟದ ಸಮಾರೋಪ

ದಾವಣಗೆರೆ: ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡುವಲ್ಲಿ ಕ್ರೀಡೆ ಅತಿ ಅವಶ್ಯಕ ಎಂದು ವಾಣಿಜ್ಯ ತೆರಿಗೆ ಉಪ ಆಯುಕ್ತ ಮಂಜುನಾಥ್ ಅಭಿಪ್ರಾಯಪಟ್ಟರು.

ನಗರದಲ್ಲಿ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ನಡೆದ ಎರಡು ದಿನಗಳ ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿಜೇತರಿಗೆ ಬಹುಮಾನ ವಿತರಣೆ ಮಾಡಿ ಮಾತನಾಡಿದರು

ಸರ್ಕಾರಿ ನೌಕರರು ವರ್ಷವಿಡೀ ಸಾರ್ವಜನಿಕ ಜನರಿಗೆ ಸರ್ಕಾರದ ಪರವಾಗಿ ಕೆಲಸ ನಿರ್ವಹಣೆ ಮಾಡುವಲ್ಲಿ ಒತ್ತಡದ ಬದುಕಿನಲ್ಲಿ ಕಚೇರಿ ಮತ್ತು ಕುಟುಂಬದ ನಿರ್ವಹಣೆಯ ಒತ್ತಡದ ನಡುವೆ ಇಂತಹ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಮಾನಸಿಕ ಆರೋಗ್ಯ ಹಾಗೂ ದೈಹಿಕ ಆರೋಗ್ಯ ಕಾಪಾಡುವಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿ ಆಗುತ್ತವೆ ಎಂದರು.

ಸಂಘದ ಜಿಲ್ಲಾಧ್ಯಕ್ಷರಾದ ವೀರೇಶ್ ಎಸ್. ಒಡೆನಪುರ ಮಾತನಾಡಿ, ಸರ್ಕಾರಿ ನೌಕರ ದಿನವಿಡೀ ಕಚೇರಿ ಕರ್ತವ್ಯದಲ್ಲಿ ಮುಳುಗಿ ಸಾಮಾನ್ಯ ಜನರಿಗೆ ಸರ್ಕಾರದ ಪರವಾಗಿ ಮಹಾತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೆ ತರುವಲ್ಲಿ ಕ್ರೀಡಾಕೂಟಗಳು ಸಹಕಾರಿಯಾಗುತ್ತವೆ. ಇದರಿಂದ ನೌಕರರ ಮಾನಸಿಕ ಆರೋಗ್ಯ ಕಾಪಾಡುವಲ್ಲಿ ಇದು ಉತ್ತಮ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಲಾಯಿತು. ಜಿಲ್ಲಾ ಖಜಾಂಚಿ ತಿಪ್ಪೇಸ್ವಾಮಿ, ರಾಜ್ಯ ಪರಿಷತ್ ಸದಸ್ಯ ಓಬಳಪ್ಪ, ಕಾರ್ಯಾಧ್ಯಕ್ಷ ಪರಶುರಾಮಪ್ಪ, ಗೌರವಾಧ್ಯಕ್ಷರಾದ ಮಾರುತಿ, ಆನಂದ ಗೌಡ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀಹರ್ಷ, ದಾವಣಗೆರೆ ಜಿಲ್ಲೆಯ ಎಲ್ಲಾ ತಾಲೂಕಿನ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದರು.