ಕ್ರೀಡೆಗಳು ಮಾನಸಿಕ, ದೈಹಿಕ ಸಮತೋಲನಕ್ಕೆ ಸಹಕಾರಿ : ಶಾಸಕ ತಮ್ಮಯ್ಯ

| Published : Sep 21 2025, 02:00 AM IST

ಕ್ರೀಡೆಗಳು ಮಾನಸಿಕ, ದೈಹಿಕ ಸಮತೋಲನಕ್ಕೆ ಸಹಕಾರಿ : ಶಾಸಕ ತಮ್ಮಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಿ ಸಮತೋಲನ ಕಂಡುಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

- ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣದಲ್ಲಿ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಿ ಸಮತೋಲನ ಕಂಡುಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್‌ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾಡಳಿತ, ಜಿಪಂ, ತಾಪಂ, ನಗರಸಭೆ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ವಿದ್ಯಾಭಾರತಿ ವಿದ್ಯಾಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.ಕ್ರೀಡೆಗಳಲ್ಲಿ ಸೋಲು ಗೆಲುವ ಸಹಜ, ಕ್ರೀಡಾ ಮನೋಭಾವದಿಂದ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದು ಮುಖ್ಯ. ಗೆದ್ದವರು ಬೀಗದೆ ಸೋತವರು ಬಾಗದೆ ಕ್ರೀಡಾ ಸಾಧನೆಗಳು ಜನರ ಮೆಚ್ಚುಗೆ ಗಳಿಸಲಿ ಎಂದು ಶುಭ ಹಾರೈಸಿದರು.ಗ್ರಾಮೀಣ ಗುಂಪು ಕ್ರೀಡೆಗಳಾದ ಖೋಖೋ, ಕಬಡ್ಡಿ, ವಾಲಿಬಾಲ್, ಥ್ರೋಬಾಲ್ ಮುಂತಾದ ಕ್ರೀಡೆಗಳು ಈ ಕ್ರೀಡಾ ಕೂಟದಲ್ಲಿ ಇದ್ದು, ಒಬ್ಬ ನಾಯಕ ಕ್ರೀಡಾಪುಟುವಿನ ಮೈ ಮರೆವು ತಂಡದ ಸೋಲಿಗೆ ಕಾರಣವಾಗುತ್ತದೆ ಎಂಬುದನ್ನು ಅರಿತು ಎಚ್ಚರಿಕೆಯಿಂದ ಆಟ ಆಡಬೇಕು ಎಂದು ಸಲಹೆ ನೀಡಿದರು.ಪಠ್ಯೇತರ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಕ್ರೀಡೆಗಳಲ್ಲಿ ಹೆಚ್ಚು ಹೆಚ್ಚು ತೊಡಗಿಸಿ ಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಆಟ ಆಡುವಾಗ ಪೋಷಕರು, ಶಿಕ್ಷಕರು, ಪ್ರೇಕ್ಷಕರು, ತೀರ್ಪುಗಾರರು ಪ್ರತಿಕ್ಷಣವನ್ನು ಗಮನಿಸುತ್ತಿದ್ದಾರೆ ಎಂಬುದನ್ನು ಅರಿಯಬೇಕೆಂದರು.ಉತ್ತಮ ಕ್ರೀಡಾಪಟುಗಳಾಗಬೇಕಾದರೆ ಪೌಷ್ಠಿಕ ಆಹಾರ, ದಿನನಿತ್ಯ ವ್ಯಾಯಾಮ ಅಭ್ಯಾಸ, ಕ್ರೀಡೆಯ ಬಗ್ಗೆ ಆಸಕ್ತಿ ಇದ್ದಾಗ ಮಾತ್ರ ಎದುರಾಳಿಯನ್ನು ಸಮರ್ಥವಾಗಿ ಎದುರಿಸಲು ಸಾಧ್ಯ ಎಂದು ಹೇಳಿದರು.ನಗರಸಭಾಧ್ಯಕ್ಷೆ ಶೀಲಾ ದಿನೇಶ್ ಮಾತನಾಡಿ, ಧೈರ್ಯದಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿ ಜಯಗಳಿಸಿ ರಾಜ್ಯ, ರಾಷ್ಟ್ರಕ್ಕೆ ಕೀರ್ತಿ ತರಬೇಕೆಂದು ಹೇಳಿದರು.ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ತೀರ್ಪುಗಾರರಿಗೆ ಗೌರವವನ್ನು ಕೊಡಬೇಕು. ಈ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಮನವಿ ಮಾಡಿದರು.ವಿದ್ಯಾಭಾರತಿ ವಿದ್ಯಾಸಂಸ್ಥೆ ಮುಖ್ಯಸ್ಥರಾದ ಡಾ. ಅಪ್ಸರ್‌ ಹಿಂದೂಸ್ಥಾನಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾಭಾರತಿ ಆಂಗ್ಲ ಮಾಧ್ಯಮ ಶಾಲೆ ಮುಖ್ಯೋಪಾಧ್ಯಯರಾದ ಶಾಹಿರಾ ಫಾತಿಮಾ, ಡಿಡಿಪಿಐ ತಿಮ್ಮರಾಜು, ಕ್ಷೇತ್ರದ ಶಿಕ್ಷಣಾಧಿಕಾರಿ ರುದ್ರಪ್ಪ, ಅಕ್ಷರ ದಾಸೋಹ ನಿರ್ದೆಶಕ ನೀಲಕಂಠಪ್ಪ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ಉಮೇಶ್, ಪ್ರಶಾಂತ್, ಜಗದೀಶ್, ವೀರೇಶ್. ಜಾನಕಮ್ಮ, ಉಪಸ್ಥಿತರಿದ್ದರು. 20 ಕೆಸಿಕೆಎಂ 3ಚಿಕ್ಕಮಗಳೂರಿನ ಜಿಲ್ಲಾ ಆಟದ ಮೈದಾನದಲ್ಲಿ ಶನಿವಾರ ನಡೆದ ತಾಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟವನ್ನು ಶಾಸಕ ಎಚ್‌.ಡಿ. ತಮ್ಮಯ್ಯ ಉದ್ಘಾಟಿಸಿದರು. ಡಿಡಿಪಿಐ ತಿಮ್ಮರಾಜು, ಬಿಇಓ ರುದ್ರಪ್ಪ, ಡಾ. ಅಫ್ಸರ್‌ ಹಿಂದೂಸ್ಥಾನಿ ಇದ್ದರು.