ಸಾರಾಂಶ
ಕ್ರೀಡೆ ಮಾನಸಿಕ, ದೈಹಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.
ಗುಂಡ್ಲುಪೇಟೆ: ಕ್ರೀಡೆ ಮಾನಸಿಕ, ದೈಹಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.
ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಕ್ರೀಡಾಜ್ಯೋತಿ ಸ್ವೀಕರಿಸಿ ಉದ್ಘಾಟಿಸಿ ಮಾತನಾಡಿ, ಪ್ರತಿಭೆಗಳನ್ನು ಗುರುತಿಸುವ ಕೆಲಸ ಆಗಬೇಕು ಆ ನಿಟ್ಟಿನಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸಬೇಕು ಎಂದರು.ವಲಯ ಮಟ್ಟದ ಕ್ರೀಡಾಕೂಟ ಕ್ರೀಡಾ ಪಟುಗಳಿಗೆ ಜಿಲ್ಲಾ,ರಾಜ್ಯ ಮತ್ತು ರಾಷ್ಟ್ರೀಯ ಮಟ್ಟಕ್ಕೆ ಹೋಗಲು ಅನುಕೂಲವಾಗಲಿದೆ.ಕ್ರೀಡೆಗಳಲ್ಲಿ ಸೋಲು,ಗೆಲುವು ಸಹಜ ಹಾಗಾಗಿ ಕ್ರೀಡೆಗಳಲ್ಲಿ ಭಾಗವಹಿಸಿ ಎಂದರು.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ(ಊಟಿ ಶಾಲೆ) ಆವರಣದಲ್ಲಿ ಕ್ರೀಡೆಗೆ ಜಾಗವಿದೆ ಈ ಶಾಲಾ ಆವರಣ ಅಭಿವೃದ್ಧಿಗೆ ಶಾಸಕರ ಅನುದಾನ ನೀಡುವುದಾಗಿ ಭರವಸೆ ನೀಡಿದರು. ಅಂತರಾಷ್ಟ್ರೀಯ ಕ್ರೀಡಾ ಪಟು ಶಿಲ್ಪ ಜತ್ತಿ ಮಾತನಾಡಿ ಕ್ರೀಡಾ ಪಟುಗಳಿಗೆ ಶುಭ ಕೋರಿದರು.ಕ್ರೀಡಾಕೂಟದಲ್ಲಿ ಪುರಸಭೆ ಅಧ್ಯಕ್ಷ ಮಧು,ಉಪಾಧ್ಯಕ್ಷ ಅಣ್ಣಯ್ಯಸ್ವಾಮಿ,ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್.ಎಸ್.ಪ್ರಸಾದ್,ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾಪತಿ,ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್.ಸ್ವಾಮಿ,ಪುರಸಭೆ ಸದಸ್ಯರಾದ ಎನ್.ಕುಮಾರ್,ಶ್ರೀನಿವಾಸ್(ಕಣ್ಣಪ್ಪ),ರಾಜಗೋಪಾಲ್,ಪುರಸಭೆ ಮಾಜಿ ಉಪಾಧ್ಯಕ್ಷ ಕಾರ್ಗಳ್ಳಿ ಸುರೇಶ್,ಮಾಜಿ ಸದಸ್ಯ ಬಸವರಾಜು ಸೇರಿದಂತೆ ಪುರಸಭೆ ಸದಸ್ಯರು,ಶಿಕ್ಷಕರು ಹಾಗು ವಿದ್ಯಾರ್ಥಿಗಳಿದ್ದರು.