ಮಾನಸಿಕ, ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ : ಡಿಸಿ ಮೀನಾ ನಾಗರಾಜ್‌

| Published : Jan 11 2025, 12:47 AM IST

ಮಾನಸಿಕ, ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ : ಡಿಸಿ ಮೀನಾ ನಾಗರಾಜ್‌
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು, ಕ್ರೀಡೆಯಲ್ಲಿ ಭಾಗವಹಿಸಿದಾಗ ಮಾನಸಿಕ ಮತ್ತು ದೈಹಿಕ ಸದೃಢತೆಗೆ ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಮೀನಾ ನಾಗರಾಜ್ ಹೇಳಿದರು.

ಗ್ರಾಮೀಣ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಕ್ರೀಡಾಕೂಟ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಕ್ರೀಡೆಯಲ್ಲಿ ಭಾಗವಹಿಸಿದಾಗ ಮಾನಸಿಕ ಮತ್ತು ದೈಹಿಕ ಸದೃಢತೆಗೆ ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಮೀನಾ ನಾಗರಾಜ್ ಹೇಳಿದರು.ನೇತಾಜಿ ಸುಭಾಷ್‌ಚಂದ್ರ ಬೋಸ್‌ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾ ಪಂಚಾಯಿತಿ ಏರ್ಪಡಿಸಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಇಂದು ನಡೆಯುತ್ತಿರುವ ಕ್ರೀಡಾಕೂಟದಲ್ಲಿ ತುಂಬಾ ಉತ್ಸಾಹದಿಂದ ಭಾಗವಹಿಸಿರುವ ಕ್ರೀಡಾಪಟುಗಳು ಇಲಾಖೆಗಳಲ್ಲಿ ನಡೆಯುವ ಕಾರ್ಯ ಚಟುವಟಿಕೆಗಳಲ್ಲಿ ಇದೇ ಉತ್ಸಾಹದಲ್ಲಿ ಇರಬೇಕು ಎಂದು ಕರೆ ನೀಡಿದರು. ಕ್ರೀಡಾ ಮನೋಭಾವ ದಿಂದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬೇಕು ಎಂದರು.ಕಳೆದ ಬಾರಿ ಆರ್‌ಡಿಪಿಆರ್‌ ಕ್ರೀಡಾಕೂಟ ಅತ್ಯಂತ ಅದ್ಧೂರಿಯಾಗಿ ನಡೆದಿತ್ತು. ಈ ಬಾರಿ ಅದಕ್ಕಿಂತ ಹೆಚ್ಚು ಉತ್ಸಾಹದಿಂದ ಭಾಗವಹಿಸಿದ್ದೀರಿ, ಸರ್ಕಾರಿ ಸೇವೆಯಲ್ಲಿ ಇರುವವರು ಇಷ್ಟು ದೊಡ್ಡ ಮಟ್ಟದಲ್ಲಿ ಕ್ರೀಡಾಪಟುಗಳು ಇದ್ದಾರೆಂದು ಭಾವಿಸಿರಲಿಲ್ಲ ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಚ್.ಎಸ್‌.ಕೀರ್ತನಾ ಮಾತನಾಡಿ, ಕಳೆದ ವರ್ಷ ಸಿಇಒ ಗೋಪಾಲಕೃಷ್ಣ ಅವರು ಹಾಕಿಕೊಟ್ಟ ಈ ಕ್ರೀಡಾಕೂಟದ ದಾರಿಯಲ್ಲೆ ಇಂದು ಅವರ ಮಾರ್ಗದರ್ಶನದಲ್ಲಿ ಸಾಗುತ್ತಿದ್ದೇವೆ. ಇದರ ಯಶಸ್ಸಿಗೆ ಶಕ್ತಿಮೀರಿ ಶ್ರಮಿಸಬೇಕೆಂದು ಹೇಳಿದರು.ಸರ್ಕಾರಿ ಕೆಲಸ ಕಾರ್ಯಗಳ ಒತ್ತಡ ಮರೆತು ತುಂಬಾ ಸಂತೋಷದಿಂದ ಈ ಕ್ರೀಡಾಕೂಟದಲ್ಲಿ ಭಾಗವಹಿಸಿ ಜಯಗಳಿಸಿ ಎಂದು ಶುಭ ಹಾರೈಸಿದರು. ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಂ ಅಮಟೆ ಮಾತನಾಡಿ, ಕ್ರೀಡಾಕೂಟಗಳು ಒಂದು ತಂಡದ ಕ್ರಿಯಾಶೀಲ ಚಟುವಟಿಕೆಗೆ ಪೂರಕವಾಗಿದ್ದು, ಈ ಸಂದರ್ಭದಲ್ಲಿ ಮಕ್ಕಳ ಮನಸ್ಸಿನ ರೀತಿ ಕ್ರೀಡೆಗಳಲ್ಲಿ ಭಾಗವಹಿಸಿ ಎಂದು ಕಿವಿಮಾತು ಹೇಳಿದರು.ಕ್ರೀಡೆಯಲ್ಲಿ ಮಾತ್ರ ಆಸಕ್ತಿಯಿಂದ ಸ್ಪರ್ಧೆ ಮಾಡಬೇಕು. ಬೇರೆಯವರ ಬಗ್ಗೆ ಗಮನಹರಿಸದೆ ಎಲ್ಲರೂ ಸೇರಿ ಒಟ್ಟಿಗೆ ಕೆಲಸ ಮಾಡಲು ತಂಡ ಬೇಕು. ಅದಕ್ಕಾಗಿ ಈ ಕ್ರೀಡಾಕೂಟ ಆಯೋಜಿಸಿದ್ದಾರೆ. ಇದೇ ಸ್ಪೂರ್ತಿಯಿಂದ ಆಟ ಆಡಿ ಜಿಲ್ಲೆ, ತಾಲೂಕು, ಹೋಬಳಿಗಳಿಗೆ ಹೆಸರು ಕೀರ್ತಿ ತನ್ನಿ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಜಿಪಂ ಉಪ ಕಾರ್ಯದರ್ಶಿ(ಅಭಿವೃದ್ಧಿ) ಕೃಷ್ಣನಾಯಕ್, ಉಪ ಕಾರ್ಯದರ್ಶಿ (ಆಡಳಿತ) ಎಸ್‌.ಜಿ. ಕೋರವರ್‌, ಮುಖ್ಯ ಲೆಕ್ಕಾಧಿಕಾರಿ ಶಿವಕುಮಾರ್, ಮುಖ್ಯ ಯೋಜನಾಧಿಕಾರಿ ರಾಜಗೋಪಾಲ್‌, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಂಜುನಾಥ್, ಯೋಜನಾ ನಿರ್ದೇಶಕರಾದ ನಯನ ಉಪಸ್ಥಿತರಿದ್ದರು. 10 ಕೆಸಿಕೆಎಂ 2ಜಿಲ್ಲಾ ಆಟದ ಮೈದಾನದಲ್ಲಿ ನಡೆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಕ್ರೀಡಾಕೂಟವನ್ನು ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಉದ್ಘಾಟಿಸಿದರು ಎಸ್ಪಿ ಡಾ. ವಿಕ್ರಂ ಅಮಟೆ, ಜಿಪಂ ಸಿಇಒ ಕೀರ್ತನಾ ಇದ್ದರು.