ದೈಹಿಕ, ಮಾನಸಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ: ಎಸ್.ವ್ಹಿ. ಧರಣಾ

| Published : Aug 27 2024, 01:35 AM IST

ಸಾರಾಂಶ

ಕ್ರೀಡೆ ಪ್ರತಿಯೊಬ್ಬ ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದೆ.

ಹಿರಿಯ ಪ್ರಾಥಮಿಕ ಶಾಲೆಗಳ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ

ಕನ್ನಡಪ್ರಭ ವಾರ್ತೆ ಯಲಬುರ್ಗಾ

ಕ್ರೀಡೆ ಪ್ರತಿಯೊಬ್ಬ ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಕಾರಿ ಎಂದು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ವ್ಹಿ. ಧರಣಾ ಹೇಳಿದರು.

ತಾಲೂಕಿನ ವಣಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆ ಮತ್ತು ಗ್ರಾಪಂ ವತಿಯಿಂದ ನಡೆದ ಗುನ್ನಾಳ-ಬೇವೂರು ಹಿರಿಯ ಪ್ರಾಥಮಿಕ ಶಾಲೆಗಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಮಾತನಾಡಿದ ಅವರು, ಸದೃಢ ಆರೋಗ್ಯಕ್ಕೆ ಕ್ರೀಡೆ ಅತ್ಯವಶ್ಯವಾಗಿದೆ ಎಂದರು.

ವಿದ್ಯಾರ್ಥಿಗಳು ಅಭ್ಯಾಸದ ಜತೆಗೆ ಕ್ರೀಡೆಗೊ ಹೆಚ್ಚು ಮಹತ್ವ ನೀಡಬೇಕು. ನಮ್ಮ ದೈನಂದಿನ ಜೀವನದಲ್ಲಿ ಕೆಲ ಸಮಯವನ್ನು ಕ್ರೀಡೆಗೆ ಮೀಸಲು ಇಡುವುದರಿಂದ ಸಮತೋಲನದ ಆರೋಗ್ಯ ಕಾಪಾಡಿಕೊಳ್ಳಬಹುದು. ಸೋಲು-ಗೆಲುವಿಗಿಂತ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿ ಕಡೆಗೆ ಗಮನಹರಿಸಬೇಕು ಎಂದು ಹೇಳಿದರು.

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೈ.ಜಿ. ಪಾಟೀಲ್ ಹಾಗೂ ಎನ್.ಪಿ.ಎಸ್. ಸಂಘದ ಅಧ್ಯಕ್ಷ ಸಿದ್ಲಿಂಗಪ್ಪ ಶ್ಯಾಗೋಟಿ ಮಾತನಾಡಿ, ಕ್ರೀಡಾಕೂಟಗಳು ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಲು ಮುಖ್ಯ ವೇದಿಕೆಯಾಗಿವೆ. ಕ್ರೀಡಾಪಟುಗಳು ನಿರ್ಣಾಯಕರ ತೀರ್ಪುನ್ನು ಆತ್ಮಸಾಕ್ಷಿಯಾಗಿ ಗೌರವಿಸಿ ಉತ್ತಮ ಸಾಧನೆ ಮಾಡಬೇಕು ಎಂದರು.

ಗ್ರಾಪಂ ಅಧ್ಯಕ್ಷೆ ಸುನಂದಾ ಬಸಪ್ಪ ಭಜಂತ್ರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎಸ್‌ಡಿಎಂಸಿ ಅಧ್ಯಕ್ಷ ಖಾಜಾಸಾಬ ಕಬ್ಬಿಣದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭ ಗ್ರಾಪಂ ಉಪಾಧ್ಯಕ್ಷ ಬಸವರಾಜ ರ‍್ಯಾವಣಕಿ, ಕಾರ್ಯದರ್ಶಿ ಉಮೇಶ್ ಜೂಲಕಟ್ಟಿ, ಸದಸ್ಯ ಗುರುಸಿದ್ದಯ್ಯ ಹಿರೇಮಠ, ದೈಹಿಕ ಶಿಕ್ಷಣಾಧಿಕಾರಿ ವೀರಭದ್ರಪ್ಪ ಅಂಗಡಿ, ಮುಖ್ಯಶಿಕ್ಷಕ ದಯಾನಂದ ಹಿರೇಮಠ, ಶಿಕ್ಷಕರಾದ ಶರಣಯ್ಯ ಸರಗಣಾಚಾರ, ಮೆಹಬೂಬ ಬಾದಶಹ, ಬಸವರಾಜ ಮುಳಗುಂದ, ಮಹಾಂತೇಶ ಹಿರೇಮಠ, ಟಿ. ಪರಶುರಾಮ ಸೇರಿದಂತೆ ಗ್ರಾಮಸ್ಥರು, ಯುವಕರು ಸೇರಿದಂತೆ ಇದ್ದರು.