ಕ್ರೀಡೆಯು ದೈಹಿಕ, ಮಾನಸಿಕ ಬೆಳವಣಿಗೆ ಸಹಕಾರಿ

| Published : Jul 26 2024, 01:31 AM IST

ಸಾರಾಂಶ

ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಿರಿಯ ಪ್ರಾಥಮಿಕ, ಪ್ರೌಢಶಾಲೆಗಳ ಮಂಗಲ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕೆಂಪನಪುರ ಗ್ರಾಪಂ ಅಧ್ಯಕ್ಷ ಆರ್.ಮಾದೇಶ್ ಗುಂಡು ಎಸೆಯುವ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಕ್ರೀಡೆಯು ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದು ರೋಟರಿ ಸಂಸ್ಥೆ ಮಾಜಿ ಅಧ್ಯಕ್ಷ ಕೆಂಪನ ಪುರ ಮಹದೇವಸ್ವಾಮಿ ಹೇಳಿದರು.

ನಗರದ ಡಾ.ಬಿ.ಆ‌ರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಪಂ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆದ ಹಿರಿಯ ಪ್ರಾಥಮಿಕ, ಪ್ರೌಢಶಾಲೆಗಳ ಮಂಗಲ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಅವರು ಮಾತನಾಡಿದರು.

ಸರ್ಕಾರಿ ಶಾಲೆ ಎಂದರೆ ಮೂಗು ಮುರಿವಂತಹದಲ್ಲ. ಕೆಂಪನಪುರ, ಮಂಗಲ, ಅಮಚವಾಡಿ, ಹರವೆ, ನಂಜದೇವನಪುರ ಸರ್ಕಾರಿ ಶಾಲೆಗಳು ತುಂಬಾ ಪ್ರಸಿದ್ಧಿ ಪಡೆದಿವೆ. ಶಿಕ್ಷಕರು ಕೂಡ ಶ್ರಮವಹಿಸಿ ಸರ್ಕಾರಿ ಶಾಲೆಯಲ್ಲೂ ಗುಣಮಟ್ಟದ ಶಿಕ್ಷಣ ಕೊಡಲು ಶ್ರಮಿಸುತ್ತಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ಸಿಗುತ್ತಿದೆ ಎಂದು ಕ್ರೀಡಾಕೂಟದಲ್ಲಿ ಭಾಗವಹಿಸಿರುವ ಮಕ್ಕಳಿಗೆ ಶುಭ ಕೋರಿದರು. ಕೆಂಪನಪುರ ಗ್ರಾಪಂ ಅಧ್ಯಕ್ಷ ಆರ್.ಮಾದೇಶ್ ಕಾರ್ಯಕ್ರಮ ಉದ್ಘಾಟಿಸಿದರು.

ಮಂಗಲ ಗ್ರಾಪಂ ಅಧ್ಯಕ್ಷ ಅಣ್ಣಪ್ಪಸ್ವಾಮಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಹದೇವಸ್ವಾಮಿ, ಗ್ರಾಪಂ ಸದಸ್ಯ ಪ್ರಕಾಶ್, ಕೆಂಪನಪುರ ಪಿಎಸಿಸಿ ಬ್ಯಾಂಕ್ ಅಧ್ಯಕ್ಷ ಶಿವಶಂಕರಪ್ಪ, ಇಸಿಒ ರೇವಣ್ಣ, ತಾಲೂಕು ನಾಯಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕಣ್ಣೆಗಾಲ ಶಿವಕುಮಾರ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಕೆ.ರಾಮಸ್ವಾಮಿ, ಪ್ರಧಾನ ಕಾರ್ಯದರ್ಶಿ ಸುಧಾ, ಮುಖ್ಯ ಶಿಕ್ಷಕ ದಾಸೇಗೌಡ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಚಿಕ್ಕಬಸವಯ್ಯ, ದೈಹಿಕ ಶಿಕ್ಷಣ ಶಿಕ್ಷಕ ಶಿವಮಲ್ಲು, ರವಿಕುಮಾರ್, ಶಿವಕುಮಾರ್, ಆನಂದ್, ಸಿದ್ದ ಮಲ್ಲಪ್ಪ ಮತ್ತಿತರರಿದ್ದರು