ದೈಹಿಕ, ಮಾನಸಿಕ ದೃಢತೆಗೆ ಕ್ರೀಡೆ ಸಹಕಾರಿ: ಮಂಜುನಾಥನ್ ಎಂ.ಜಿ.

| Published : Oct 31 2025, 03:15 AM IST

ಸಾರಾಂಶ

ಸರ್ಕಾರಿ ಪ್ರೌಢಶಾಲೆ ಕಡೇಶಿವಾಲಯ ನೇತೃತ್ವದಲ್ಲಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಮಾಣಿ ಸಹಕಾರದೊಂದಿಗೆ ನಡೆದ 1-17 ರಾ ವಯೋಮಾನದ ಕಲ್ಲಡ್ಕ ವಲಯ ಮಟ್ಟದ ಕ್ರೀಡಾಕೂಟ - 2025ಕ್ಕೆ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ನಡೆಯಿತು.

ಬಂಟ್ವಾಳ: ಕ್ರೀಡೆಗಳು ಕಲಿಕೆಯಲ್ಲಿ ಆಸಕ್ತಿಯನ್ನು ಮೂಡಿಸುದರ ಜೊತೆಗೆ ದೈಹಿಕ ಮತ್ತು ಮಾನಸಿಕ ದೃಢತೆಯನ್ನು ಉಂಟುಮಾಡುತ್ತದೆ ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ. ಹೇಳಿದ್ದಾರೆ.

ಗುರುವಾರ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ಸರ್ಕಾರಿ ಪ್ರೌಢಶಾಲೆ ಕಡೇಶಿವಾಲಯ ನೇತೃತ್ವದಲ್ಲಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಮಾಣಿ ಸಹಕಾರದೊಂದಿಗೆ ನಡೆದ 1-17 ರಾ ವಯೋಮಾನದ ಕಲ್ಲಡ್ಕ ವಲಯ ಮಟ್ಟದ ಕ್ರೀಡಾಕೂಟ - 2025ಕ್ಕೆ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಕಡೇಶಿವಾಲಯ ಗ್ರಾ.ಪಂ. ಅಧ್ಯಕ್ಷೆ ಭಾರತಿ ಎಸ್ ರಾವ್ ಅಧ್ಯಕ್ಷತೆ ವಹಿಸಿ ಪಥಸಂಚಲನದ ಗೌರವಂದನೆ ಸ್ವೀಕರಿಸಿ ಮಾತನಾಡಿದರು.

ಮಾಣಿ ಆಂಗ್ಲ ಮಾಧ್ಯಮ ಶಾಲಾ ಸಂಚಾಲಕ ಪ್ರಹ್ಲಾದ ಜಿ ಶೆಟ್ಟಿ ಕ್ರೀಡಾಜ್ಯೋತಿ ಸ್ವೀಕರಿಸಿ, ದೀಪ ಪ್ರಜ್ವಲನ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು.ಬಂಟ್ವಾಳ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಆಶಾ ನಾಯಕ್ ಪ್ರಾಸ್ತಾವಿಕ ಮಾತನಾಡಿದರು.

ವಿದ್ಯಾರ್ಥಿನಿ ಸಾನ್ವಿ ಕ್ರೀಡಾ ಪ್ರತಿಜ್ಞೆ ಬೋಧಿಸಿದರು. ಕ್ರೀಡಾ ಕೂಟ ನಡೆಸಲು ಸ್ಥಳಾವಕಾಶ ಒದಗಿಸಿ ಕೊಟ್ಟ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲಾ ಸಂಚಾಲಕರನ್ನು ಕಡೇಶಿವಾಲಯ ಶಾಲೆ ವತಿಯಿಂದ ಗೌರವಿಸಲಾಯಿತು.

ಕಡೇಶಿವಾಲಯ ಗ್ರಾ.ಪಂ. ಉಪಾಧ್ಯಕ್ಷ ಸುರೇಶ್ ಕೆ, ಸದಸ್ಯರಾದ ಶೀನ ನಾಯ್ಕ, ಪ್ರಮೀಳಾ, ವಶೀತ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸುಂದರ ಪೂಜಾರಿ, ಸದಸ್ಯರಾದ ಗಿರಿಯಪ್ಪ ಗೌಡ, ಮಾಣಿ ಗ್ರಾಮ ಪಂಚಾಯಿತಿ ಸದಸ್ಯ ಇಬ್ರಾಹಿಂ, ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲಾ ಕಾರ್ಯದರ್ಶಿ ಮಹೇಶ್ ಶೆಟ್ಟಿ, ಕ್ಲಸ್ಟರಿನ ಸಿಆರ್‌ಪಿಗಳಾದ ಸುಧಾಕರ್ ಭಟ್, ಜ್ಯೋತಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾರಾಯಣ, ಕಾರ್ಯದರ್ಶಿ ಸಂಪತ್, ನಿವೃತ್ತ ದೈಹಿಕ ಶಿಕ್ಷಕ ಶಂಕರ್, ಕಲ್ಲಡ್ಕ ವಲಯ ಕ್ರೀಡಾಕೂಟ ನೋಡಲ್ ಅಧಿಕಾರಿ ಜಗದೀಶ್, ಸಹ ನೋಡಲ್ ಪ್ರಕಾಶ್ ಟಿ, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದ ಕಾರ್ಯದರ್ಶಿ ಭಾಸ್ಕರ್ ನಾಯ್ಕ, ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲಾ ಮುಖ್ಯಶಿಕ್ಷಕಿ ಸುಪ್ರಿಯಾ ಡಿ., ದೈಹಿಕ ಶಿಕ್ಷಕ ದಿನಕರ ಪೂಜಾರಿ ಮತ್ತಿತರರಿದ್ದರು.

ವಿದ್ಯಾರ್ಥಿ ಹರ್ಷಿತ್ ಜಿ ಪ್ರಾರ್ಥಿಸಿದರು. ಕಡೇಶಿವಾಲಯ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಲೋಕಾನಂದ ಎನ್. ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಚೇತನ ವಾಣಿ ವಂದಿಸಿದರು. ಸಹ ಶಿಕ್ಷಕಿ ಗೀತಾ ಕುಮಾರಿ ನಿರೂಪಿಸಿದರು.