ಸಾರಾಂಶ
ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ ಪ್ರೋತ್ಸಾಹ ನೀಡುವ ಕಾಯಕದಲ್ಲಿ ವಲಯ ಮಟ್ಟದ ಕ್ರೀಡಾಕೂಟಗಳು ಉತ್ತಮ ವೇದಿಕೆಯಾಗಿವೆ.
ಕನ್ನಡಪ್ರಭ ವಾರ್ತೆ ಯಲಬುರ್ಗಾ
ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ ಪ್ರೋತ್ಸಾಹ ನೀಡುವ ಕಾಯಕದಲ್ಲಿ ವಲಯ ಮಟ್ಟದ ಕ್ರೀಡಾಕೂಟಗಳು ಉತ್ತಮ ವೇದಿಕೆಯಾಗಿವೆ ಎಂದು ಗೆದಗೇರಿ ಗ್ರಾಪಂ ಅಧ್ಯಕ್ಷ ಶರಣಪ್ಪ ಕೊಪ್ಪದ ಹೇಳಿದರು.ತಾಲೂಕಿನ ತಲ್ಲೂರ ಗ್ರಾಮದಲ್ಲಿ ೨೦೨೪ನೇ ಸಾಲಿನ ವಜ್ರಬಂಡಿ ಹಾಗೂ ಹೀರೆಅರಳಿಹಳ್ಳಿ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಮತ್ತು ಕ್ರೀಡಾ ಮನೋಭಾವ ಬೆಳೆಸಲು ಹೆಚ್ಚು ಸಹಕಾರಿಯಾಗಿವೆ ಎಂದರು.
ಪ್ರತಿಯೊಬ್ಬ ವಿದ್ಯಾರ್ಥಿಗಳು ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳಬೇಕು. ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯವಾಗಿದೆ. ವಿದ್ಯಾರ್ಥಿಗಳು ಅಭ್ಯಾಸದ ಜೊತೆಗೆ ಕ್ರೀಡಾಕೂಟಗಳಲ್ಲಿ ಭಾಗಿಯಾಗುವುದರಿಂದ ದೈಹಿಕ, ಶಾರೀರಿಕವಾಗಿ ಸಧೃಢವಾಗಲು ಸಾಧ್ಯ ಎಂದು ಹೇಳಿದರು.ದೈಹಿಕ ಶಿಕ್ಷಣಾಧಿಕಾರಿ ವೀರಭದ್ರಪ್ಪ ಅಂಗಡಿ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ವಿದ್ಯಾರ್ಥಿಗಳು ಸದಾ ಚಟುವಟಿಕೆಗಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಕಾಂಗ್ರೆಸ್ ಯುವ ಮುಖಂಡ ಈಶ್ವರ ಅಟಮಾಳಗಿ ಮಾತನಾಡಿ, ಕ್ರೀಡೆಯಿಂದ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗುವ ಮೂಲಕ ದೈಹಿಕ, ಮಾನಸಿಕ ನೆಮ್ಮದಿಗೆ ಕ್ರೀಡೆ ಹಾಗೂ ಯೋಗದ ಅವಶ್ಯಕತೆ ಇದೆ ಎಂದು ಹೇಳಿದರು.ನೌಕರರ ಸಂಘದ ಎಸ್.ವ್ಹಿ. ಧರಣಾ, ವೈ.ಜಿ. ಪಾಟೀಲ್ ಸೇರಿದಂತೆ ಇತರರು ಮಾತನಾಡಿದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಯುವಕರು, ಕ್ರೀಡಾಪಟುಗಳು ಕ್ರೀಡಾಜ್ಯೋತಿಯನ್ನು ಅದ್ಧೂರಿಯಾಗಿ ಮೆರವಣಿಗೆ ಮಾಡಿದರು.
ಅತಿಥಿಗಳಾಗಿ ತಾಪಂ ಮಾಜಿ ಸದಸ್ಯ ಓಬಳೇಪ್ಪ ಕುಲಕರ್ಣಿ, ಗ್ರಾಪಂ ಸದಸ್ಯರಾದ ನಾಗರಾಜ, ಶರಣಪ್ಪ ತೋಟದ, ಶಾಲೆಯ ಮುಖ್ಯ ಶಿಕ್ಷಕಿ ಶಾಂತಾ ಜಂತ್ಲಿ, ಸಿಆರ್‌ಪಿ ರಾಜಮಹ್ಮದ ಬಾಳಿಕಾಯಿ, ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಸಿದ್ದಲಿಂಗಪ್ಪ ಶ್ಯಾಗೋಟಿ, ನಿರ್ಗಮಿತ ಸಹ ಶಿಕ್ಷಕರಾದ ಶಿಲ್ಪಾ ಸಾತಪೂತೆ, ಶೋಭಾ ಕಳ್ಳಿಮನಿ, ಅಂದಾನಯ್ಯ ಹೀರೆಮಠ, ಹನುಮಂತ ಕುದರಿಕೋಟಗಿ, ದೇವಪ್ಪ ಅರುಣಸಿ, ಕಳಕಪ್ಪ ಅಂಗಡಿ, ಎಸ್‌ಡಿಎಂಸಿ ಅಧ್ಯಕ್ಷ ಲಕ್ಷ್ಮಣ್ಣ ವಿಲಾಯಿತಿ ಮತ್ತಿತರರು ಇದ್ದರು.