ಹಗರಿಬೊಮ್ಮನಹಳ್ಳಿ: ಯುವ ಜನತೆ ಮೊಬೈಲ್ ದಾಸ್ಯದಿಂದ ಹೊರ ಬಂದು ನಾನಾ ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಮೂಲಕ ದೈಹಿಕ ಕ್ಷಮತೆ ಹೆಚ್ಚಿಸಲು ಮುಂದಾಗಬೇಕು ಎಂದು ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಮಾಜಿ ಅಧ್ಯಕ್ಷ ಅಶೋಕ್ ಭೀಮಾನಾಯ್ಕ ಕಿವಿಮಾತು ಹೇಳಿದರು.
ತಾಲೂಕಿನ ತಂಬ್ರಹಳ್ಳಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜನ್ಮ ದಿನದ ಅಂಗವಾಗಿ ಬ್ಲಾಕ್ ಕಾಂಗ್ರೆಸ್ ಶುಕ್ರವಾರ ಆಯೋಜಿಸಿದ್ದ ತಾಲೂಕು ಮಟ್ಟದ ಕ್ರಿಕೆಟ್ ಟೂರ್ನಿ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಜನ್ಮ ದಿನದ ನಿಮಿತ್ತ ಗ್ರಾಮದ ಪ್ರಮುಖ ಬೀದಿಗಳಲ್ಲಿ ೫೦೦ಕ್ಕೂ ಹೆಚ್ಚು ಸಸಿಗಳನ್ನು ನೆಡುವ ಮೂಲಕ ಗ್ರಾಮಸ್ಥರಲ್ಲಿ ಪರಿಸರ ಜಾಗೃತಿ ಮೂಡಿಸಲಾಗಿದೆ. ಪರಿಸರದ ರಕ್ಷಣೆ ಪ್ರತಿಯೊಬ್ಬರ ಹೊಣೆಗಾರಿಕೆಯಾಗಿದೆ ಎಂದು ತಿಳಿಸಿದರು.
ತಾಲೂಕಿನ ನಾನಾ ಗ್ರಾಮಗಳಿಂದ ಆಗಮಿಸಿದ್ದ ೨೩ ತಂಡಗಳು ಟೂರ್ನಮೆಂಟ್‌ನಲ್ಲಿ ಭಾಗವಹಿಸಿದ್ದವು. ಜಿಪಂ ಮಾಜಿ ಸದಸ್ಯ ಅಕ್ಕಿ ತೋಟೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೋರಿ ಗೋಣಿಬಸಪ್ಪ, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಗುರುಬಸವರಾಜ ಸೊನ್ನದ, ಸದಸ್ಯ ಗೌರಜ್ಜನವರ ಗಿರೀಶ್, ಬಳ್ಳಾರಿ ಸಹಕಾರಿ ಯೂನಿಯನ್ ನಿರ್ದೆಶಕ ವೈ.ಸುರೇಶ್, ಪುರಸಭೆ ಸದಸ್ಯ ಉಪ್ಪಾರ ಬಾಳಪ್ಪ, ಬಡಲಡಕಿ ನಾಗರಾಜ್ ಹಾಗೂ ರೆಡ್ಡಿ ಮಂಜುನಾಥ್ ಪಾಟೀಲ್ ಇದ್ದರು.ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿಯಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಕ್ರಿಕೆಟ್ ಟೂರ್ನಮೆಂಟ್‌ನ್ನು ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಮಾಜಿ ಅಧ್ಯಕ್ಷ ಅಶೋಕ್ ಭೀಮಾನಾಯ್ಕ ಚಾಲನೆ ನೀಡಿದರು.