ಸಾರಾಂಶ
ಕನ್ನಡಪ್ರಭ ವಾರ್ತೆ ಪಾಂಡವಪುರ
ದೈಹಿಕ ಸದೃಢತೆ ಹಾಗೂ ಆರೋಗ್ಯ ವೃದ್ಧಿಗೆ ಕ್ರೀಡೆ ಸಹಕಾರಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರವಿಕುಮಾರ್ ತಿಳಿಸಿದರು.ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯ್ತಿ, ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಜಿಲ್ಲಾ ಶಾಲಾ ಶಿಕ್ಷಕರ ಸಂಘದ ಆಶ್ರಯದಲ್ಲಿ ನಡೆದ 2024-25ನೇ ಸಾಲಿನ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾ ಕೂಟವನ್ನು ಗುಂಡು ಎಸೆಯುವ ಮೂಲಕ ಉದ್ಘಾಟಿಸಿ ಮಾತನಾಡಿ, ದೈಹಿಕ ಶಿಕ್ಷಣ ಶಿಕ್ಷಕರು ಈ ಹಿಂದೆ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತಿರಲಿಲ್ಲ. ಆದರೆ, ರಾಷ್ಟ್ರ ಮಟ್ಟದಲ್ಲಿ ಸ್ಥಾನಮಾನ ದೊರಕುತ್ತಿದೆ. ಆದ್ದರಿಂದ ದೈಹಿಕ ಶಿಕ್ಷಕರು ಶಿಸ್ತುಬದ್ಧವಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.
ಮಂಡ್ಯ ಜಿಲ್ಲಾದ್ಯಂತ ಆಗಮಿಸಿದ್ದ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಶಿಕ್ಷಕಿಯರು ವಾಲಿಬಾಲ್, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್, ಶಾಟ್ ಪುಟ್, ರನ್ನಿಂಗ್ ಹಾಗೂ ಡಿಸ್ಕಸ್ ಥ್ರೋ ಕ್ರೀಡೆಯಲ್ಲಿ ಭಾಗವಹಿಸಿದ್ದರು.ಸಮಾರಂಭದಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಮಂಡ್ಯ ಉತ್ತರದ ವಿಜಯಕುಮಾರ್, ಮಂಡ್ಯ ದಕ್ಷಿಣದ ಪೂವಯ್ಯ, ಮದ್ದೂರು ಮಹದೇವು, ನಾಗಮಂಗಲ ಸುರೇಶ್, ಪಾಂಡವಪುರ ಮಾದೇಶ್, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ಶಿವಕುಮಾರ್, ದೈಹಿಕ ಶಿಕ್ಷಣ ಶಿಕ್ಷಕರಾದ ಬೀರಶೆಟ್ಟಹಳ್ಳಿ ಪೈಲ್ವಾನ್ ದಿವಾಕರ್, ಕಡತನಾಳು ಶ್ರೀನಿವಾಸ್, ಪಾರ್ಥೇಗೌಡ, ಎ.ಪಿ.ಪ್ರಕಾಶ್, ನಾಗಮಂಗಲ ರತ್ನಮ್ಮ, ಮಂಡ್ಯ ಅಶೋಕ, ಪಾಂಡವಪುರ ಯೋಗೇಶ್ ಇತರರು ಉಪಸ್ಥಿತರಿದ್ದರು.