ಸಾರಾಂಶ
ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಕ್ರೀಡೆ ಸಹಕಾರಿ. ಸ್ಪರ್ಧಾತ್ಮಕ ಮನೋಭಾವ ಮಾತ್ರ ನಮ್ಮನ್ನು ಈ ಜಗತ್ತಿನಲ್ಲಿ ಬೆಳೆಸಬಲ್ಲದು.
ಯಲ್ಲಾಪುರ: ದೈಹಿಕ ಮತ್ತು ಮಾನಸಿಕ ಸಶಕ್ತತೆಗೆ ಕ್ರೀಡೆ ಅತ್ಯಂತ ಸಹಕಾರಿಯಾಗಿದ್ದು, ನಾವು ಸಾಧ್ಯವಿದ್ದಷ್ಟು ಹೆಚ್ಚಿನ ಪ್ರಮಾಣದಲ್ಲಿ ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದು ತಾಲೂಕು ಶಿಕ್ಷಣಾಧಿಕಾರಿ ಎನ್.ಆರ್. ಹೆಗಡೆ ಹೇಳಿದರು.
ಗುರುವಾರ ತಾಲೂಕಿನ ವಜ್ರಳ್ಳಿಯ ಸರ್ವೋದಯ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಲಯ ಮಟ್ಟದ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.ದೈಹಿಕ ಶ್ರಮ ವ್ಯಕ್ತಿಯನ್ನು ಸಬಲರನ್ನಾಗಿ ಮಾಡುತ್ತದೆ. ಗ್ರಾಮೀಣ ಭಾಗದಲ್ಲಿ ಜಾನಪದ ಕ್ರೀಡಾಕೂಟಗಳು ಕ್ಷೀಣಿಸುತ್ತಿರುವುದು ವಿಷಾದದ ಸಂಗತಿ. ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಕ್ರೀಡೆ ಸಹಕಾರಿ. ಸ್ಪರ್ಧಾತ್ಮಕ ಮನೋಭಾವ ಮಾತ್ರ ನಮ್ಮನ್ನು ಈ ಜಗತ್ತಿನಲ್ಲಿ ಬೆಳೆಸಬಲ್ಲದು. ನಿತ್ಯವೂ ಆಟೋಟಗಳಲ್ಲಿ ಭಾಗವಹಿಸುವವರು ಆರೋಗ್ಯವಂತರಾಗಿರುತ್ತಾರೆ ಎಂದರು.
ಗ್ರಾಪಂ ಅಧ್ಯಕ್ಷ ಭಗೀರಥ ನಾಯ್ಕ ಕ್ರೀಡಾ ಜ್ಯೋತಿ ಬೆಳಗಿದರು. ಸಮಾರಂಭದ ಅಧ್ಯಕ್ಷತೆಯನ್ನು ಸರ್ವೋದಯ ಶಿಕ್ಷಣ ಸಮಿತಿಯ ಸದಸ್ಯ ಅಪ್ಪಣ್ಣ ಭಟ್ಟ ಬೆಣ್ಣೆಜಡ್ಡಿ ವಹಿಸಿದ್ದರು. ಅತಿಥಿಗಳಾಗಿ ದೈಹಿಕ ಶಿಕ್ಷಣ ಪರಿವೀಕ್ಷಕ ಎಂ.ಎನ್. ತಾರೀಕೊಪ್ಪ, ಸರ್ವೋದಯ ಸಂಸ್ಥೆಯ ಉಪಾಧ್ಯಕ್ಷ ಟಿ.ಸಿ. ಗಾಂವ್ಕರ್, ಹಿರಿಯರಾದ ಜಿ.ಎನ್. ಕೋಮಾರ ಉಪಸ್ಥಿತರಿದ್ದರು.ಶಿಕ್ಷಕ ಎಸ್.ಟಿ. ಬೇವಿನಕಟ್ಟಿ ಸ್ವಾಗತಿಸಿದರು. ದೈಹಿಕ ಶಿಕ್ಷಕ ವಿನೋದ ಗಾಯನ್ನನವರ ಪ್ರತಿಜ್ಞಾ ವಿಧಿ ಬೋಧಿಸಿದರು. ಚಿದಾನಂದ ಹಳ್ಳಿ ನಿರ್ವಹಸಿದರು. ಗಿರೀಶ್ ಹೆಬ್ಬಾರ್ ವಂದಿಸಿದರು.