ಕ್ರೀಡೆಯು ಶಕ್ತಿ, ಒಗ್ಗಟ್ಟಿನ ಪ್ರದರ್ಶನ: ಕಲ್ಲಡ್ಕ ಪ್ರಭಾಕರ ಭಟ್

| Published : Oct 19 2024, 12:26 AM IST

ಕ್ರೀಡೆಯು ಶಕ್ತಿ, ಒಗ್ಗಟ್ಟಿನ ಪ್ರದರ್ಶನ: ಕಲ್ಲಡ್ಕ ಪ್ರಭಾಕರ ಭಟ್
Share this Article
  • FB
  • TW
  • Linkdin
  • Email

ಸಾರಾಂಶ

ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ವಠಾರದಲ್ಲಿ ಅ.೧೬ರಿಂದ ೧೯ರ ತನಕ ನಡೆಯಲಿರುವ ವಿದ್ಯಾಭಾರತಿ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಕ್ರೀಡಾಕೂಟವನ್ನು ಕಲ್ಲಡ್ಕ ಪ್ರಭಾಕರ ಭಟ್‌ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಪುತ್ತೂರು

ಯುವ ಶಕ್ತಿ ಕ್ರೀಡೆಗಳಲ್ಲೂ ಹೆಚ್ಚು ತೊಡಗಿಸಿಕೊಳ್ಳುವ ಮೂಲಕ ವಿಶ್ವಗುರು ಸ್ಥಾನಕ್ಕೇರುವ ಭಾರತ ದೇಶವನ್ನು ಸದೃಢಗೊಳಿಸಬೇಕು. ಕ್ರೀಡೆಯು ಶಕ್ತಿ ಹಾಗೂ ಒಗ್ಗಟ್ಟಿನ ಪ್ರದರ್ಶನವಾಗಿದ್ದು, ಪ್ರತಿಯೊಬ್ಬರು ಸ್ಫೂರ್ತಿಯಿಂದ ಭಾಗವಹಿಸಬೇಕು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದರು.

ತೆಂಕಿಲ ವಿವೇಕಾನಂದ ಅಂಗ್ಲ ಮಾಧ್ಯಮ ಶಾಲೆಯ ಕ್ಯಾಂಪಸ್‌ನಲ್ಲಿ ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನಮ್, ವಿದ್ಯಾಭಾರತಿ ಕರ್ನಾಟಕ ಮತ್ತು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ವಠಾರದಲ್ಲಿ ಅ.೧೬ರಿಂದ ೧೯ರ ತನಕ ನಡೆಯಲಿರುವ ವಿದ್ಯಾಭಾರತಿ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಕ್ರೀಡಾಕೂಟವನ್ನು ಬುಧವಾರ ಸಂಜೆ ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ವಿದ್ಯಾಭಾರತಿ ಕರ್ನಾಟಕ ಅಧ್ಯಕ್ಷ ಪರಮೇಶ್ವರ ಮಾತನಾಡಿ, ಕ್ರೀಡೆಯಲ್ಲಿ ಸೋಲು ಮತ್ತು ಗೆಲುವು ಸಾಮಾನ್ಯ. ಆದರೆ ಕ್ರೀಡಾ ಸ್ಫೂರ್ತಿಯಲ್ಲಿ ಭಾಗವಹಿಸುವುದು ಮುಖ್ಯವಾಗಿದೆ. ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಗೆಲುವಿನ ಗುರಿಯೊಂದಿಗೆ ಸ್ಪರ್ಧಿಸಬೇಕು. ಸೋತವರು ಧೃತಿಗೆಡದೆ ಮುಂದಿನ ಬಾರಿ ಗೆಲ್ಲಲು ಪ್ರಯತ್ನ ಪಡಬೇಕು ಎಂದು ತಿಳಿಸಿದರು.

ಪದ್ಮಲಕ್ಷ್ಮೀ ಉದ್ಘಾಟನಾ ಮಂತ್ರ ಪಠಿಸಿದರು. ವಿದ್ಯಾರ್ಥಿನಿ ಶ್ರೀವರ್ಣ ಕ್ರೀಡಾಪಟುಗಲಿಗೆ ಪ್ರಮಾಣ ವಚನ ಬೋಧಿಸಿದರು. ದಕ್ಷಿಣ ಕ್ಷೇತ್ರ ಖೇಲ್ ಸಂಯೋಜಕ್ ಯು.ಪಿ. ಹರಿದಾಸ್, ವಿದ್ಯಾಭಾರತಿ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಟೂರ್ನಿ ಸಂಯೋಜಕ್ ಕಿಶೋರ್ ಚೌವಾಣ್, ವಿದ್ಯಾಭಾರತಿ ಪ್ರಾಂತ ಕಾರ್ಯದರ್ಶಿ ವಸಂತ ಮಾಧವ್, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶಿವಪ್ರಕಾಶ್ ಉಪಸ್ಥಿತರಿದ್ದರು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯಶಿಕ್ಷಕ ಸತೀಶ್ ಕುಮಾರ್ ರೈ ಸ್ವಾಗತಿಸಿದರು. ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರ ಖೇಲ್ ಪ್ರಮುಖ್ ಕೆ.ಆರ್.ಕೆ. ಸತ್ಯನಾರಾಯಣ ಪ್ರಾಸ್ತಾವಿಕವಾಗಿ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲಾ ವಿದ್ಯಾಭಾರತಿ ಖೇಲ್ ಪ್ರಮುಖ್ ಕರುಣಾಕರ ವಂದಿಸಿದರು. ಶಿಕ್ಷಕಿಯರಾದ ಸೌಮ್ಯ ಕುಮಾರಿ, ಸುಜಾತ ಕಾರ್ಯಕ್ರಮ ನಿರ್ವಹಿಸಿದರು.