ಇಲ್ಲಿನ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ 17 ವರ್ಷ ವಯೋಮಿತಿಯೊಳಗಿನ ಸರ್ಕಾರಿ ಪ್ರೌಢಶಾಲಾ ಬಾಲಕ-ಬಾಲಕಿಯರ ಕ್ರೀಡಾಕೂಟದಲ್ಲಿ ದುರ್ಗಿಗುಡಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ.

ಶಿವಮೊಗ್ಗ: ಇಲ್ಲಿನ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ 17 ವರ್ಷ ವಯೋಮಿತಿಯೊಳಗಿನ ಸರ್ಕಾರಿ ಪ್ರೌಢಶಾಲಾ ಬಾಲಕ-ಬಾಲಕಿಯರ ಕ್ರೀಡಾಕೂಟದಲ್ಲಿ ದುರ್ಗಿಗುಡಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ. ಖೋ-ಖೋ ಬಾಲಕರು ಹಾಗೂ ಬಾಲಕಿಯರು ಪ್ರಥಮ ಸ್ಥಾನ, ಬಾಲಕರ ವಿಭಾಗದ ರಿಲೆಯಲ್ಲಿ ಪ್ರಥಮ, 3000 ಓಟದಲ್ಲಿ ಪ್ರಥಮ, ಹ್ಯಾಮರ್‌ ಥ್ರೋನಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ತಂಡದ ವ್ಯವಸ್ಥಾಪಕರಾದ ಚಿಕ್ಯಾನಾಯ್ಕ್‌, ಸರಸ್ವತಿ, ದೈಹಿಕ ಶಿಕ್ಷಕ ಪ್ರಕಾಶ್‌ ಹಾಗೂ ಮುಖ್ಯಶಿಕ್ಷಕ ಮೋಹನ್‌ ಅವರ ಮಾರ್ಗದರ್ಶನದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಪ್ರಶಸ್ತಿಗಳಿಸುವ ಮೂಲಕ ಶಾಲೆಗೆ ಕೀರ್ತಿ ತಂದಿರುವ ವಿದ್ಯಾರ್ಥಿಗಳನ್ನು ಶಾಲೆಯ ಆಡಳಿತ ಮಂಡಳಿ ಹಾಗೂ ಎಸ್‌ಡಿಎಂಸಿ ಸದಸ್ಯರು ಅಭಿನಂದಿಸಿದ್ದಾರೆ.