ಸಾರಾಂಶ
ಕಡೂರು, ಮಕ್ಕಳಿಗೆ ಪ್ರಸ್ತುತ ದಿನಗಳಲ್ಲಿ ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳ ಅಗತ್ಯವಿರುವ ಕಾರಣ ಕ್ರೀಡೆಗೆ ಪ್ರೋತ್ಸಾಹಿಸಬೇಕು ಎಂದು ಬಾಣೂರು ಗ್ರಾಪಂ ಅಧ್ಯಕ್ಷೆ ಸುನಂದಮ್ಮ ಹೇಳಿದರು.
ಸಖರಾಯಪಟ್ಟಣ ಬಾಣೂರು ಕ್ಲಸ್ಟರ್ ವಲಯ ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ಕ್ರೀಡಾಕೂಟ ಉದ್ಘಾಟನೆ
ಕನ್ನಡಪ್ರಭ ವಾರ್ತೆ, ಕಡೂರುಮಕ್ಕಳಿಗೆ ಪ್ರಸ್ತುತ ದಿನಗಳಲ್ಲಿ ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳ ಅಗತ್ಯವಿರುವ ಕಾರಣ ಕ್ರೀಡೆಗೆ ಪ್ರೋತ್ಸಾಹಿಸಬೇಕು ಎಂದು ಬಾಣೂರು ಗ್ರಾಪಂ ಅಧ್ಯಕ್ಷೆ ಸುನಂದಮ್ಮ ಹೇಳಿದರು.
ಕಡೂರು ತಾಲೂಕಿನ ಬಾಣೂರಿನ ಶ್ರೀ ಬಸವೇಶ್ವರ ಪ್ರೌಢಶಾಲಾ ಆವರಣದಲ್ಲಿ ಸಖರಾಯಪಟ್ಟಣ ಬಾಣೂರು ಕ್ಲಸ್ಟರ್ ವಲಯ ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಮಕ್ಕಳಲ್ಲಿ ಇತ್ತೀಚೆಗೆ ದೈಹಿಕ ಚಟುವಟಿಕೆ ಕಡಿಮೆಯಾಗಿ ಅನಾರೋಗ್ಯಕ್ಕೆ ಕಾರಣವಾಗುತ್ತಿದೆ. ಸಣ್ಣ ವಯಸ್ಸಿನಲ್ಲಿ ಮಕ್ಕಳಿಗೆ ಕ್ರೀಡೆಗಳಲ್ಲಿ ಭಾಗವಹಿಸುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಮಕ್ಕಳ ದೈಹಿಕ ಬೆಳವಣಿಗೆಗೆ ಕ್ರೀಡಾಕೂಟ ಆಯೋಜನೆ ಮಾಡುತ್ತಿರುವುದು ಉತ್ತಮ. ಹಾಗಾಗಿ ಮಕ್ಕಳ ಭಾಗವಹಿಸುವಿಕೆ ಬಹು ಮುಖ್ಯ. ಸೋಲು ಗೆಲುವು ಮುಖ್ಯವಲ್ಲ ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಶೇಖರಪ್ಪ ಮಾತನಾಡಿ, ಈ ಕ್ರೀಡಾಕೂಟದಲ್ಲಿ ತಾಲೂಕಿನ 13 ಶಾಲೆಗಳಿಂದ ಸುಮಾರು 400 ಮಕ್ಕಳು ಭಾಗವಹಿಸುತ್ತಿದ್ದು, ಗ್ರಾಮದ ಜನರ ಸಹಕಾರದಿಂದ ಕ್ರೀಡಾಕೂಟ ಉತ್ತಮವಾಗಿ ನಡೆಯುತ್ತಿದೆ. ತೀರ್ಪುಗಾರ ಶಿಕ್ಷಕರು ನ್ಯಾಯಯುತವಾಗಿ ತೀರ್ಪು ನೀಡಿ ಅರ್ಹ ಮಕ್ಕಳನ್ನು ಮುಂದಿನ ಹಂತಕ್ಕೆ ಕಳುಹಿಸಬೇಕು ಎಂದರು. ಗ್ರಾಪಂ ಸದಸ್ಯ ರೇಣುಕಾಮೂರ್ತಿ ಮಾತನಾಡಿ, ಸರಕಾರದ ಅನುದಾನ ಕಡಿಮೆಯಿದ್ದರೂ ಗ್ರಾಪಂ ಸಹಕಾರ ಮತ್ತು ದಾನಿಗಳ ಸಹಕಾರದಿಂದ ಹಬ್ಬದ ರೂಪದಲ್ಲಿ ಕ್ರೀಡಾಕೂಟ ನಡೆಯುತ್ತಿದೆ. ಮಕ್ಕಳು ಅತ್ಯುತ್ತಮವಾಗಿ ಆಟವಾಡಿ ಉತ್ತಮ ಪ್ರದರ್ಶನ ನೀಡಿ ಶಾಲೆಗೆ ಮತ್ತು ಗ್ರಾಮಕ್ಕೆ ಕೀರ್ತಿ ತನ್ನಿ ಎಂದು ಶುಭ ಹಾರೈಸಿದರು. ನಿವೃತ್ತ ಕಾರ್ಯಪಾಲಕ ಇಂಜಿನಿಯರ್ ಗವಿರಂಗಪ್ಪ ಮಾತನಾಡಿ, ಬಾಣೂರು ಹಿರಿಯ ಪ್ರಾಥಮಿಕ ಶಾಲೆ ನೂರು ವರ್ಷಗಳನ್ನು ದಾಟಿದೆ. ಈ ನಿಟ್ಟಿನಲ್ಲಿ ಶತಮಾನೋತ್ಸವ ಗ್ರಾಮಸ್ಥರ ಮತ್ತು ಹಿರಿಯ ವಿದ್ಯಾರ್ಥಿಗಳ ಸಹಕಾರದಿಂದ ಮಾಡಬೇಕಿದೆ ಎಂದರು. ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ಉಮಾಕಾಂತ್, ಅಜ್ಜಯ್ಯ, ನವೀನ್, ಮಾಜಿ ಗ್ರಾ.ಪಂ. ಸದಸ್ಯ ಅಡಕೆ ಪ್ರಸನ್ನ, ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಘಟಕದ ಅಧ್ಯಕ್ಷ ಶಾಂತಕುಮಾರ್, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಜ್ಞಾನಮೂರ್ತಿ, ಬಸವೇಶ್ವರ ಪ್ರೌಢಶಾಲೆ ಅಧ್ಯಕ್ಷ ದಯಾನಂದ್, ಜಿಲ್ಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಜಗದೀಶ್ ಮತ್ತು ಅಶೋಕ್, ಮುಖ್ಯ ಶಿಕ್ಷಕರಾದ ವಸಂತಕುಮಾರ್ ಮತ್ತು ಮಂಜಪ್ಪ, ಎಸ್ಡಿಎಂಸಿ ಅಧ್ಯಕ್ಷ ಕಲ್ಲೇಶ್, ಮುಖ್ಯ ಶಿಕ್ಷಕ ಮಂಜಪ್ಪ, ಶಶಿಧರ್ , ಕೇಶವಮೂರ್ತಿ ಇದ್ದರು. 3ಕೆಕೆಡಿಯು3.ಕಡೂರು ತಾಲೂಕಿನ ಬಾಣೂರಿನ ಶ್ರೀ ಬಸವೇಶ್ವರ ಪ್ರೌಢಶಾಲಾ ಆವರಣದಲ್ಲಿ ಸಖರಾಯಪಟ್ಟಣ ಬಾಣೂರು ಕ್ಲಸ್ಟರ್ ವಲಯ ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ಕ್ರೀಡಾಕೂಟವನ್ನು ಗ್ರಾಪಂ ಅಧ್ಯಕ್ಷೆ ಸುನಂದಮ್ಮ ಚೆಂಡು ಎಸೆಯುವ ಮೂಲಕ ಉದ್ಘಾಟಿಸಿದರು.