ಪಠ್ಯದಷ್ಟೇ ಕ್ರೀಡೆಗೂ ಅದ್ಯತೆ ನೀಡಬೇಕು

| Published : Feb 26 2024, 01:31 AM IST

ಪಠ್ಯದಷ್ಟೇ ಕ್ರೀಡೆಗೂ ಅದ್ಯತೆ ನೀಡಬೇಕು
Share this Article
  • FB
  • TW
  • Linkdin
  • Email

ಸಾರಾಂಶ

ಕ್ರೀಡಾಪಟುಗಳು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾಗಬೇಕಾದರೆ ಉತ್ತಮ ಗುಣಮಟ್ಟದ ಸೌಲಭ್ಯ ಹಾಗೂ ತರಬೇತಿ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅನೇಕ ಕ್ರೀಡಾ ಹಾಸ್ಟಲ್ ಹಾಗೂ ಟ್ರ್ಯಾಕ್‍ಗಳನ್ನು ನಿರ್ಮಿಸಿದೆ

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಯುವಜನರು ಸಮಾಜ ನಿರ್ಮಾಣ ಕಾರ್ಯದಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದು, ಅವರನ್ನು ಪ್ರೋತ್ಸಾಹಿಸಲು ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದು ಅಖಿಲ ಭಾರತ ಯವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್.ರಕ್ಷಾರಾಮಯ್ಯ ಹೇಳಿದರು.ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಭಾನುವಾರ ಫಿಟ್ನೆಸ್ ಸ್ಟಾರ್ ತಂಡದವತಿಯಿಂದ ಆಯೋಜಿಸಲಾಗಿದ್ದ ಸರ್ ಎಂ.ವಿ ಕಪ್‌ನ ಪ್ರಥಮ ವರ್ಷದ ಜಿಲ್ಲಾ ಮಟ್ಟದ ಕ್ರಿಕೆಟ್ ಟೂರ್ನಮೆಂಟನ್ನು ಬ್ಯಾಟಿಂಗ್ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.ಬಹುಮಾನಗಳ ಮೊತ್ತ ಹೆಚ್ಚಳ

ಬಹುಮಾನ ಮೊತ್ತ ಹೆಚ್ಚಳಯುವಕರನ್ನು ಸದೃಢ ಹಾಗೂ ಸಬಲೀಕರಿಸಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕ್ರೀಡಾಪಟುಗಳಿಗೆ ನೀಡಲಾಗುತ್ತಿದ್ದ ಬಹುಮಾನದ ಮೊತ್ತವನ್ನು ಹೆಚ್ಚಿಸಲಾಗಿದೆ. ರಾಷ್ಟ್ರಮಟ್ಟದಲ್ಲಿ ಚಿನ್ನದ ಪದಕಗಳಿಸಿದವರಿಗೆ 1 ಲಕ್ಷ ರು.ಗಳಿಂದ 5 ಲಕ್ಷಕ್ಕೆ, ಬೆಳ್ಳಿ ಪದಕ ವಿಜೇತರಿಗೆ 50,000 ರಿಂದ 3ಲಕ್ಷ, ಕಂಚು ಪದಕ ವಿಜೇತರಿಗೆ 25,000 ರಿಂದ 2 ಲಕ್ಷ ಹಾಗೂ ಅಂತರಾಷ್ಟ್ರಮಟ್ಟದಲ್ಲಿ ಚಿನ್ನದ ಪದಕಗಳಿಸಿದವರಿಗೆ 10 ಲಕ್ಷ ದಿಂದ 25 ಲಕ್ಷಕ್ಕೆ ನಗದು ಬಹುಮಾನವನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದರು. ಕ್ರೀಡಾಪಟುಗಳು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾಗಬೇಕಾದರೆ ಉತ್ತಮ ಗುಣಮಟ್ಟದ ಸೌಲಭ್ಯ ಹಾಗೂ ತರಬೇತಿ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅನೇಕ ಕ್ರೀಡಾ ಹಾಸ್ಟಲ್ ಹಾಗೂ ಟ್ರ್ಯಾಕ್‍ಗಳನ್ನು ನಿರ್ಮಿಸಿದೆ. ದೇಶದಲ್ಲಿ ಕರ್ನಾಟಕ ಅತೀ ಹೆಚ್ಚು ಸಿಂಥೆಟಿಕ್ ಟ್ರ್ಯಾಕ್‍ಗಳನ್ನು ಹೊಂದಿರುವ ರಾಜ್ಯವಾಗಿದೆ ಎಂದು ಹೇಳಿದರು. ಪಠ್ಯದಷ್ಟೇ ಕ್ರೀಡೆಯೂ ಮುಖ್ಯ

ಪಾಠ ಪ್ರವಚನದ ಜೊತೆಯಲ್ಲಿ ಕ್ರೀಡೆಗೂ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಕ್ರೀಡಾಪಟುಗಳು ಶೈಕ್ಷಣಿಕವಾಗಿ ಪ್ರಗತಿ ಹೊಂದಲು ಸಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ 100 ಇಂಜಿನಿಯರಿಂಗ್ ಸೀಟ್ ಗಳನ್ನು ಮೀಸಲಿಡಲಾಗಿದೆ. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಸರ್ಕಾರಿ ಹಾಗೂ ಇತರೆ ಕ್ಷೇತ್ರದಲ್ಲಿ ಕೆಲಸ ಸಿಗಲಿದೆ ಎಂದರು. ರಕ್ಷಾ ರಾಮಯ್ಯಗೆ ಸನ್ಮಾನ

ಈ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನವಾಗಿ 50 ಸಾವಿರ, ಎರಡನೇ ಬಹುಮಾನ 25 ಸಾವಿರ ರುಪಾಯಿ ನೀಡಿ ಆಕರ್ಷಕ ಟ್ರೋಪಿ ನೀಡಿದರು. ಇದೇ ಸಂದರ್ಭದಲ್ಲಿ ಫಿಟ್ನೆಸ್ ಸ್ಟಾರ್ ತಂಡದ ವತಿಯಿಂದ ರಕ್ಷಾರಾಮಯ್ಯ ನವರಿಗೆ ಸನ್ಮಾನಿಸಲಾಯಿತು. ಸಿಕೆಬಿ-7 ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸರ್ ಎಂ.ವಿ ಕಪ್ ನ ಪ್ರಥಮ ವರ್ಷದ ಜಿಲ್ಲಾ ಮಟ್ಟದ ಕ್ರಿಕೆಟ್ ಟೂರ್ನಮೆಂಟನ್ನು ಎಂ.ಎಸ್.ರಕ್ಷಾರಾಮಯ್ಯ ಬ್ಯಾಟಿಂಗ್ ಮಾಡುವ ಮೂಲಕ ಉಧ್ಘಾಟಿಸಿದರು.