ಸಾರಾಂಶ
Sports should promote harmony and harmony: Minister D Sudhakar
-ರಾಜ್ಯಮಟ್ಟದ ಬಾಲಕ, ಬಾಲಕಿಯರ ಸಬ್ ಜೂನಿಯರ್ ಬಾಲ್ ಬ್ಯಾಡ್ಮಿಂಟನ್ ಲೀಗ್ ಚಾಂಪಿಯನ್ ಶಿಪ್
-----ಕನ್ನಡಪ್ರಭ ವಾರ್ತೆ ಹಿರಿಯೂರು: ಕ್ರೀಡೆಗಳು ಬದುಕಿನ ಅವಿಭಾಜ್ಯ ಅಂಗವಾಗಿದ್ದು ಕ್ರೀಡಾಪಟುಗಳು ಸೋಲು ಗೆಲುವು ಸಮಾನನಾಗಿ ಸ್ವೀಕರಿಸುವ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಸಚಿವ ಡಿ.ಸುಧಾಕರ್ ಹೇಳಿದರು.
ನಗರದ ವಾಗ್ದೇವಿ ವಿದ್ಯಾ ಸಂಸ್ಥೆ ಆವರಣದಲ್ಲಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಸ್ಟಾರ್ ಬಾಲ್ ಬ್ಯಾಡ್ಮಿಂಟನ್ ಕ್ಲಬ್, ಬಾಲ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಕರ್ನಾಟಕದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಬಾಲಕ, ಬಾಲಕಿಯರ ಸಬ್ ಜೂನಿಯರ್ ಬಾಲ್ ಬ್ಯಾಡ್ಮಿಂಟನ್ ಲೀಗ್ ಚಾಂಪಿಯನ್ ಶಿಪ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡೆಯಲ್ಲಿ ಭಾಗವಹಿಸುವಿಕೆ ಬಹಳ ಮುಖ್ಯವಾಗಿದ್ದು ಸ್ಪರ್ಧೆಗಳು ಸೌಹಾರ್ದಯುತವಾಗಿರಬೇಕು. ಕ್ರೀಡೆಗಳಿಂದ ಸಂತೋಷ, ಆರೋಗ್ಯ ವೃದ್ಧಿಯಾಗಬೇಕು. ದೈಹಿಕ ಮತ್ತು ಮಾನಸಿಕ ಸದೃಢತೆ, ಸೌಹಾರ್ಧತೆ ದೊರಕುವುದರಿಂದ ಕ್ರೀಡೆಗಳಿಗೆ ಎಲ್ಲರೂ ಹೆಚ್ಚಿನ ಉತ್ತೇಜನ ನೀಡಬೇಕಾಗಿದೆ ಎಂದರು.ಈ ಸಂದರ್ಭದಲ್ಲಿ ರಾಜ್ಯ ಆರ್ಯ ವೈಶ್ಯ ವಿದ್ಯಾ ಸಂಸ್ಥೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕೆವಿ.ಅಮರೇಶ್, ನಗರಸಭೆ ಅಧ್ಯಕ್ಷ ಅಜಯ್ ಕುಮಾರ್, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಆರ್ ನಾಗೇಂದ್ರ ನಾಯ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಮಮತಾ , ದೈಹಿಕ ಶಿಕ್ಷಣ ಪರಿವೀಕ್ಷಕ ರವೀಂದ್ರ ನಾಯ್ಕ್. ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.
-----ಚಿತ್ರ 1,2 ನಗರದ ವಾಗ್ದೇವಿ ವಿದ್ಯಾ ಸಂಸ್ಥೆ ಆವರಣದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಬಾಲಕ, ಬಾಲಕಿಯರ ಸಬ್ ಜೂನಿಯರ್ ಬಾಲ್ ಬ್ಯಾಡ್ಮಿಂಟನ್ ಲೀಗ್ ಚಾಂಪಿಯನ್ ಶಿಪ್ ಪಂದ್ಯಾವಳಿಯನ್ನು ಸಚಿವ ಡಿ ಸುಧಾಕರ್ ಉದ್ಘಾಟಿಸಿ ಮಾತನಾಡಿದರು.