ಕ್ರೀಡೆ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪೂರಕ: ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ರಾಜೀವ್

| Published : Aug 13 2024, 01:01 AM IST

ಕ್ರೀಡೆ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪೂರಕ: ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ರಾಜೀವ್
Share this Article
  • FB
  • TW
  • Linkdin
  • Email

ಸಾರಾಂಶ

ಪಠ್ಯೇತರ ಚುಟುವಟಿಕೆಗಳು ಸಹ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳೆವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ರಾಜೀವ್ ಹೇಳಿದರು. ಚಾಮರಾನಗರದಲ್ಲಿ ಹಿರಿಯ ಪ್ರಾಥಮಿಕ, ಪ್ರೌಢಶಾಲಾ ಪಟ್ಟಣ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಪಠ್ಯೇತರ ಚುಟುವಟಿಕೆಗಳು ಸಹ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳೆವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ರಾಜೀವ್ ಹೇಳಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಪಂ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಹಿರಿಯ ಪ್ರಾಥಮಿಕ, ಪ್ರೌಢಶಾಲಾ ಪಟ್ಟಣ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಸದೃಢ ಆರೋಗ್ಯವಂತರಾಗಿರಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ವೇದಿಕೆಗಳ ಮೂಲಕ ಪ್ರದರ್ಶಸಿಸುವ ಮೂಲಕ ಪ್ರೋತ್ಸಾಹಿಸಬೇಕು. ಶಿಕ್ಷಣದೊಂದಿಗೆ ಉತ್ತಮ ಹವ್ಯಾಸಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಪರಿಪೂರ್ಣ ವ್ಯಕ್ತಿಗಳಾಗಬಹುದು. ವಿದ್ಯೆ ಜೀವನದ ದಾರಿದೀಪವಾಗಿದೆ. ಪೋಷಕರು ಮಕ್ಕಳನ್ನು ಪಠ್ಯೆದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಲು ಪೋತ್ಸಾಹಿಸಬೇಕು ಎಂದರು.

ತಾಲೂಕು ದೈಹಿಕ ಪರಿವೀಕ್ಷಕ ಬಸವರಾಜು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಕೆ.ರಾಮಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ, ಎನ್‌ಜಿಓ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಸಂಘಟನಾ ಕಾರ್ಯದರ್ಶಿ ಸವಿತಾರಾಣಿ, ಜಿಲ್ಲಾ ಕಾರ್ಯದರ್ಶಿ ಗೀತಾ, ತಾ.ಉಪಾಧ್ಯಕ್ಷ ಶಶಿಕಲಾ, ಖಜಾಂಚಿ ಕೃಷ್ಣಮೂರ್ತಿ, ಎಸ್‌ಸಿ, ಎಸ್ಟಿ ಜಿಲ್ಲಾ ಅಧ್ಯಕ್ಷ ಕೆಂಪರಾಜು, ಉಪಾಧ್ಯಕ್ಷ ಜಿ.ರಾಜು, ರಾಜ್ಯ ಗ್ರೇಡ್ 2 ರಾಜ್ಯ ಉಪಾಧ್ಯಕ್ಷ ಜೋಸೆಫ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷ ಚಿಕ್ಕಬಸವಯ್ಯ, ಕಾರ್ಯದರ್ಶಿ ಶಿವಮಲ್ಲು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಮಾ‌ರ್,ಸಿಅರ್ ಪಿಗಳಾದ ವಿ.ಮಹದೇವಯ್ಯ, ಹೇಮ, ಮಹೇಶ್, ಶಿವಕುಮಾರ್ ಭಾಗವಹಿಸಿದ್ದರು.