ಜಾತ್ರೆಯ ಅಂಗವಾಗಿ ಗಣಪತಿ ಹೋಮ, ರುದ್ರಾಭಿಷೇಕ, ಮಹಾಮಂಗಳಾರತಿ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಗ್ರಾಮ ದೇವರ ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಶ್ರೀ ಭೈರವೇಶ್ವರಸ್ವಾಮಿ ಹಾಗೂ ಶ್ರೀ ಲಕುಮಿದೇವಿಗೆ ಅಭಿಷೇಕ ಹಾಗೂ ಪೂಜಾ ಕಾರ್ಯಕ್ರಮ, ಅನ್ನಸಂತರ್ಪಣೆ ಭಕ್ತಾದಿಗಳಿಂದ ವಿಶೇಷ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ದೊಡ್ಡಬಳ್ಳಾಪುರ: ತಾಲೂಕಿನ ಕೂಗೋನಹಳ್ಳಿ ಗ್ರಾಮದಲ್ಲಿನ ಶ್ರೀ ಭೈರವೇಶ್ವರಸ್ವಾಮಿ ಹಾಗೂ ಶ್ರೀ ಲಕುಮಿದೇವಿ ಸೇವಾ ಅಭಿವೃದ್ಧಿ ಸಮಿತಿ ವತಿಯಿಂದ 12ನೇ ವಾರ್ಷಿಕೋತ್ಸವ ಹಾಗೂ ಜಾತ್ರಾ ಮಹೋತ್ಸವ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ನೆರವೇರಿತು. ಜಾತ್ರೆಯ ಅಂಗವಾಗಿ ಗಣಪತಿ ಹೋಮ, ರುದ್ರಾಭಿಷೇಕ, ಮಹಾಮಂಗಳಾರತಿ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಗ್ರಾಮ ದೇವರ ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಶ್ರೀ ಭೈರವೇಶ್ವರಸ್ವಾಮಿ ಹಾಗೂ ಶ್ರೀ ಲಕುಮಿದೇವಿಗೆ ಅಭಿಷೇಕ ಹಾಗೂ ಪೂಜಾ ಕಾರ್ಯಕ್ರಮ, ಅನ್ನಸಂತರ್ಪಣೆ ಭಕ್ತಾದಿಗಳಿಂದ ವಿಶೇಷ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಮಂಗಳವಾರ ದೇವರ ಉತ್ಸವ, ಮೆರವಣಿಗೆ ಹಾಗೂ ಮಹಾಮಂಗಳಾರತಿ ಬಳಿಕ ಅನ್ನಸಂತರ್ಪಣೆ ನಡೆಯಿತು. ಮೂರು ದಿನಗಳ ಕಾಲ ನಡೆದ ಜಾತ್ರಾ ಮಹೋತ್ಸವದಲ್ಲಿ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಭಕ್ತರು ಭಾಗವಹಿಸಿದ್ದರು.