ಸೆ.5ರಂದು ಶ್ರೀ ಲಕ್ಷ್ಮೀನರಸಿಂಹಸ್ವಾಮಿ, ಶ್ರೀ ಚೆನ್ನಕೇಶವಸ್ವಾಮಿ ಹಾಗೂ ಗೋಪಾಲಸ್ವಾಮಿ ದೇವರಿಗೆ ಅಭಿಷೇಕ, ಹೂವಿನ ಅಲಂಕಾರ ನಡೆಯಲಿದೆ. ರಾಜಬೀದಿಗಳಲ್ಲಿ ಹಾಲು-ಬೆಣ್ಣೆ ಉತ್ಸವ, ಮಕ್ಕಳಿಂದ ಶ್ರೀಕೃಷ್ಣ ಮತ್ತು ರುಕ್ಮಿಣಿ ವೇಷಭೂಷಣ ಸ್ಪರ್ಧೆ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಪುರವರ್ಗ ಹಿರೇಮಠದ ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಶಾಸಕ ಸಿ.ಎನ್.ಬಾಲಕೃಷ್ಣ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ.ಗೋಪಾಲಸ್ವಾಮಿ, ಬಿಜೆಪಿ ಮುಖಂಡ ಸಿ.ಆರ್‌. ಚಿದಾನಂದ ಸೇರಿದಂತೆ ಹಲವು ಗಣ್ಯರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ನುಗ್ಗೇಹಳ್ಳಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವದ ಅಂಗವಾಗಿ ನುಗ್ಗೇಹಳ್ಳಿ ಹೋಬಳಿ ಕೇಂದ್ರದ ಯಾದವ ಸಂಘದ ವತಿಯಿಂದ ಸೆಪ್ಟೆಂಬರ್ 4 ಮತ್ತು 5ರಂದು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಸೆಪ್ಟೆಂಬರ್‌ 4ರಂದು ರಾತ್ರಿ 8 ಗಂಟೆಗೆ ನುಗ್ಗೇಹಳ್ಳಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿರುವ ಗೋಪಾಲಸ್ವಾಮಿ ದೇವರಿಗೆ ವಿಶೇಷ ಅಭಿಷೇಕ ಹಾಗೂ ಮಹಾಮಂಗಳಾರತಿ ನೆರವೇರಿಸಲಾಗುವುದು. ಸೆ.5ರಂದು ಶ್ರೀ ಲಕ್ಷ್ಮೀನರಸಿಂಹಸ್ವಾಮಿ, ಶ್ರೀ ಚೆನ್ನಕೇಶವಸ್ವಾಮಿ ಹಾಗೂ ಗೋಪಾಲಸ್ವಾಮಿ ದೇವರಿಗೆ ಅಭಿಷೇಕ, ಹೂವಿನ ಅಲಂಕಾರ ನಡೆಯಲಿದೆ. ರಾಜಬೀದಿಗಳಲ್ಲಿ ಹಾಲು-ಬೆಣ್ಣೆ ಉತ್ಸವ, ಮಕ್ಕಳಿಂದ ಶ್ರೀಕೃಷ್ಣ ಮತ್ತು ರುಕ್ಮಿಣಿ ವೇಷಭೂಷಣ ಸ್ಪರ್ಧೆ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಪುರವರ್ಗ ಹಿರೇಮಠದ ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಶಾಸಕ ಸಿ.ಎನ್.ಬಾಲಕೃಷ್ಣ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ.ಗೋಪಾಲಸ್ವಾಮಿ, ಬಿಜೆಪಿ ಮುಖಂಡ ಸಿ.ಆರ್‌. ಚಿದಾನಂದ ಸೇರಿದಂತೆ ಹಲವು ಗಣ್ಯರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.