ಶ್ರೀ ಕೃಷ್ಣ ಜಯಂತಿ: ಅಗತ್ಯ ಸಿದ್ಧತೆಗೆ ಸಲಹೆ

| Published : Aug 11 2024, 01:32 AM IST

ಶ್ರೀ ಕೃಷ್ಣ ಜಯಂತಿ: ಅಗತ್ಯ ಸಿದ್ಧತೆಗೆ ಸಲಹೆ
Share this Article
  • FB
  • TW
  • Linkdin
  • Email

ಸಾರಾಂಶ

ಕೊಪ್ಪಳ ಜಿಲ್ಲಾಡಳಿತದಿಂದ ಶ್ರೀಕೃಷ್ಣ ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದ್ದಾರೆ.

ಕೊಪ್ಪಳ: ಶ್ರೀಕೃಷ್ಣ ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ ಕುರಿತಂತೆ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾಡಳಿತದಿಂದ ಶ್ರೀ ಕೃಷ್ಣ ಜಯಂತಿಯ ಆಚರಣೆ ಕಾರ್ಯಕ್ರಮವನ್ನು ಕಳೆದ ವರ್ಷದಂತೆ ಈ ಬಾರಿಯು ಆ. 26ರಂದು ಬೆಳಗ್ಗೆ 10 ಗಂಟೆಗೆ ಕೊಪ್ಪಳದ ಶಿರಸಪ್ಪಯ್ಯನ ಮಠ ಬಳಿ ಇರುವ ಶ್ರೀ ಕೃಷ್ಣ ದೇವಸ್ಥಾನದ ಆವರಣದಲ್ಲಿ ಆಚರಿಸಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ವೇದಿಕೆ ಅಲಂಕಾರ, ವಿಶೇಷ ಉಪನ್ಯಾಸ ಆಯೋಜನೆ, ಕುಡಿಯುವ ನೀರಿನ ವ್ಯವಸ್ಥೆ, ಜಯಂತಿ ಅಂಗವಾಗಿ ನಡೆಯುವ ಮೆರವಣಿಗೆ ಸಂದರ್ಭದಲ್ಲಿ ರಸ್ತೆ ಸ್ವಚ್ಛತೆ ಸೇರಿದಂತೆ ಎಲ್ಲ ವ್ಯವಸ್ಥೆಯನ್ನು ಸಮರ್ಪಕವಾಗಿ ಕೈಗೊಳ್ಳಲು ಅಗತ್ಯ ಏರ್ಪಾಡು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶ್ರೀ ಕೃಷ್ಣ ಜಯಂತಿಯಲ್ಲಿ ಎಲ್ಲ ಸಮಾಜದ ಮುಖಂಡರು, ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಹಾಗೂ ಜಿಲ್ಲಾಡಳಿತಕ್ಕೆ ಅಗತ್ಯ ಸಹಕಾರ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಮನವಿ ಮಾಡಿದರು.ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಕೃಷ್ಣಮೂರ್ತಿ ದೇಸಾಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಎ. ಬಸವರಾಜ, ಸಮಾಜದ ಮುಖಂಡರಾದ ನಾರಾಯಣಗೌಡ ಪಾಟೀಲ, ಜಗನ್ನಾಥ ಯಾದವ, ಭೀಮಣ್ಣ ಲೇಬಗೇರಿ, ಯಂಕಪ್ಪ ವಾಲಿಕಾರ, ವೆಂಕಟೇಶ, ರಾಮ ಬಾಗಲಿ, ಪರಶುರಾಮ ಉಪಸ್ಥಿತರಿದ್ದರು.