ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದಿಂದ ಸಾವಿರಾರು ಕುಟುಂಬಗಳಿಗೆ ನೆಲೆ: ರವಿಶಂಕರ್

| Published : Jan 04 2025, 12:31 AM IST

ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದಿಂದ ಸಾವಿರಾರು ಕುಟುಂಬಗಳಿಗೆ ನೆಲೆ: ರವಿಶಂಕರ್
Share this Article
  • FB
  • TW
  • Linkdin
  • Email

ಸಾರಾಂಶ

ಯೋಜನೆಯ ಅಧಿಕಾರಿಗಳು ನಮ್ಮ ಅಳಿಲು ಸೇವೆಯನ್ನು ಬಳಸಿಕೊಳ್ಳಬೇಕು. ಜೊತೆಗೆ ಯಾವುದೇ ಭಾಗದಲ್ಲಿ ಕಾನೂನು ಅರಿವು ಕಾರ್ಯಕ್ರಮ ಮಾಡಿದರೆ ನಾನು ಬಂದು ಕಾನೂನಿನ ಬಗ್ಗೆ ಜಾಗೃತಿ ಮೂಡಿಸುತ್ತೇನೆ ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಮಾಜಿಕ ಸೇವೆ, ಸ್ವ ಸಹಾಯ ಸಂಘಗಳ ಮೂಲಕ ನೀಡುತ್ತಿರುವ ಸಾಲದಿಂದ ಸಾವಿರಾರು ಕುಟುಂಬಗಳು ಉತ್ತಮ ನೆಲೆಕಂಡುಕೊಂಡಿವೆ ಎಂದು ಹಿರಿಯ ವಕೀಲ ಎನ್.ಆರ್.ರವಿಶಂಕರ್ ತಿಳಿಸಿದರು.

ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ,

ಪೂಜ್ಯ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಹತ್ತಾರು ಕ್ಷೇತ್ರಗಳಲ್ಲಿ ಉತ್ತಮ ಕೆಲಸ ಮಾಡುತ್ತಿದೆ ಎಂದರು.

ಯೋಜನೆಯ ಅಧಿಕಾರಿಗಳು ನಮ್ಮ ಅಳಿಲು ಸೇವೆಯನ್ನು ಬಳಸಿಕೊಳ್ಳಬೇಕು. ಜೊತೆಗೆ ಯಾವುದೇ ಭಾಗದಲ್ಲಿ ಕಾನೂನು ಅರಿವು ಕಾರ್ಯಕ್ರಮ ಮಾಡಿದರೆ ನಾನು ಬಂದು ಕಾನೂನಿನ ಬಗ್ಗೆ ಜಾಗೃತಿ ಮೂಡಿಸುತ್ತೇನೆ ಎಂದು ತಿಳಿಸಿದರು.

ಹಿರಿಯ ಮುಖಂಡ ನಾಯಕನಹಳ್ಳಿ ನಂಜಪ್ಪ ಮಾತನಾಡಿದರು. ಹಿರಿಯ ಪತ್ರಕರ್ತರಾದ ಕೆ.ಆರ್.ನೀಲಕಂಠ, ಎಂ.ಕೆ.ಹರಿಚರಣತಿಲಕ್, ಬಳ್ಳೇಕೆರೆ ಮಂಜುನಾಥ್, ಆರ್.ಶ್ರೀನಿವಾಸ್, ಕಾಡುಮೆಣಸ ಚಂದ್ರು, ಮರುವನಹಳ್ಳಿ ಬಸವರಾಜ, ಗಂಜೀಗೆರೆ ಮಹೇಶ್, ಶಿಕ್ಷಕ ನಾಗರಾಜ್, ಬೇಕರಿ ದಿನೇಶ್, ಯೋಜನಾಧಿಕಾರಿ ತಿಲಕ್ ರಾಜ್ ಮತ್ತು ಸಿಬ್ಬಂದಿ ಹಾಜರಿದ್ದರು.

----------

ಕಳೆದು ಹೋದ ಸಮಯ ವಾಪಸ್ ಪಡೆಯಲು ಸಾಧ್ಯವಿಲ್ಲ: ತಿಲಕ್ ರಾಜ್

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಸಮಯ ಅಮೂಲ್ಯವಾಗಿದ್ದು, ಕಳೆದ ಹೋದ ಸಮಯವನ್ನು ವಾಪಸ್ ಪಡೆದುಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ನಮ್ಮ ಮುಂದಿರುವ ಸಮಯವನ್ನು ವ್ಯರ್ಥ ಮಾಡದೇ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ತಾಲೂಕು ಯೋಜನಾಧಿಕಾರಿ ತಿಲಕ್‌ರಾಜ್ ಕರೆ ನೀಡಿದರು.

ಪಟ್ಟಣದ ಜಯನಗರ ಬಡಾವಣೆಯ ಸಮಾಜ ಸೇವಕ ಆರ್.ಟಿ.ಒ ಮಲ್ಲಿಕಾರ್ಜುನ ಅಭಿಮಾನಿಗಳ ಬಳಗದ ವತಿಯಿಂದ ಹೊರ ತರಲಾಗಿರುವ ದಿನದರ್ಶಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಆರ್.ಟಿ.ಒ. ಅಧಿಕಾರಿಗಳ ಸಂಘದ ಅಧ್ಯಕ್ಷ ಆರ್.ಟಿ.ಒ ಮಲ್ಲಿಕಾರ್ಜುನ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಕಸಾಪ ಮಾಜಿ ಅಧ್ಯಕ್ಷ ಹರಿಚರಣತಿಲಕ್. ಮಾಜಿ ಕಾರ್ಯಾಧ್ಯಕ್ಷ ಬಳ್ಳೇಕೆರೆ ಮಂಜುನಾಥ್, ಉಪನ್ಯಾಸಕ ಬಲ್ಲೇನಹಳ್ಳಿ ಮಂಜುನಾಥ್, ನಿವೃತ್ತ ಪ್ರಾಂಶುಪಾಲ ಕೆ.ಕಾಳೇಗೌಡ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅರುಣ್‌ಕುಮಾರ್, ಗ್ರಾಪಂ ಸದಸ್ಯ ಅಗ್ರಹಾರಬಾಚಹಳ್ಳಿ ಶ್ರೀನಿವಾಸ್, ಶಿಕ್ಷಕರಾದ ಬಸವರಾಜು, ಮೊಸಳೆಕೊಪ್ಪಲು ದಿನೇಶ್, ಮುಖಂಡರಾದ ಜಿ.ಎ.ರಾಯಪ್ಪ, ಎ.ರಾಜು, ಅಣೆಚೌಡೇನಹಳ್ಳಿ ರವಿ, ಪ್ರಶಾಂತ್, ಮಡುವಿನಕೋಡಿ ಉಮೇಶ್, ಡಾ.ರಾಜ್‌ಕುಮಾರ್ ಕಲಾ ಸಂಘದ ಸದಸ್ಯರಿದ್ದರು.