ನಗರದ ಬೊಮ್ಮನಕಟ್ಟೆ ರಸ್ತೆಯ ದೇವಂಗಿ ರತ್ನಾಕರ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಆ.29, 30 ಹಾಗೂ 31ರಂದು ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ನಗರದ ಬೊಮ್ಮನಕಟ್ಟೆ ರಸ್ತೆಯ ದೇವಂಗಿ ರತ್ನಾಕರ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಆ.29, 30 ಹಾಗೂ 31ರಂದು ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.

ಆ.28ರಂದು ಬೆಳಗ್ಗೆ 6 ಗಂಟೆಯಿಂದ ಗೋಪೂಜೆ, ಧ್ವಜಾರೋಹಣ, ಧನ, ಧಾನ್ಯ ಪೂಜೆ, ಲಕ್ಷ್ಮೀ ಪೂಜೆ, ಸ್ವಸ್ತಿವಾಚನ, ಮಹಾಮಂಗಳಾರತಿ ನಡೆಯಲಿದ್ದು, ಅಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಆ.29ರಂದು ಪೂರ್ವಾರಾಧನೆ ಅಂಗವಾಗಿ ಬೆಳಗ್ಗೆ 5.30ಕ್ಕೆ ಸುಪ್ರಭಾತ, ನಿರ್ಮಾಲ್ಯ ವಿಸರ್ಜನೆ, ಬೆಳಗ್ಗೆ 7ಕ್ಕೆ ಅಷ್ಟೋತ್ತರದೊಂದಿಗೆ ಕ್ಷಿರಾಭಿಷೇಕ ಸಹಿತ ಪಂಚಾಮೃತ, ಬೆಳಗ್ಗೆ 10ಕ್ಕೆ ಪಾದಪೂಜೆಯೊಂದಿಗೆ ಕನಕಾಭಿಷೇಕ ಅರ್ಚನೆ, ಮಧ್ಯಾಹ್ನ 12ಕ್ಕೆ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಇರುತ್ತದೆ. ಇದೇ ದಿನ ಸಂಜೆ 5ರಿಂದ ಪ್ರಜ್ಞಾ ಹಾಗೂ ರಶ್ಮಿ ರಾಘವೇಂದ್ರ ಅವರಿಂದ ಭರತನಾಟ್ಯ ಇರಲಿದೆ.

ಆ.30ರಂದು ಶ್ರೀ ಗುರುರಾಯರ ಮಧ್ಯಾರಾಧನೆ ಅಂಗವಾಗಿ ಬೆಳಗ್ಗೆ 5.30ಕ್ಕೆ ಸುಪ್ರಭಾತ, ನಿರ್ಮಾಲ್ಯ ವಿಸರ್ಜನೆ, ಬೆಳಗ್ಗೆ 7ಕ್ಕೆ ಅಷ್ಟೋತ್ತರದೊಂದಿಗೆ ಕ್ಷಿರಾಭಿಷೇಕ ಸಹಿತ ಪಂಚಾಮೃತ, ಬೆಳಗ್ಗೆ 10ಕ್ಕೆ ಪಾದಪೂಜೆಯೊಂದಿಗೆ ಕನಕಾಭಿಷೇಕ ಅರ್ಚನೆ, ಮಧ್ಯಾಹ್ನ 12ಕ್ಕೆ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಇದ್ದು, ಇದೇ ದಿನ ಸಂಜೆ 5ರಿಂದ ಶ್ರೀ ಸರಸ್ವತಿ ಸಂಗೀತ ವಿದ್ಯಾಲಯದಿಂದ ವೀಣಾವಾದನ ಇರಲಿದೆ.

ಆ.31ರಂದು ಶ್ರೀ ಗುರುರಾಯರ ಉತ್ತರಾರಾಧನೆ ಅಂಗವಾಗಿ ಬೆಳಗ್ಗೆ 5.30ಕ್ಕೆ ಸುಪ್ರಭಾತ, ನಿರ್ಮಾಲ್ಯ ವಿಸರ್ಜನೆ. ಬೆಳಗ್ಗೆ 7ಕ್ಕೆ ಅಷ್ಟೋತ್ತರದೊಂದಿಗೆ ಕ್ಷಿರಾಭಿಷೇಕ ಸಹಿತ ಪಂಚಾಮೃತ ಬೆಳಗ್ಗೆ 11ಕ್ಕೆ ಪ್ರಾಕಾರದಲ್ಲಿ ಮಹಾರಥೋತ್ಸವ ನಡೆಯಲಿದೆ. ಇದೇ ದಿನ ದಂಜೆ 5ರಿಂದ ಇಂಪು ಮ್ಯೂಸಿಕಲ್ಸ್‌ ತಂಡದಿಂದ ದಾಸರ ಪದಗಳು ಕಾರ್ಯಕ್ರಮ ಜರುಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.