ಸಾರಾಂಶ
ದೊಡ್ಡಬಳ್ಳಾಪುರ: ಇಲ್ಲಿನ ಆರ್.ಎಲ್. ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್ ಸಹಯೋಗದಲ್ಲಿ ಕ್ಯಾಂಪಸ್ ಆವರಣದಲ್ಲಿರುವ ಗಣೇಶ ದೇವಾಲಯ ಮುಂದೆ ಶ್ರೀರಾಮೋತ್ಸವ ಹಮ್ಮಿಕೊಳ್ಳಲಾಗಿತ್ತು. ಅಯೋಧ್ಯಾ ರಾಮಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಮಹೋತ್ಸವವನ್ನು ಸಂಭ್ರಮಿಸಿ ಪೂಜೆ, ಬಳಿಕ ಪಾನಕ-ಮಜ್ಜಿಗೆ, ಕೋಸಂಬರಿ ವಿತರಿಸಲಾಯಿತು. ಈ ವೇಳೆ ಶ್ರೀ ದೇವರಾಜ ಅರಸು ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ, ಕಾರ್ಯದರ್ಶಿ ಕೆ.ಜಿ.ಹನುಮಂತರಾಜು, ಆರ್‌ಎಲ್‌ಜೆಐಟಿ ಪ್ರಾಂಶುಪಾಲ ಡಾ.ವಿಜಯ್ ಕಾರ್ತಿಕ್, ಲಯನ್ಸ್ ಪ್ರಾಂತೀಯ ಅಧ್ಯಕ್ಷ ಎಂ.ಆರ್.ಶ್ರೀನಿವಾಸ್, ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್ ಅಧ್ಯಕ್ಷ ಡಾ.ಎಂ.ಶ್ರೀನಿವಾಸರೆಡ್ಡಿ, ಖಜಾಂಚಿ ಎಸ್.ರವಿಕುಮಾರ್, ಉಪಾಧ್ಯಕ್ಷರಾದ ಜೆ.ಆರ್.ರಾಕೇಶ್, ರವಿಕಿರಣ್, ವಿವಿಧ ಶೈಕ್ಷಣಿಕ ಘಟಕಗಳ ಪ್ರಾಂಶುಪಾಲರಾದ ನರಸಿಂಹರೆಡ್ಡಿ, ಮಹಂತೇಶ್, ನಾಗರಾಜ್, ರವಿಕುಮಾರ್ ಹಾಗೂ ಸಿಬ್ಬಂದಿ, ಲಯನ್ಸ್ ಕ್ಲಬ್ ಪದಾಧಿಕಾರಿಗಳು ಉಪಸ್ಥಿತರಿದ್ದರು.22ಕೆಡಿಬಿಪಿ5-
ದೊಡ್ಡಬಳ್ಳಾಪುರದ ಜಾಲಪ್ಪ ಶಿಕ್ಷಣ ಸಂಸ್ಥೆ ಮತ್ತು ಲಯನ್ಸ್ ಕ್ಲಬ್ ಸಹಯೋಗದಲ್ಲಿ ಶ್ರೀರಾಮೋತ್ಸವ ಸಂಭ್ರಮ ನಡೆಯಿತು. ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ, ಕಾರ್ಯದರ್ಶಿ ಕೆ.ಜಿ.ಹನುಮಂತರಾಜು, ಆರ್‌ಎಲ್‌ಜೆಐಟಿ ಪ್ರಾಂಶುಪಾಲ ಡಾ.ವಿಜಯ್ ಕಾರ್ತಿಕ್, ಲಯನ್ಸ್ ಪ್ರಾಂತೀಯ ಅಧ್ಯಕ್ಷ ಎಂ.ಆರ್.ಶ್ರೀನಿವಾಸ್ ಇತರರಿದ್ದರು.