ಸಾರಾಂಶ
ಬಾಗಲಕೋಟೆ: ನಗರದ ಬಿ.ವಿ.ವಿ.ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಹಾನಗಲ್ಲ ಶ್ರೀ ಕುಮಾರೇಶ್ವರ ಆಸ್ಪತ್ರೆಯ ಆವರಣದಲ್ಲಿರುವ ಶಿವಾಲಯದಲ್ಲಿ ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾನ ಪ್ರಯುಕ್ತ ಸೋಮವಾರ ಮುಂಜಾನೆ 9.30ಕ್ಕೆ ಮೆಡಿಕಲ್ ಕಾಲೇಜಿನ ಮುಖ್ಯದ್ವಾರದಲ್ಲಿ ನಿರ್ಮಿಸಲಾದ ಮಹಾಪ್ರಭು ಶ್ರೀರಾಮಲಲ್ಲಾ ಮಂಟಪದಲ್ಲಿ ಶ್ರೀರಾಮಲಲ್ಲಾ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಬಿ.ವಿ.ವಿ.ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಸಿ.ಚರಂತಿಮಠ ಸಂಘದ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ನಗರದ ಬಿ.ವಿ.ವಿ.ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಹಾನಗಲ್ಲ ಶ್ರೀ ಕುಮಾರೇಶ್ವರ ಆಸ್ಪತ್ರೆಯ ಆವರಣದಲ್ಲಿರುವ ಶಿವಾಲಯದಲ್ಲಿ ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾನ ಪ್ರಯುಕ್ತ ಸೋಮವಾರ ಮುಂಜಾನೆ 9.30ಕ್ಕೆ ಮೆಡಿಕಲ್ ಕಾಲೇಜಿನ ಮುಖ್ಯದ್ವಾರದಲ್ಲಿ ನಿರ್ಮಿಸಲಾದ ಮಹಾಪ್ರಭು ಶ್ರೀರಾಮಲಲ್ಲಾ ಮಂಟಪದಲ್ಲಿ ಶ್ರೀರಾಮಲಲ್ಲಾ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಬಿ.ವಿ.ವಿ.ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಸಿ.ಚರಂತಿಮಠ ಸಂಘದ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.ಶಿವಾಲಯದ ಎದುರಿಗೆ ವೈದ್ಯ ವಿದ್ಯಾರ್ಥಿಗಳು ಬಿಡಿಸಿದ ವಿವಿಧ ರಂಗೋಲಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಶಿವಾಲಯದಲ್ಲಿ ಈಶ್ವರನ ದರ್ಶನ ಪಡೆದು, ಶ್ರೀರಾಮಲಲ್ಲಾ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ಹೋಮಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಬಳಿಕ ಮಾತನಾಡಿದ ಡಾ.ಚರಂತಿಮಠ, ಕಾನೂನಿನ ಚೌಕಟ್ಟಿನಲ್ಲಿ ಅಯ್ಯೋಧೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಗೊಂಡಿದೆ. ಭಾರತೀಯರ ಹಲವು ಶತಮಾನಗಳ ಕನಸು ನನಸಾಗುತ್ತಿರುವ ಈ ಸಂಭ್ರಮದಲ್ಲಿ ಇಡೀ ದೇಶದ ಜನತೆ ಪಾಲ್ಗೊಂಡಿದೆ. ಈ ಸಂಭ್ರಮದ ಘಳಿಗೆಯನ್ನು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಪೂಜೆ, ಹೋಮ, ದೀಪಾಲಂಕಾರ ಮತ್ತು ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಬಿ.ವಿ.ವಿ ಸಂಘದ ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಎಮ್.ಸಜ್ಜನ (ಬೇವೂರ), ಬಿ.ವಿ.ವಿ ಸಂಘದ ಸದಸ್ಯರು, ಮೆಡಿಕಲ್ ಕಾಲೇಜು ಪ್ರಾಚಾರ್ಯ ಡಾ.ಅಶೋಕ ಮಲ್ಲಾಪೂರ, ದಂತ ವೈದ್ಯಕೀಯ ಕಾಲೇಜು ಪ್ರಾಚಾರ್ಯ ಡಾ.ಶ್ರೀನಿವಾಸ ವನಕಿ, ನರ್ಸಿಂಗ್ ಕಾಲೇಜು ಪ್ರಾಚಾರ್ಯ ಡಾ.ದಿಲೀಪ್ ನಾಟೆಕರ್, ವೈದ್ಯಕೀಯ ಅಧೀಕ್ಷಕಿ ಡಾ.ಭುವನೇಶ್ವರಿ ಯಳಮಲಿ, ಡಾ.ಸೊಲಬಣ್ಣವರ್, ಡಾ.ಆಶಾಲತಾ ಮಲ್ಲಾಪೂರ, ಡಾ.ಕೋರಾ,ವಿವಿಧ ಕಾಲೇಜುಗಳ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.