ಶ್ರೀರಾಮನ ಪ್ರತಿಷ್ಠಾಪನೆ ನಮ್ಮ ಹೃದಯದಲ್ಲಾಗಬೇಕು: ಡಾ. ಪ್ರಭಾಕರ್ ಭಟ್ ಕಲ್ಲಡ್ಕ

| Published : Sep 01 2024, 01:46 AM IST

ಸಾರಾಂಶ

ಕಾರ್ಯಕ್ರಮದಲ್ಲಿ ಯಕ್ಷಗಾನ ತಾಳಮದ್ದಳೆ ವಾಲಿಮೋಕ್ಷ ಪ್ರಸಂಗ ನಡೆಯಿತು.

ಕನ್ನಡಪ್ರಭ ವಾರ್ತೆ ಪುತ್ತೂರು

ಜಗತ್ತಿಗೆ ಒಳ್ಳೆಯ ಸಂದೇಶವನ್ನು ನೀಡಿದ ಸರ್ವ ಶ್ರೇಷ್ಠ ಧರ್ಮ ಹಿಂದೂ ಧರ್ಮ. ಅಂತಹ ಧರ್ಮದಲ್ಲಿ ಹುಟ್ಟಿರುವುದು ನಮ್ಮೆಲ್ಲರ ಪೂರ್ವ ಜನ್ಮದ ಪುಣ್ಯವಾಗಿದೆ. ಶ್ರೀರಾಮನ ಕಾಲದಲ್ಲಿಯೇ ರಾವಣನಂತಹ ರಾಕ್ಷಸ ಸಮಾಜ ಇತ್ತು, ಅದನ್ನು ಶ್ರೀರಾಮ ಹೇಗೆ ಎದುರಿಸಿದ ಎನ್ನುವುದನ್ನು ತಿಳಿದುಕೊಳ್ಳುವುದು ಅತ್ಯವಶ್ಯಕವಾಗಿದೆ. ಶ್ರೀರಾಮನ ಗುಣಗಳು ನಮ್ಮೆಲ್ಲರಿಗೂ ಆದರ್ಶವಾಗಿದ್ದು ಆತ ನಮ್ಮ ಹೃದಯದಲ್ಲಿ ನೆಲೆಸಬೇಕು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು.

ಅವರು ಪುತ್ತೂರಿನ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ಶುಕ್ರವಾರ ನಡೆದ ಪ್ರಸಾರಾಂಗದ ಉದ್ಘಾಟನೆ ಮತ್ತು ಪುನರ್ವಸು ಕೃತಿ ಲೋಕಾರ್ಪಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಸಾರಾಂಗ ‘ಸೌರಭ’ವನ್ನು ಉದ್ಘಾಟಿಸಿ ಮಾತನಾಡಿದರು.ನಿವೃತ್ತ ಪ್ರಾಧ್ಯಾಪಕ ವಿದ್ವಾನ್ ಉಮಾಕಾಂತ್ ಭಟ್ ಕೆರೆಕೈ ‘ಪುನರ್ವಸು’ ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತಾನಾಡಿದರು.

ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಪ್ರಸಾರಾಂಗದ ಉದ್ದೇಶದ ಕುರಿತು ರಚಿಸಿದ ಸಾಕ್ಷ್ಯ ಚಿತ್ರವನ್ನು ಪ್ರದರ್ಶಿಸಲಾಯಿತು. ನಿವೃತ್ತ ಪ್ರಾಧ್ಯಾಪಕ ವಿದ್ವಾನ್. ಉಮಾಕಾಂತ್ ಭಟ್ ಕೆರೆಕೈ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ. ಎನ್, ಪರೀಕ್ಷಾಂಗ ಕುಲ ಸಚಿವ ಡಾ. ಶ್ರೀಧರ್ ಹೆಚ್.ಜಿ, ಐಕ್ಯೂಎಸಿ ಘಟಕದ ಸಂಯೋಜಕ ಪ್ರೊ.ಶಿವಪ್ರಸಾದ್ ಕೆ. ಎಸ್, ಸ್ನಾತಕೋತ್ತರ ವಿಭಾಗದ ಡೀನ್ ಡಾ.ವಿಜಯ ಸರಸ್ವತಿ ಉಪಸ್ಥಿತರಿದ್ದರು.

ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ವಂದಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮನಮೋಹನ ಎಂ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಯಕ್ಷಗಾನ ತಾಳಮದ್ದಳೆ ವಾಲಿಮೋಕ್ಷ ಪ್ರಸಂಗ ನಡೆಯಿತು.