ಕುಮಾರಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವರ ಸುಗ್ಗಿ ಉತ್ಸವ

| Published : Apr 23 2025, 12:32 AM IST

ಕುಮಾರಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವರ ಸುಗ್ಗಿ ಉತ್ಸವ
Share this Article
  • FB
  • TW
  • Linkdin
  • Email

ಸಾರಾಂಶ

ಕುಮಾರಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವರ ಸುಗ್ಗಿ ಉತ್ಸವ ಶ್ರದ್ಧಾ ಭಕ್ತಿಯೊಂದಿಗೆ ನಡೆಯಿತು.

ಕನ್ನಡಪ್ರಭವಾರ್ತೆ ಸೋಮವಾರಪೇಟೆ

ಸಮೀಪದ ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಕುಮಾರಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವರ ಸುಗ್ಗಿ ಉತ್ಸವ ಶ್ರದ್ಧಾಭಕ್ತಿಯೊಂದಿಗೆ ಸಂಭ್ರಮದಿಂದ ನಡೆಯಿತು.

ಸುಗ್ಗಿ ಕಟ್ಟೆಯಲ್ಲಿ ಗ್ರಾಮಸ್ಥರು ಶ್ರೀ ಸಬ್ಬಮ್ಮ ದೇವರಿಗೆ ಸಾಮೂಹಿಕ ಪೂಜೆ ಸಲ್ಲಿಸಿ, ನಾಡಿನ ಸುಭೀಕ್ಷೆಗಾಗಿ ಪ್ರಾರ್ಥಿಸಿದರು. ದೇವರ ಉತ್ಸವ ಮೂರ್ತಿಯನ್ನು ಅಡ್ಡಪಲ್ಲಕ್ಕಿಯಲ್ಲಿರಿಸಿ ಕೊಂಡ ಹಾಯುವ ಮೂಲಕ ವಿಶೇಷ ಮಡಿವಂತಿಕೆಯೊಂದಿಗೆ ಪೂಜೆ ಸಲ್ಲಿಸಲಾಯಿತು.

ಸಮಿತಿಯ ಅಧ್ಯಕ್ಷ ದೇಶರಾಜು, ಉಪಾಧ್ಯಕ್ಷ ಎಂ.ಎಸ್. ತಮ್ಮಯ್ಯ ಹೆಗ್ಗಡಮನೆ, ಕಾರ್ಯದರ್ಶಿ ಕಿರಣ್ ಬೀದಳ್ಳಿ, ಖಜಾಂಚಿ ಅವಿನಾಶ್ ಕುಮಾರಳ್ಳಿ ಅವರುಗಳು ಸುಗ್ಗಿಯ ಉಸ್ತುವಾರಿ ವಹಿಸಿದ್ದರು. ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಸೇರಿದಂತೆ ಹೆಗ್ಗಡಮನೆ, ಬೀದಳ್ಳಿ, ಕುಮಾರಳ್ಳಿ, ಹಂಚಿನಳ್ಳಿ, ಬಾಚಳ್ಳಿ, ಮಲ್ಲಳ್ಳಿ, ಮಾಲ್‌ಮನೆ, ಕೋಡಳ್ಳಿ ಗ್ರಾಮಗಳ ನೂರಾರು ಗ್ರಾಮಸ್ಥರು ಸುಗ್ಗಿ ಉತ್ಸವದಲ್ಲಿ ಭಾಗಿಯಾಗಿದ್ದರು.