ನಮ್ಮ ಸಂಸ್ಕೃತಿಯಲ್ಲಿ ಧಾರ್ಮಿಕ ಆಚರಣೆ, ನಂಬಿಕೆ ಹಾಗೂ ಪುರಾತನ ಸಂಸ್ಕೃತಿಯ ಆಚರಣೆ ಅಳವಡಿಸಿಕೊಂಡು ಮುಂದಿನ ಪೀಳಿಗೆಗೆ ಉತ್ತಮ ಸಂಸ್ಕಾರಗಳನ್ನು ರೂಡಿಕೊಳ್ಳುವ ನಿಟ್ಟಿನಲ್ಲಿ ಇಂತಹ ಧಾರ್ಮಿಕ ಕಾರ್ಯಕ್ರಮಗಳು ನಡೆಯಬೇಕು.

ಕನ್ನಡಪ್ರಭವಾರ್ತೆ ಶ್ರೀರಂಗಪಟ್ಟಣ

ಶ್ರೀರಂಗಪಟ್ಟಣ ಪುರಸಭಾ ವ್ಯಾಪ್ತಿಯ ಗಂಜಾಂ ಶ್ರೀನಿಮಿಷಾಂಬ ದೇವಾಲಯದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶ್ರೀ ನಿಮಿಷಾಂಬ ದೇವಿಗೆ ಸಾಮೂಹಿಕ ಕುಂಕುಮಾರ್ಚನೆ ಹಾಗೂ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ನಡೆಯಿತು.

ಸಂಸ್ಥೆ ಜಿಲ್ಲಾ ನಿರ್ದೇಶಕಿ ಮಮತಾ ರಾವ್ ಮಾತನಾಡಿ, ನಮ್ಮ ಸಂಸ್ಕೃತಿಯಲ್ಲಿ ಧಾರ್ಮಿಕ ಆಚರಣೆ, ನಂಬಿಕೆ ಹಾಗೂ ಪುರಾತನ ಸಂಸ್ಕೃತಿಯ ಆಚರಣೆ ಅಳವಡಿಸಿಕೊಂಡು ಮುಂದಿನ ಪೀಳಿಗೆಗೆ ಉತ್ತಮ ಸಂಸ್ಕಾರಗಳನ್ನು ರೂಡಿಕೊಳ್ಳುವ ನಿಟ್ಟಿನಲ್ಲಿ ಇಂತಹ ಧಾರ್ಮಿಕ ಕಾರ್ಯಕ್ರಮಗಳು ನಡೆಯಬೇಕು. ಪ್ರಸ್ತುತ ಯುವ ಪೀಳಿಗೆಗಳು ಸಂಸ್ಕಾರ ಕಲಿತುಕೊಳ್ಳುವ ಮೂಲಕ ಮುಂದಿನ ಬೆಳವಣಿಗೆಗೆ ಸಹಕಾರ ನೀಡಬೇಕು. ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗ್ರಾಮಗಳ ಅಭಿವೃದ್ಧಿ, ಕುಟುಂಬ ಆರ್ಥಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ, ಸಮಾಜದಲ್ಲಿನ ಅಸಹಾಯಕರಿಗೆ ಆಶ್ರಯವಾಗುವ ಜೊತೆಗೆ ಅವರ ಸೇವೆಗೆ ನಿರಂತರ ಶ್ರಮ ವಹಿಸುತ್ತದೆ ಎಂದರು.

ದೇವಾಲಯದ ಪ್ರದಾನ ಅರ್ಚಕ ಸೂರ್ಯನಾರಾಯಣ ಭಟ್ ಧಾರ್ಮಿಕ ಪೂಜಾ ವಿಧಿ-ವಿಧಾನಗಳ ಮೂಲಕ ನೆರವೇರಿಸಿ. ಧಾರ್ಮಿಕ ಪ್ರವಚ ನೀಡಿದರು.

ಈ ವೇಳೆ ದೇವಾಲಯ ಸಮಿತಿ ಅಧ್ಯಕ್ಷ ಎಸ್.ಎನ್.ದಯಾನಂದ್, ಸದಸ್ಯೆ ಭಾಗ್ಯಮ್ಮ, ಶಿವಣ್ಣ ಚಂದಗಾಲು, ನಳಿನ, ಶೀಲಾ ನಂಜುಂಡಯ್ಯ, ವಿಶಾಲಾಕ್ಷಿ, ಯೋಜನಾಧಿಕಾರಿ ಗಣಪತಿ ಭಟ್ಟ, ಸುಜಾತಾ, ಪವನ್, ಸಂಗೀತಾ ಉಪಸ್ತಿತರಿದ್ದರು. ನೂರಕ್ಕೂ ಹೆಚ್ಚು ಸಂಘದ ಸದಸ್ಯರು ಸಾಮೂಹಿಕ ದೇವಿ ಪೂಜೆಯಲ್ಲಿ ಪಾಲ್ಗೊಂಡಿದ್ದರು.ಕಾಂಗ್ರೆಸ್ಸಿಗರ ಅರೆಬೆತ್ತಲೆ ಮೆರವಣಿಗೆ ಖಂಡಿಸಿ ಪ್ರತಿಭಟನೆ

ಕನ್ನಡಪ್ರಭ ವಾರ್ತೆ ಮದ್ದೂರು

ದೆಹಲಿಯಲ್ಲಿ ನಡೆಯುತ್ತಿರುವ ಎ.ಐ. ಶೃಂಗ ಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು, ಮುಖಂಡರು ಅರೆಬೆತ್ತಲೆ ಪ್ರತಿಭಟನೆ ನಡೆಸಿರುವ ಕ್ರಮವನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು, ಮುಖಂಡರು ಮಳವಳ್ಳಿ-ಮದ್ದೂರು ಮಾರ್ಗದ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಪಟ್ಟಣದ ಬಿಜೆಪಿ ಕಚೇರಿ ಬಳಿ ಆಗಮಿಸಿದ ಕಾರ್ಯಕರ್ತರು, ಮುಖಂಡರು ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರಲ್ಲದೆ ಇಂತಹ ಪ್ರಕರಣಗಳು ಜರುಗದಂತೆ ಕಾಂಗ್ರೆಸ್ ಪಕ್ಷದ ವರಿಷ್ಠರು ಕಾರ್ಯಕರ್ತರಿಗೆ ಎಚ್ಚರಿಕೆ ನೀಡಬೇಕೆಂದು ಆಗ್ರಹಿಸಿದರು.

ಎ.ಐ ಶೃಂಗ ಸಭೆ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಗುಂಪೊಂದು ಅರೆಬೆತ್ತಲೆ ಪ್ರತಿಭಟನೆ ನಡೆಸುವ ಮೂಲಕ ದೇಶದ ಮಾನ ಹರಾಜು ಮಾಡಿದೆ. ಪಕ್ಷದ ವರಿಷ್ಠ ರಾಹುಲ್‌ಗಾಂಧಿ ಯಾವುದೇ ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿದ್ದು ಮತ್ತು ಇಂತಹ ಕಾರ್ಯಕರ್ತರಿಗೆ ಪ್ರೋತ್ಸಾಹ ನೀಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದರು.

ಬಿಜೆಪಿ ಪಕ್ಷವು ದೇಶದಾದ್ಯಂತ ಎ.ಐ ಶೃಂಗ ಸಭೆ ವೇಳೆ ಅನುಚಿತವಾಗಿ ಮತ್ತು ಅಶ್ಲೀಲವಾಗಿ ನಡೆದುಕೊಂಡಿರುವ ಕಾಂಗ್ರೆಸ್‌ ಕಾರ್ಯಕರ್ತರ ವಿರುದ್ಧ ಪ್ರತಿ ಜಿಲ್ಲೆಯಲ್ಲೂ ಪ್ರತಿಭಟನೆ ನಡೆಸುತ್ತಿದ್ದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಆರ್ಥಿಕತೆ ಮತ್ತು ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸುತ್ತಿದ್ದರೂ ಇದನ್ನು ಸಹಿಸದ ಕಾಂಗ್ರೆಸ್‌ನವರು ಇಂತಹ ಘಟನೆಗಳಿಗೆ ಮುಂದಾಗುತ್ತಿದ್ದಾರೆ ಎಂದು ಆರೋಪಿಸಿದರು.

ಪ್ರತಿಭಟನೆ ವೇಳೆ ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ, ಯುವಮೋರ್ಚಾ ಜಿಲ್ಲಾಧ್ಯಕ್ಷ ಹಾಗಲಹಳ್ಳಿ ರಘು, ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಸಿ.ಕೆ.ಸತೀಶ್, ಯುವಮೋರ್ಚಾ ತಾಲೂಕು ಉಪಾಧ್ಯಕ್ಷ ಎಸ್.ಕೆ.ಅಭಿಷೇಕ್‌ಗೌಡ, ಪದಾಧಿಕಾರಿಗಳಾದ ಎಂ.ಸಿ.ಸಿದ್ಧು, ಮಧುಕುಮಾರ್, ಲಿಂಗಪ್ಪ, ಸಂತೋಷ್ ನೇತೃತ್ವ ವಹಿಸಿದ್ದರು.