ಸಾರಾಂಶ
ಫೆ.16ರಂದು ಸಂಜೆ 7 ಗಂಟೆಗೆ ಶ್ರೀ ಶಾಸ್ತ-ಈಶ್ವರ ದೇವಸ್ಥಾನದಲ್ಲಿ ಅಂದಿಬೊಳಕ್ ನಡೆಯಲಿದೆ. ಫೆ.17ರಂದು ಬೆಳಗ್ಗೆ 7 ಗಂಟೆಗೆ ದೇವರ ತೂಚಂಬಲಿ, 8 ಗಂಟೆಗೆ ಗಣಪತಿ ಹೋಮ, 10 ಗಂಟೆಗೆ ಪ್ರತಿಷ್ಠಾ ಅಲಂಕಾರ ಪೂಜೆ, 11.30ಕ್ಕೆ ಶ್ರೀ ಬೇಟೆ ಅಯ್ಯಪ್ಪ ಸನ್ನಿಧಿಯಲ್ಲಿ ಅಭಿಷೇಕ, 11.45ಕ್ಕೆ ಶ್ರೀ ವಿಷ್ಣುಮೂರ್ತಿ ದೇವ ಸನ್ನಿಧಿಯಲ್ಲಿ ಅಭಿಷೇಕ ಪೂಜೆ ನಡೆಯಲಿದೆ.
ಕನ್ನಡಪ್ರಭ ವಾರ್ತೆ ಮಡಿಕೇರಿ
ಹೊದ್ದೂರು ಗ್ರಾಮದ ರಕ್ಷಕ, ಐತಿಹಾಸಿಕ ಹಿನ್ನೆಲೆಯುಳ್ಳ, ಪವಾಡ ಸದೃಶ ಮಹಿಮೆಯುಳ್ಳ ಶ್ರೀ ಶಾಸ್ತ-ಈಶ್ವರ ಕ್ಷೇತ್ರದಲ್ಲಿ ಶ್ರೀ ಶಾಸ್ತ-ಈಶ್ವರ, ಮಹಾಗಣಪತಿ, ಶ್ರೀ ಬೇಟೆ ಅಯ್ಯಪ್ಪ ಹಾಗೂ ಶ್ರೀ ವಿಷ್ಣುಮೂರ್ತಿ ದೇವತೆಗಳ 4ನೇ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವವು ಫೆ.16ರಿಂದ 18ರ ವರೆಗೆ ನಡೆಯಲಿದೆ.ದೇವಾಲಯದಲ್ಲಿ ಮೂರು ದಿನಗಳ ಕಾಲ ಜಯರಾಜ್ ತಂತ್ರಿಗಳ ಮಾರ್ಗದರ್ಶನದಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ.ಫೆ.16ರಂದು ಸಂಜೆ 7 ಗಂಟೆಗೆ ಶ್ರೀ ಶಾಸ್ತ-ಈಶ್ವರ ದೇವಸ್ಥಾನದಲ್ಲಿ ಅಂದಿಬೊಳಕ್ ನಡೆಯಲಿದೆ. ಫೆ.17ರಂದು ಬೆಳಗ್ಗೆ 7 ಗಂಟೆಗೆ ದೇವರ ತೂಚಂಬಲಿ, 8 ಗಂಟೆಗೆ ಗಣಪತಿ ಹೋಮ, 10 ಗಂಟೆಗೆ ಪ್ರತಿಷ್ಠಾ ಅಲಂಕಾರ ಪೂಜೆ, 11.30ಕ್ಕೆ ಶ್ರೀ ಬೇಟೆ ಅಯ್ಯಪ್ಪ ಸನ್ನಿಧಿಯಲ್ಲಿ ಅಭಿಷೇಕ, 11.45ಕ್ಕೆ ಶ್ರೀ ವಿಷ್ಣುಮೂರ್ತಿ ದೇವ ಸನ್ನಿಧಿಯಲ್ಲಿ ಅಭಿಷೇಕ ಪೂಜೆ ನಡೆಯಲಿದೆ.ಮಧ್ಯಾಹ್ನ 12 ಗಂಟೆಗೆ ಶ್ರೀ ಈಶ್ವರ ದೇವರ ನೆರ್‌ಪು ಬಲಿ, ಮಹಾಪೂಜೆ, ಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿತರಣೆ ನಡೆಯಲಿದ್ದು, 1 ಗಂಟೆಗೆ ಅನ್ನಸಂತರ್ಪಣೆ ನೆರವೇರಲಿದೆ. ಸಂಜೆ 4 ಗಂಟೆಗೆ ಕಾವೇರಿ ಹೊಳೆಯಲ್ಲಿ ದೇವರ ಜಳಕ, ಗ್ರಾಮದ ಮುಖ್ಯ ರಸ್ತೆಯಲ್ಲಿ ಚಂಡೆ ಮದ್ದಳೆಯೊಂದಿಗೆ ಮೆರವಣಿಗೆ, ಸಂಜೆ 6.30ರ ನಂತರ ದೇವಾಲಯದಲ್ಲಿ ವಿವಿಧ ನೃತ್ಯ (ತಡಂಬ್ ಆಟ್), ಸಂಪ್ರೋಕ್ಷಣೆ, ಅನ್ನದಾನ ನಡೆಯಲಿದೆ. ರಾತ್ರಿ 9 ಗಂಟೆಗೆ ಶ್ರೀ ವಿಷ್ಣುಮೂರ್ತಿ ದೈವದ ತೋಯತ ತೆರೆ, ಮೇಲೇರಿ ಅಗ್ನಿಸ್ಪರ್ಶ ನಡೆಯಲಿದೆ.ಫೆ.18ರಂದು ಬೆಳಗ್ಗೆ 8.30ಕ್ಕೆ ಶ್ರೀ ವಿಷ್ಣುಮೂರ್ತಿ ದೈವದ ಕೋಲ ನಡೆಯಲಿದ್ದು, ಫೆ.19ರಂದು ಬೆಳಗ್ಗೆ 10 ಗಂಟೆಗೆ ದೇವಾಲಯದಲ್ಲಿ ಶುದ್ಧಕಲಶ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಕೂಡಂಡ ರಾಜೇಂದ್ರ ಅಯ್ಯಮ್ಮ ಹಾಗೂ ಆಡಳಿತ ಮಂಡಳಿ ಕೋರಿದೆ.