ಕಳ್ಳಿಕೊಪ್ಪ ಶ್ರೀ ವೀರಾಂಜನೇಯ ದೇವಸ್ಥಾನ ಪ್ರತಿಷ್ಠಾಪನಾ ಮಹೋತ್ಸವ

| Published : Mar 11 2024, 01:18 AM IST

ಕಳ್ಳಿಕೊಪ್ಪ ಶ್ರೀ ವೀರಾಂಜನೇಯ ದೇವಸ್ಥಾನ ಪ್ರತಿಷ್ಠಾಪನಾ ಮಹೋತ್ಸವ
Share this Article
  • FB
  • TW
  • Linkdin
  • Email

ಸಾರಾಂಶ

ತಾಲೂಕಿನ ಕಳ್ಳಿಕೊಪ್ಪದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ವೀರಾಂಜನೇಯಸ್ವಾಮಿ ದೇವಸ್ಥಾನ ಹಾಗೂ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ ಮಾರ್ಚ್ 11,12 ಹಾಗೂ 13 ರಂದು ನಡೆಯಲಿದೆ ಎಂದು ವೀರಾಂಜನೇಯ ಸ್ವಾಮಿ ದೇವಸ್ಥಾನದ ಸಮಿತಿ ಅಧ್ಯಕ್ಷ ಜಿ. ಸುಕುಮಾರ್ ತಿಳಿಸಿದ್ದಾರೆ.

ನರಸಿಂಹರಾಜಪುರ: ತಾಲೂಕಿನ ಕಳ್ಳಿಕೊಪ್ಪದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ವೀರಾಂಜನೇಯಸ್ವಾಮಿ ದೇವಸ್ಥಾನ ಹಾಗೂ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ ಮಾರ್ಚ್ 11,12 ಹಾಗೂ 13 ರಂದು ನಡೆಯಲಿದೆ ಎಂದು ವೀರಾಂಜನೇಯ ಸ್ವಾಮಿ ದೇವಸ್ಥಾನದ ಸಮಿತಿ ಅಧ್ಯಕ್ಷ ಜಿ. ಸುಕುಮಾರ್ ತಿಳಿಸಿದ್ದಾರೆ.

ಕರ್ಕಿ ರಮಾನಂದ ಭಟ್‌ ನೇತ್ರತ್ವದಲ್ಲಿ ಸೋಮವಾರ ಹಾಗೂ ಮಂಗಳವಾರ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಮಾರ್ಚ್ 13 ರ ಬುಧವಾರ ಬೆಳಿಗ್ಗೆ ನಾಗದೇವರ ಪ್ರತಿಷ್ಠೆ, ಆಂಜನೇಯ ಸ್ವಾಮಿ ಪ್ರತಿಷ್ಠೆ, ಪ್ರಾಣ ಪ್ರತಿಷ್ಠೆ ಪೂಜೆ. ಪ್ರತಿಷ್ಠಾ ಹೋಮ, ನಾಗ ಮೂಲಮಂತ್ರ ಹೋಮ, ಆಂಜನೇಯ ಮೂಲ ಮಂತ್ರ ಹೋಮ,ತತ್ವ ಕಲಾ ಹೋಮ, ನವಕ ಪ್ರಧಾನ, ಬ್ರಹ್ಮ ಕುಂಭ ಸ್ಥಾಪನೆ ಪೂಜೆ, ಸ್ವಾಮಿ ನಾಗ ಮತ್ತು ಶ್ರೀ ಆಂಜನೇಯಗೆ ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ಬ್ರಹ್ಮ ಕುಂಭಾಭಿಷೇಕ ನಡೆಯಲಿದೆ. ನಂತರ ಹರಿಹರಪುರ ಮಠದ ಸ್ವಯಂ ಪ್ರಕಾಶ ಶ್ರೀ ಸಚ್ಚಿದಾನಂದ ಸರಸ್ವತೀ ಮಹಾ ಸ್ವಾಮೀಜಿ ಹಾಗೂ ಸಿಂಹನಗದ್ದೆ ಬಸ್ತಿಮಠದ ಶ್ರೀ ಲಕ್ಷ್ಮೀಸೇನ ಭಟ್ಟಾರಕ ಸ್ವಾಮೀಜಿ ಅಮೃತ ಹಸ್ತದಿಂದ ಪೂಜೆ, ಕುಂಭಾಭಿಷೇಕ ನೆರವೇರಲಿದೆ. ಮಧ್ಯಾಹ್ನ 12.30 ಗಂಟೆಗೆ ಧಾರ್ಮಿಕ ಸಭೆ ನಡೆಯಲಿದ್ದು ಹರಿಹರಪುರ ಮಠದ ಶ್ರೀಗಳು ಹಾಗೂ ಬಸ್ತಿಮಠದ ಶ್ರೀಗಳು ದಿವ್ಯ ಸಾನ್ನಿದ್ಯ ವಹಿಸಲಿದ್ದಾರೆ. ದೇವಸ್ಥಾನದ ಸಮಿತಿ ಅಧ್ಯಕ್ಷ ಜಿ.ಸುಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಟಿ.ಡಿ.ರಾಜೇಗೌಡ, ಮಾಜಿ ಸಚಿವ ಡಿ.ಎನ್.ಜೀವರಾಜ್‌, ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.