ಸಾರಾಂಶ
ಪರ್ಯಾಯ ಪುತ್ತಿಗೆ ಶ್ರೀಗಳ ಯೋಜನೆಗಳಲ್ಲಿ ಒಂದಾಗ ಗೀತಾ ಪಾರಾಯಣಕ್ಕೆ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಶುಕ್ರವಾರ ಗೀತಾಮಂದಿರದಲ್ಲಿ ಚಾಲನೆ ನೀಡಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಪುತ್ತಿಗ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಘೋಷಿಸಿರುವ ತಮ್ಮ ಪರ್ಯಾಯದ ಯೋಜನೆಗಳಲ್ಲೊಂದಾದ ಅಖಂಡ ಉದಯಾಸ್ತಮಾನ ಗೀತಾ ಪಾರಾಯಣಕ್ಕೆ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಶುಕ್ರವಾರ ಗೀತಾಮಂದಿರದಲ್ಲಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರು, ಕಿರಿಯ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ಸಾನಿಧ್ಯ ವಹಿಸಿದ್ದರು. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.ಕೃಷ್ಣಾನುಗ್ರಹ ಪ್ರಶಸ್ತಿ: ಪರ್ಯಾಯೋತ್ಸವದಂಗವಾಗಿ ಶುಕ್ರವಾರ ರಾಜಾಂಗಣದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಹಿರಿಯ ವಿದ್ವಾಂಸ ವ್ಯಾಸನಕೆರೆ ಪ್ರಭಾಂಜನಾಚಾರ್ಯ ಅವರಿಗೆ ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿಯನ್ನು ಪರ್ಯಾಯ ಶ್ರೀ ಪಾದರು ಪ್ರದಾನ ಮಾಡಿದರು. ಪುತ್ತಿಗೆ ಕಿರಿಯ ಶ್ರೀಪಾದರು ಮತ್ತು ಭಂಡಾರಕೇರಿ ಮಠದ ಶ್ರೀ ವಿದ್ಯೇಶ ತೀರ್ಥರು ಸಾನಿಧ್ಯ ವಹಿಸಿದ್ದರು. ಶತಾವದಾನಿ ರಾಮನಾಥ ಆಚಾರ್ಯರು ಉಪಸ್ಥಿತರಿದ್ದರು.ಶುಕ್ರವಾರ ಮಧ್ವನವಮಿ ಪ್ರಯುಕ್ತ ಶ್ರೀ ಅನಂತೇಶ್ವರ ದೇವಸ್ಥಾನದ ಮಧ್ವಾಚಾರ್ಯರ ಸನ್ನಿಧಿಯಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀಪಾದರು ಮತ್ತಿ ಕಿರಿಯ ವಿಶೇಷ ಪೂಜೆ ನೆರವೇರಿಸಿದರು. ನಂತರ ರಥಬೀದಿಯಲ್ಲಿ ಶ್ರೀ ಮಧ್ವಾಚಾರ್ಯರ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು.
;Resize=(128,128))
;Resize=(128,128))
;Resize=(128,128))
;Resize=(128,128))