ಸಾರಾಂಶ
ಕಾಂಗ್ರೆಸ್ ಮುಖಂಡ ಎಚ್. ಪಿ. ಶ್ರೀಧರ್ ಗೌಡರ ಹುಟ್ಟುಹಬ್ಬವನ್ನು ಅಭಿಮಾನಿ ಬಳಗದ ವತಿಯಿಂದ ಜೂ.25ರಂದು ಕೊಣನೂರಿನಲ್ಲಿ ಆಚರಿಸಲಾಗುತ್ತಿದೆ ಎಂದು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎ. ವಿ. ಗುರುಮೂರ್ತಿ ತಿಳಿಸಿದ್ದಾರೆ. ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ (ಮಹಿಳೆ ಮತ್ತು ಹೃದಯ ಸಂಬಂಧಿತ) ಶಿಬಿರದಲ್ಲಿ ಉಚಿತವಾಗಿ ಎಕೋ ಪರೀಕ್ಷೆ, ಇಸಿಜಿ, ರಕ್ತ ಪರಿಕ್ಷೆ ಮಾಡಲಾಗುವುದು ಹಾಗೂ ವೇದಿಕೆ ಕಾರ್ಯಕ್ರಮವು ಕೊಣನೂರಿನ ವಿನುತಾ ಕಲ್ಯಾಣ ಮಂಟಪದಲ್ಲಿ ಸಂಜೆ 6 ಗಂಟೆಗೆ ನಡೆಯಲಿದೆ.
ಕನ್ನಡಪ್ರಭ ವಾರ್ತೆ ಅರಕಲಗೂಡು
ಕಾಂಗ್ರೆಸ್ ಮುಖಂಡ ಎಚ್. ಪಿ. ಶ್ರೀಧರ್ ಗೌಡರ ಹುಟ್ಟುಹಬ್ಬವನ್ನು ಅಭಿಮಾನಿ ಬಳಗದ ವತಿಯಿಂದ ಜೂ.25ರಂದು ಕೊಣನೂರಿನಲ್ಲಿ ಆಚರಿಸಲಾಗುತ್ತಿದೆ ಎಂದು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎ. ವಿ. ಗುರುಮೂರ್ತಿ ತಿಳಿಸಿದ್ದಾರೆ.ಹುಟ್ಟುಹಬ್ಬದ ಅಂಗವಾಗಿ ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ (ಮಹಿಳೆ ಮತ್ತು ಹೃದಯ ಸಂಬಂಧಿತ) ಶಿಬಿರದಲ್ಲಿ ಉಚಿತವಾಗಿ ಎಕೋ ಪರೀಕ್ಷೆ, ಇಸಿಜಿ, ರಕ್ತ ಪರಿಕ್ಷೆ ಮಾಡಲಾಗುವುದು ಹಾಗೂ ವೇದಿಕೆ ಕಾರ್ಯಕ್ರಮವು ಕೊಣನೂರಿನ ವಿನುತಾ ಕಲ್ಯಾಣ ಮಂಟಪದಲ್ಲಿ ಸಂಜೆ 6 ಗಂಟೆಗೆ ನಡೆಯಲಿದೆ. ವೇದಿಕೆ ಕಾರ್ಯಕ್ರಮದಲ್ಲಿ ಅರೇಮಾಧನಹಳ್ಳಿ ಮಠದ ಶ್ರೀ ಶಿವಸುಜ್ಞಾನತೀರ್ಥ ಸ್ವಾಮೀಜಿ, ಅರಕಲಗೂಡು ದೊಡ್ಡ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಕೆಸವತ್ತೂರು ಸಿದ್ದಲಿಂಗೇಶ್ವರ ವಿರಕ್ತಮಠದ ಶ್ರೀ ಬಸವರಾಜೇಂದ್ರ ಸ್ವಾಮೀಜಿ, ಮರಿಯಾನಗರದ ಚರ್ಚಿನ ಫಾದರ್, ಕೊಣನೂರು ಮಸೀದಿಯ ಗುರುಗಳಾದ ಶ್ರೀ ಮಹಮದ್ ರಿಜ್ವಾನ್ ಹಾಗೂ ಸಂಸದ ಶ್ರೇಯಸ್ ಎಂ ಪಟೇಲ್, ಶಾಸಕ ಶಿವಲಿಂಗೇಗೌಡರು ಮತ್ತು ಕಾಂಗ್ರೇಸ್ ಪಕ್ಷದ ಎಲ್ಲಾ ಜಿಲ್ಲಾ ಮುಖಂಡರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಶಿಕ್ಷಣ, ಅರೋಗ್ಯ, ಕೃಷಿ, ಹೈನುಗಾರಿಕೆ, ಸಾಹಿತ್ಯ, ಚಿತ್ರಕಲೆ ಕ್ಷೇತ್ರಗಳಲ್ಲಿ ಮತ್ತು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮನವಿ ಮಾಡಿದ್ದಾರೆ.