ಸಾರಾಂಶ
ಯಲ್ಲಾಪುರದ ವಿಶ್ವದರ್ಶನ ಪಪೂ ಕಾಲೇಜು ವಿದ್ಯಾರ್ಥಿನಿ ಶ್ರೀಗೌರಿ ಭಟ್ಟ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಪ್ರಥಮ ಸ್ಥಾನ ಪಡೆದು ಪ್ರಶಸ್ತಿ ಸ್ವೀಕರ
ಯಲ್ಲಾಪುರ:
ಕರ್ನಾಟಕ ಸರ್ಕಾರದ ಶಾಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಬೆಂಗಳೂರು, ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಸಹಯೋಗದಲ್ಲಿ ಬೆಂಗಳೂರಿನ ಕ್ರೈಸ್ಟ್ ಪಿಯು ಕಾಲೇಜಿನಲ್ಲಿ ಇತ್ತೀಚೆಗೆ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮ ನಡೆಯಿತು.ಜಿಲ್ಲೆಯ ಯಲ್ಲಾಪುರದ ವಿಶ್ವದರ್ಶನ ಪಪೂ ಕಾಲೇಜು ವಿದ್ಯಾರ್ಥಿನಿ ಶ್ರೀಗೌರಿ ಭಟ್ಟ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಪ್ರಥಮ ಸ್ಥಾನ ಪಡೆದು ಪ್ರಶಸ್ತಿ ಸ್ವೀಕರಿಸಿದಳು. ವಿದ್ಯಾರ್ಥಿಗೆ ಮಾರ್ಗದರ್ಶಕರಾಗಿ ಉಪನ್ಯಾಸಕಿ ಕವಿತಾ ಹೆಬ್ಬಾರ ಬೆಂಗಳೂರಿಗೆ ತೆರಳಿದ್ದರು. ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕಿ ಸಿಂಧು ರೂಪೇಶ್ ಪ್ರಶಸ್ತಿ ಪ್ರದಾನ ಮಾಡಿದರು. ವೇದಿಕೆಯಲ್ಲಿ ನಾಡೋಜ ಪ್ರಶಸ್ತಿ ಪುರಸ್ಕೃತ ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.