ಸಾರಾಂಶ
ಕನ್ನಡಪ್ರಭ ವಾರ್ತೆ ನಾಗಮಂಗಲ
ಆದಿಚುಂಚನಗಿರಿ ಮಹಾ ಸಂಸ್ಥಾನಮಠದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ರಾತ್ರಿ ನಡೆದ ಶ್ರೀಕಾಲಭೈರವೇಶ್ವರ ತಿರುಗಣಿ ಉತ್ಸವ ಮತ್ತು ಪುಷ್ಕರಣಿಯಲ್ಲಿ ನಡೆದ ತೆಪ್ಪೋತ್ಸವವನ್ನು ಅಪಾರಸಂಖ್ಯೆಯ ಭಕ್ತರು ವೀಕ್ಷಿಸಿ ಕಣ್ತುಂಬಿಕೊಂಡರು.ವಿವಿಧ ಬಗೆಯ ಹೂವು ಮತ್ತು ವಿದ್ಯುತ್ ದೀಪಗಳಿಂದ ಸಿಂಗರಿಸಿದ್ದ ತೆಪ್ಪೋತ್ಸವಕ್ಕೆ ಪೂಜೆ ಸಲ್ಲಿಸಿದ ನಿರ್ಮಲಾನಂದನಾಥ ಶ್ರೀಗಳು ತೆಪ್ಪದಲ್ಲಿ ಕುಳಿತು ನೆರೆದಿದ್ದ ಭಕ್ತಾದಿಗಳಿಗೆ ದರ್ಶನಾಶೀರ್ವಾದ ನೀಡಿದರು. ಚಿನ್ನದ ಕಿರೀಟ ಧರಿಸಿ ಸರ್ವಾಲಂಕಾರ ಭೂಷಿತರಾಗಿ ತೆಪ್ಪೋತ್ಸವದಲ್ಲಿ ಕುಳಿತ್ತಿದ್ದ ಶ್ರೀಗಳನ್ನು ನೋಡಿ ಕಣ್ತುಂಬಿಕೊಂಡ ಭಕ್ತರು ತಮ್ಮ ಭಕ್ತಿಭಾವ ಸಮರ್ಪಿಸಿದರು.
ತೆಪ್ಪೋತ್ಸವ ಆರಂಭಗೊಳ್ಳುತ್ತಿದ್ದಂತೆ ಬಣ್ಣ ಬಣ್ಣದ ಪಟಾಕಿಗಳು ಸಿಡಿದು ಬಾನಂಗಳದಲ್ಲಿ ಚಿತ್ತಾರಗಳು ಬಿಡಿಸಿದವು. ವಿದ್ಯುತ್ ದೀಪಾಲಂಕಾರಗಳಿಂದ ಕಂಗೊಳಿಸುತ್ತಿದ್ದ ಆದಿಚುಂಚನಗಿರಿ ಮಹಾಸಂಸ್ಥಾನಮಠ ಈ ಬಾರಿ ಜಾತ್ರಾ ಮಹೋತ್ಸವದಲ್ಲಿ ನೆರೆದಿದ್ದ ಭಕ್ತರಿಗೆ ವಿಶೇಷ ಮೆರಗು ನೀಡಿತ್ತು.ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥಸ್ವಾಮೀಜಿ, ಶ್ರೀಮಠದ ಚೈತನ್ಯನಾಥಸ್ವಾಮೀಜಿ ಸೇರಿದಂತೆ ವಿವಿಧ ಶಾಖಾಮಠಗಳ ಶ್ರೀಗಳು ಹಾಗೂ ಸಹಸ್ರಾರು ಮಂದಿ ಭಕ್ತರು ಇದ್ದರು.
ನಾಳೆ ಸರ್ವಸದಸ್ಯರ ಸಭೆಮಂಡ್ಯ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಮಂಡ್ಯ ಜಿಲ್ಲಾ ಶಾಖೆಯ 2022-23 ಮತ್ತು 23-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಮಾ.15 ರಂದು ಬೆಳಗ್ಗೆ 10.30ಕ್ಕೆ ನಗರದ ರೆಡ್‌ಕ್ರಾಸ್ ಭವನದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿಗಳೂ ಆದ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಅಧ್ಯಕ್ಷ ಡಾ. ಕುಮಾರ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಗೆ ಸಂಸ್ಥೆಯ ಎಲ್ಲಾ ಸದಸ್ಯರು ಹಾಜರಾಗುವಂತೆ ಸಂಸ್ಥೆಯ ಕಾರ್ಯದರ್ಶಿ ಡಾ.ಕೆ.ಎಂ. ಶಿವಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವೇದ ಬ್ರಹ್ಮ ಡಾ. ಭಾನುಪ್ರಕಾಶ್ ಶರ್ಮಾ ಬಿರುಸಿನ ಪ್ರಚಾರಶ್ರೀರಂಗಪಟ್ಟಣ:
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ)ದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಖ್ಯಾತ ಜ್ಯೋತಿಷಿ, ವೇದ ಬ್ರಹ್ಮ ಡಾ. ಭಾನುಪ್ರಕಾಶ್ ಶರ್ಮಾ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.ಅಧ್ಯಕ್ಷ ಸ್ಥಾನದ ಪ್ರಲ ಆಕಾಂಕ್ಷಿ ಡಾ.ಭಾನುಪ್ರಕಾಶ್ ಶರ್ಮಾ ಅವರು ರಾಜ್ಯಾದ್ಯಂತ ಪ್ರವಾಸ ಕೈಗೊಂಡು ವಿವಿಧ ಜಿಲ್ಲೆಯ ಬ್ರಾಹ್ಮಣ ಸಂಘದ ಮುಖಂಡರು, ಸಮುದಾಯದ ಮುಖಂಡರು, ಪ್ರಮುಖರು ಹಾಗೂ ಮತದಾರನ್ನು ಭೇಟಿ ಮಾಡಿ, ಸಹಕಾರವನ್ನು ಕೇಳಿ ಬಾರಿ ಗೆಲ್ಲಿಸುವಂತೆ ಮನವಿ ಮಾಡುತ್ತಿದ್ದಾರೆ.
ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾಸಭಾದ ಹಾಲಿ ಅಧ್ಯಕ್ಷರು ಸೇರಿದಂತೆ ಸಮುದಾಯದ ಬಹುತೇಕ ಪ್ರಮುಖರು ನನಗೆ ಬೆಂಬಲ ವ್ಯಕ್ತಪಡಿಸಿರುವುದಾಗಿ ತಿಳಿಸಿದ್ದಾರೆ. ಈ ಬಾರಿ ಗೆದ್ದು ಮಹಾ ಸಭಾದ ಸದಸ್ಯರಿಗೆ ಹಲವು ಉತ್ತಮ ಯೋಜನೆಗಳನ್ನು ಜಾರಿಗೊಳಿಸುವ ಗುರಿ ಹೊಂದಲಾಗಿದೆ ಎಂದರು.ಸಮುದಾಯದ ಜನತೆ ಹಾಗೂ ಬಡವರಿಗೆ ಅನುಕೂಲವಾಗುವಂತೆ ಪ್ರಮುಖ ಪ್ರದೇಶಗಳಲ್ಲಿ ಸಮುದಾಯ ಭವನಗಳ ನಿರ್ಮಾಣ, ಬಡವರಿಗೆ ಉಚಿತ ಆರೋಗ್ಯ ಚಿಕಿತ್ಸೆ, ವಿಮಾ ಯೋಜನೆಗಳು ಸೇರಿದಂತೆ ಹಲವು ಸಾಮಾಜಮುಖಿ ಯೋಜನೆಗಳನ್ನು ಜಾರಿಗೊಳಿಸಲು ಆಶಯ ಹೊಂದಿದ್ದೇನೆ. ಈ ಬಗ್ಗೆ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ತಿಳಿಸಿದರು.
ಈ ವೇಳೆ ಮಹಾ ಸಭಾದ ಮುಖಂಡರು ಜೊತೆಯಲ್ಲಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))