ಶ್ರೀಕ್ಷೇತ್ರ ಧರ್ಮಸ್ಥಳ ದೇಶದ ಏಕೈಕ ಸಾಮಾಜಿಕ ಸೇವಾ ಸಂಸ್ಥೆ: ಮಲ್ಲಿಕಾರ್ಜುನ್

| Published : Feb 04 2025, 12:30 AM IST

ಶ್ರೀಕ್ಷೇತ್ರ ಧರ್ಮಸ್ಥಳ ದೇಶದ ಏಕೈಕ ಸಾಮಾಜಿಕ ಸೇವಾ ಸಂಸ್ಥೆ: ಮಲ್ಲಿಕಾರ್ಜುನ್
Share this Article
  • FB
  • TW
  • Linkdin
  • Email

ಸಾರಾಂಶ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರ ಆರ್ಥಿಕ, ಶೈಕ್ಷಣಿಕ, ಕೃಷಿ, ಆರೋಗ್ಯ, ಸಾಮಾಜಿಕ ಸಬಲೀಕರಣ ಜತೆಯಲ್ಲಿ ಧಾರ್ಮಿಕ ತಳಹದಿಯಲ್ಲೂ ಕಾರ್ಯ ನಿರ್ವಹಿಸುತ್ತಿರುವ ದೇಶದ ಏಕೈಕ ಸಾಮಾಜಿಕ ಸೇವಾ ಸಂಸ್ಥೆಯಾಗಿದೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರ ಆರ್ಥಿಕ, ಶೈಕ್ಷಣಿಕ, ಕೃಷಿ, ಆರೋಗ್ಯ, ಸಾಮಾಜಿಕ ಸಬಲೀಕರಣ ಜತೆಯಲ್ಲಿ ಧಾರ್ಮಿಕ ತಳಹದಿಯಲ್ಲೂ ಕಾರ್ಯ ನಿರ್ವಹಿಸುತ್ತಿರುವ ದೇಶದ ಏಕೈಕ ಸಾಮಾಜಿಕ ಸೇವಾ ಸಂಸ್ಥೆಯಾಗಿದೆ ಎಂದು ಸಮಾಜ ಸೇವಕ ಆರ್.ಟಿ.ಒ ಮಲ್ಲಿಕಾರ್ಜುನ್ ಹೇಳಿದರು.

ತಾಲೂಕಿನ ಅಕ್ಕಿಹೆಬ್ಬಾಳು ವಲಯದ ಹೊನ್ನಾರು ವೇದಿಕೆಯ ಆವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಅಕ್ಕಿಹೆಬ್ಬಾಳು ಮತ್ತು ದಡದಹಳ್ಳಿ ಗ್ರಾಮಸ್ಥರ ಆಶ್ರಯದಲ್ಲಿ ಆಯೋಜಿಸಿದ್ದ ಶ್ರೀಸೀತಾರಾಮ ಲಕ್ಷ ತುಳಸಿ ಅರ್ಚನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರು ಆತ್ಮಸ್ಥೆರ್ಯದೊಂದಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಸದೃಢರಾದರೆ ಸಮಾಜದಲ್ಲಿ ಸುಖಿ ಜೀವನ ನಡೆಸಬಹುದೆಂಬ ಮೂಲ ಆಶಯ ಇಟ್ಟುಕೊಂಡು ಗ್ರಾಮಾಭಿವೃದ್ಧಿ ಯೋಜನೆ ಸ್ಥಾಪಿಸಿದ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ಕನಸು ನನಸಾಗಿದೆ ಎಂದರು.

ಮೈಕ್ರೋ ಪೈನಾಲ್ಸ್ ಗಳ ಕಿರುಕುಳ ಹೆಚ್ಚುತ್ತಿರುವುದನ್ನು ರಾಜ್ಯದ ಜನತೆ ಗಮನಿಸಿದ್ದಾರೆ. ಆದರೆ, ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಲ್ಲಿ ಸಂಸ್ಥೆ ಮೂಲಕ ಎಲ್ಲರ ರಾಜ್ಯಾದ್ಯಂತ ಸಮಾಜಮುಖಿ ಕಾರ್ಯಕ್ರಮ ಕೈಗೊಂಡು ಒಂದು ನಂಬಿಕೆಯ ಆಧಾರದ ಮೇಲೆ ಯಾವುದೇ ದಾಖಲೆಗಳ ಜಂಜಾಟವಿಲ್ಲದೆ ಸಾಲ ನೀಡುತ್ತಿದೆ ಎಂದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಟ್ರಸ್ಟ್ ಬಗೆಗಿನ ಮಾಹಿತಿ ಕೊರತೆಯಿಂದ ಕೆಲ ಜನರು ಶ್ರೀಧರ್ಮಸ್ಥಳ ಸಂಘದ ಬಗ್ಗೆ ವದಂತಿ ಸೃಷ್ಟಿಸಲು ಹೊರಟಿದ್ದಾರೆ. ಇಂತಹ ವದಂತಿಗಳಿಗೆ ಕಿವಿ ಕೊಡಬಾರದು ಎಂದರು.

ಜೆಡಿಎಸ್ ಮುಖಂಡ ಎ.ಆರ್.ರಘು ಮಾತನಾಡಿ, ಗ್ರಾಮೀಣ ಮಹಿಳೆಯರ ಆರ್ಥಿಕ ಸದೃಢತೆ, ಆರ್ಥಿಕ ಸಶಕ್ತಿಕರಣ, ಗ್ರಾಮಾಭಿವೃದ್ಧಿ ಪರಿಕಲ್ಪನೆಯಲ್ಲಿ ಸ್ಥಾಪಿಸಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ಮೂಲ ಉದ್ದೇಶ ಹಲವು ಕಾರ್ಯಕ್ರಮಗಳ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಶೇ.65 ರಷ್ಟು ಪ್ರಗತಿ ಸಾಧಿಸುತ್ತಿದೆ ಎಂದರು.

ಸಂಸ್ಥೆ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ಮಾತನಾಡಿದರು. ಈ ವೇಳೆ ಗ್ರಾಪಂ ಅಧ್ಯಕ್ಷ ಹರೀಶ್, ಕಸಾಪ ತಾಲೂಕು ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ, ಸಂಸ್ಥೆ ಯೋಜನಾಧಿಕಾರಿ ತಿಲಕ್ ರಾಜ್, ಅರ್ಚಕ ಶ್ರೀನಿವಾಸ್, ವಲಯ ಸಮಿತಿ ಸ್ವ ಸಹಾಯ ಸಂಘಗಳ ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.