ಶೃಂಗೇರಿ: ಮತದಾನಕ್ಕೆ ಬಂದೋಬಸ್ತ್‌

| Published : Apr 26 2024, 12:47 AM IST

ಸಾರಾಂಶ

ಶೃಂಗೇರಿ ಲೋಕಸಭಾ ಚುನಾವಣೆಗೆ ಶಾಂತಿಯುತ ಮತದಾನ ನಡೆಸುವ ನಿಟ್ಟಿನಲ್ಲಿ ತಾಲೂಕಿನ ಎಲ್ಲಾ ಮತಗಟ್ಟೆಗಳ ಬಳಿ ಪೊಲೀಸ್ ಬಂದೋಬಸ್ತ್ ಆಯೋಜಿಸಿ ಸಕಲ ಸಿದ್ಧತೆ ಮಾಡಲಾಗಿದೆ.

ಶೃಂಗೇರಿ: ಲೋಕಸಭಾ ಚುನಾವಣೆಗೆ ಶಾಂತಿಯುತ ಮತದಾನ ನಡೆಸುವ ನಿಟ್ಟಿನಲ್ಲಿ ತಾಲೂಕಿನ ಎಲ್ಲಾ ಮತಗಟ್ಟೆಗಳ ಬಳಿ ಪೊಲೀಸ್ ಬಂದೋಬಸ್ತ್ ಆಯೋಜಿಸಿ ಸಕಲ ಸಿದ್ಧತೆ ಮಾಡಲಾಗಿದೆ.

ಗುರುವಾರ ಬೆಳಿಗ್ಗೆಯಿಂದಲೇ ಎಲ್ಲಾ ಮತಗಟ್ಟೆಗಳಿಗೆ ಅಧಿಕಾರಿಗಳು ಸಿಬ್ಬಂದಿ ನಿಯೋಜಿಸಲಾಗಿದ್ದು, ಮದ್ಯಾಹ್ನದಿಂದ ಪೊಲೀಸರನ್ನು ನಿಯೋಜಿಸಲಾಗಿದೆ. ಸಂಜೆ ಮತ್ತಷ್ಟು ಪೊಲೀಸ್‌ ಪಡೆಯನ್ನು ನಿಯೋಜಿಸಲಾಗಿದೆ. ಮದ್ಯ ಮಾರಾಟ ನಿಷೇಧಿಸಲಾಗಿದ್ದು, ಅಬಕಾರಿ ಇಲಾಖೆ ತಾಲೂಕಿನಾದ್ಯಂತ ತೀವ್ರ ಕಟ್ಟೆಚ್ಚರ ವಹಿಸುತ್ತಿದೆ.

ಬುಧವಾರದವರೆಗೂ ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ತಮ್ಮ ಅಭ್ಯರ್ಥಿ ಪರ ಮನೆ ಮನೆಗೆ ತೆರಳಿ ಮತಯಾಚಿಸಿದರು. ಗುರುವಾರದಿಂದ ಮತದಾನಕ್ಕಾಗಿ ಕ್ಷಣಗಣನೆ ಆರಂಭಗೊಂಡಿದ್ದು ಎಲ್ಲೆಡೆ ಚುನಾವಣಾ ಅಧಿಕಾರಿಗಳು, ಪೋಲೀಸರು ತಮ್ಮ ಕಾರ್ಯನಿರ್ವಹಿಸಿದರು.

25 ಶ್ರೀ ಚಿತ್ರ 1-ಶೃಂಗೇರಿ ತಾಲೂಕಿನ ನೆಮ್ಮಾರು ಮತಗಟ್ಟೆ ಬಳಿ ಗುರುವಾರ ಸಂಜೆ ಪೋಲೀಸ್ ಬಂದೋಬಸ್ತ್‌ ಕಂಡುಬಂದಿತು.