ಸಾರಾಂಶ
ಪಟ್ಟಣದಲ್ಲಿ ತ್ಯಾಜ್ಯ ವಿಲೇವಾರಿಯಾಗದೇ ರಾಶಿ ರಾಶಿ ತ್ಯಾಜ್ಯ ಸಂಗ್ರಹ,
ಕನ್ನಡಪ್ರಭ ವಾರ್ತೆ, ಶೃಂಗೇರಿಸೇವಾ ಖಾಯಮಾತಿ, ನೇರ ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಶೃಂಗೇರಿ ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ಪೌರಕಾರ್ಮಿಕರು ಜುಲೈ 1 ರಿಂದ ಆರಂಭಿಸಿದ್ದ ಅನಿರ್ದಿಷ್ಠಾವದಿ ಮುಷ್ಕರ 12 ನೇ ದಿನವಾದ ಶುಕ್ರವಾರವೂ ಮುಂದುವರಿಯಿತು.
ಮುಷ್ಕರ ನಿರತರನ್ನು ಉದ್ದೇಶಿಸಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ಕೆ.ಎಂ.ರಾಮಣ್ಣ ಕರುವಾನೆ ಮಾತನಾಡಿ ಕಳೆದ 12 ದಿನಗಳಿಂದ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮುಷ್ಕರ ನಡೆಸುತ್ತಿದ್ದರೂ ಈವರೆಗೂ ಸ್ಪಂದಿಸದಿರುವುದು ಸರಿಯಲ್ಲ. ಇವರ ಬೇಡಿಕೆಗಳು ನ್ಯಾಯಯುತವಾಗಿವೆ. ಇದುವರೆಗೂ ಕೇವಲ ಭರವಸೆಗಳನ್ನೇ ನೀಡುತ್ತಾ ಬಂದಿದ್ದಾರೆ ಹೊರತು, ಸಮಸ್ಯೆ ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. ಸರ್ಕಾರ ಕೂಡಲೇ ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಖಾಂಗೊಳಿಸಬೇಕು ಎಂದು ಒತ್ತಾಯಿಸಿದರು.ಬಹುಜನ ಸಮಾಜ ಪಕ್ಷದ ಮುಖಂಡ ಕೆ.ಎಂ.ಗೋಪಾಲ್ ಮಾತನಾಡಿ ಕಳೆದ ಡಿಸೆಂಬರ್‌ನಲ್ಲಿ 16 ದಿನಗಳ ಕಾಲ ಮುಷ್ಕರ ನಡೆಸಿದ ಸಂದರ್ಭದಲ್ಲಿ ಭರವಸೆ ನೀಡಿ ಮುಷ್ಕರ ಹಿಂಪಡೆಯುವಂತೆ ಮಾಡಲಾಯಿತು. ನಂತರ ಯಾವುದೇ ಭರವಸೆ ಈಡೇರಿಸಿಲ್ಲ. ಕಳೆದ 29 ವರ್ಷಗಳಿಂದ ಬೇಡಿಕೆ ಮುಂದಿಟ್ಟುಕೊಂಡು ಹೋರಾಟ ನಡೆಸುತ್ತಿದ್ದರೂ ಯಾವುದೇ ಸರ್ಕಾರ ಸ್ಪಂದಿಸಿಲ್ಲ. ಇವರ ಬೇಡಿಕೆಗಳನ್ನು ನಿರ್ಲಕ್ಷಿಸಲಾಗುತ್ತಿದೆ. ಈಗ 12 ದಿನಗಳಿಂದ ಮುಷ್ಕರ ನಡೆಯುತ್ತಿದ್ದರೂ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು,
ತಾಲೂಕು ಹೊರಗುತ್ತಿಗೆ ಪೌರಕಾರ್ಮಿಕ ಸಂಘದ ರಮೇಶ್ ಮಾತನಾಡಿ ನಾವು ಕಳೆದ 20 ವರ್ಷಗಳಿಂದ ನಿರಂತರವಾಗಿ ಪ್ರತೀ ವರ್ಷ ಹೋರಾಟ, ಮುಷ್ಕರ ನಡೆಸುತ್ತಾ ಬಂದಿದ್ದೇವೆ. ಕಳೆದ ಬಾರಿ ಹೋರಾಟ ನಡೆಸಿದಾಗ ಚಿಕ್ಕ ಮಗಳೂರು ನಗರಾಭಿವೃದ್ಧಿ ಕೋಶದ ಪಿ.ಡಿ.ಯವರು ಸರ್ಕಾರದೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಆಗಾಗ ಬಂದು ಹೋಗುತ್ತಿದ್ದರೂ ನಮ್ಮ ಸಮಸ್ಯೆ ಗಳಿಗೆ ಸ್ಪಂದಿಸಿಲ್ಲ.ಇದೇ ಪರಿಸ್ಥಿತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.ಈ ಸಂದರ್ಭದಲ್ಲಿ ಚಿಕ್ಕಮಗಳೂರು ನಗರಾಭಿವೃದ್ಧಿ ಕೋಶ ಪಿ.ಡಿ ಚಂದ್ರಮ್ಮ ಸ್ಥಳಕ್ಕೆ ಭೇಟಿ ನೀಡಿ ಇನ್ನು ಒಂದು ತಿಂಗಳ ಕಾಲಾವಕಾಶ ನೀಡಿ, ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಇತ್ಯರ್ಥಕ್ಕೆ ಪ್ರಯತ್ನಿಸುತ್ತೇನೆ. ಅಲ್ಲಿವರೆಗೆ ಮುಷ್ಕರ ಕೈಬಿಡಲು ಮನವೊಲಿಸುವ ಪ್ರಯತ್ನ ಮಾಡಿದರು. ಮುಷ್ಕರ ನಿರತರು ಒಪ್ಪದೇ ಮುಷ್ಕರ ಮುಂದುವರಿಸಿದರು. ಪೌರಕಾರ್ಮಿಕ ಸಂಘದ ಸುಖೇಶ್, ಕುಮಾರ್ ಮತ್ತಿತರರು ಇದ್ದರು.
-- ಬಾಕ್ಸ್ಸ್---ಶೃಂಗೇರಿಯ ಅಲ್ಲಲ್ಲಿ ತ್ಯಾಜ್ಯ ಸಂಗ್ರಹ ರಾಶಿಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರು ಕಳೆದ 12 ದಿನಗಳಿಂದ ಮುಷ್ಕರ ನಡೆಸುತ್ತಿರುವುದರಿಂದ ಪಟ್ಟಣದಲ್ಲಿ ಕಸ ವಿಲೇವಾರಿಯಾಗದೇ ಅಲ್ಲಲ್ಲಿ ತ್ಯಾಜ್ಯಗಳ ರಾಶಿ ಕಂಡುಬರುತ್ತಿದೆ. ಬಸ್ ನಿಲ್ದಾಣ, ಗಾಂಧಿ ಮೈದಾನ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ತ್ಯಾಜ್ಯವೇ ತಂಬಿವೆ.
ರಾಜ್ಯದೆಲ್ಲೆಡೆ ಡೇಂಘೀ ಹೆಚ್ಚುತ್ತಿರುವ ನಡುವೆಯೇ ಶೃಂಗೇರಿಯಲ್ಲಿ ಕಸಗಳ ರಾಶಿ ಬಿದ್ದು ನಾರುತ್ತಿದೆ. ಜಿಲೆಯಲ್ಲಿಯೇ ಡೆಂಘೀ ಶೃಂಗೇರಿ 2ನೇ ಸ್ಥಾನದಲ್ಲಿದೆ. ಇದೇ ರೀತಿ ಮುಷ್ಕರ ಮುಂದುವರಿದರೆ ತ್ಯಾಜ್ಯ ಸಂಗ್ರಹದ ರಾಶಿಯಿಂದ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ. ಸತತ ಮಳೆ ಇಂದ ತ್ಯಾಜ್ಯಗಳು ಕೊಳೆತು ನಾರುತ್ತಿದೆ. ಸರ್ಕಾರ ಮಧ್ಯ ಪ್ರವೇಶಿಸಿ ಇದಕ್ಕೊಂದು ತಾರ್ಕಿಕ ಅಂತ್ಯ ಹಾಡದಿದ್ದರೆ ಪರಿಸ್ಥಿತಿ ಮತ್ತಷ್ಟು ಮಾರಕವಾಗಿ ಪರಿಣಮಿಸುವ ಸಾಧ್ಯತೆಗಳಿವೆ.12 ಶ್ರೀ ಚಿತ್ರ 1-
ಶೃಂಗೇರಿ ಪಟ್ಟಣ ಪಂಚಾಯಿತಿ ಎದುರು ಹೊರಗುತ್ತಿಗೆ ಪಪಂ ನೌಕರರು 12 ದಿನಕ್ಕೂ ಅನಿರ್ದಿಷ್ಠಾವಧಿ ಮುಷ್ಕರ ನಡೆಸುತ್ತಿರುವುದು.12 ಶ್ರಿ ಚಿತ್ರ 2-ಶೃಂಗೇರಿ ಪಟ್ಟಣದಲ್ಲಿ ವಿಲೇವಾರಿಯಾಗದೇ ಬಿದ್ದಿರುವ ತ್ಯಾಜ್ಯಗಳ ರಾಶಿ