ಮೌಲ್ಯಯುತ ರಾಜಕಾರಣಿ ಆಗಿದ್ದ ಶ್ರೀನಿವಾಸ್‌ಪ್ರಸಾದ್

| Published : Apr 30 2024, 02:09 AM IST

ಸಾರಾಂಶ

ಸಂಸದ ವಿ.ಶ್ರೀನಿವಾಸಪ್ರಸಾದ್ ಅವರು ಮೌಲ್ಯಯುತ ರಾಜಕಾರಣಿಯಾಗಿದ್ದು, ಬಡವರು, ದಲಿತರು, ಶೋಷಿತರ ಧ್ವನಿಯಾಗಿದ್ದರು ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಸಂತಾಪ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಸಂಸದ ವಿ.ಶ್ರೀನಿವಾಸಪ್ರಸಾದ್ ಅವರು ಮೌಲ್ಯಯುತ ರಾಜಕಾರಣಿಯಾಗಿದ್ದು, ಬಡವರು, ದಲಿತರು, ಶೋಷಿತರ ಧ್ವನಿಯಾಗಿದ್ದರು ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಸಂತಾಪ ಸೂಚಿಸಿದರು.ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಗರ ಮಂಡಲ ವತಿಯಿಂದ ನಡೆದ ವಿ.ಶ್ರೀನಿವಾಸ ಪ್ರಸಾದ್‌ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಪುಷ್ಷಾರ್ಚನೆ ಮಾಡಿ ಮಾತನಾಡಿದರು. ಶ್ರೀನಿವಾಸಪ್ರಸಾದ್ ಅವರು ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದಲ್ಲಿ 6 ಬಾರಿ ಸಂಸದರಾಗಿದ್ದು, ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿ, ಸಚಿವರಾಗಿದ್ದು, ಜಿಲ್ಲೆ, ರಾಜ್ಯ, ದೇಶದಲ್ಲಿ ಸುದೀರ್ಘವಾಗಿ ಉತ್ತಮವಾದ ಸಾರ್ವಜನಿಕರ ಸೇವೆ ಸಲ್ಲಿಸಿದ್ದಾರೆ. ಸದಾ ಬಡವರು, ದಲಿತರು, ಶೋಷಿತರ ಪರ ಅಪಾರ ಕಾಳಜಿ ಹೊಂದಿದ ಮಹಾನಾಯಕರು ಎಂದರು.

ಜನಪ್ರಿಯ ನಾಯಕರಾಗಿ ಅನೇಕ ಕಾರ್ಯಕ್ರಮಗಳು, ಯೋಜನೆಗಳನ್ನು ಜಿಲ್ಲೆಗೆ ತಂದು ಅಭಿವೃದ್ಧಿಗೆ ಕಾರಣೀಭೂತರಾಗಿದ್ದಾರೆ. ಅವರ ಅಗಲಿಕೆಯಿಂದ ಜಿಲ್ಲೆ, ರಾಜ್ಯಕ್ಕೆ ಅಪಾರ ನಷ್ಟ ಉಂಟಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಆಶಿಸಿದರು. ಸಭೆಯಲ್ಲಿ ಬಿಜೆಪಿ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಆರ್.ಸುಂದರ್, ಪ್ರಧಾನ ಕಾರ್ಯದರ್ಶಿ ಹೊನ್ನೂರು ಮಹದೇವಸ್ವಾಮಿ, ನಗರ ಮಂಡಲ ಅಧ್ಯಕ್ಷ ಶಿವರಾಜು, ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಸೂರ್ಯಕುಮಾರ್, ಪ್ರಧಾನ ಕಾರ್ಯದರ್ಶಿ ಆನಂದ್‌ ಭಗೀರಥ್, ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಮೂಡಹಳ್ಳಿ ಮೂರ್ತಿ, ಪ್ರಧಾನ ಕಾರ್ಯದರ್ಶಿ ಮುತ್ತಿಗೆಮೂರ್ತಿ, ನಗರ ಮಂಡಲ ಅಧ್ಯಕ್ಷ ಪರಶಿವಯ್ಯ, ರಾಜಪ್ಪ, ಕೂಸಣ್ಣ, ಚೂಡಾ ಮಾಜಿ ಅಧ್ಯಕ್ಷ ಕುಲಗಾಣ ಶಾಂತಮೂರ್ತಿ, ಚಂದ್ರಶೇಖರ್, ವೇಣುಗೋಪಾಲ್, ಬಲವೀರ್‌ ಸಿಂಗ್, ಹೈಟೆಕ್ ಶಿವು, ಚಂದ್ರಶೇಖರ್, ಸಿ.ಡಿ.ಪ್ರಕಾಶ್, ಗಿರೀಶ್, ಶಿವಣ್ಣ, ಮಹದೇವಯ್ಯ ಇತರರು ಭಾಗವಹಿಸಿದ್ದರು.