ನಾಡುಕಂಡ ಅಪರೂಪದ ರಾಜಕಾರಣಿ ಶ್ರೀನಿವಾಸಪ್ರಸಾದ್: ದೊಡ್ಡಸ್ವಾಮೇಗೌಡ

| Published : Jun 19 2024, 01:02 AM IST

ನಾಡುಕಂಡ ಅಪರೂಪದ ರಾಜಕಾರಣಿ ಶ್ರೀನಿವಾಸಪ್ರಸಾದ್: ದೊಡ್ಡಸ್ವಾಮೇಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಅತ್ಯಂತ ಜನಾನುರಾಗಿಯೂ, ಸಮಾಜಮುಖಿ ಚಿಂತನೆಗಳನ್ನು ಹೊಂದಿದ ಅವರ ಮಾರ್ಗದರ್ಶನದಲ್ಲಿ ಸಾವಿರಾರು ಮಂದಿ ರಾಜಕಾರಣಿಗಳು ತಮ್ಮ ಬದುಕು ಕಟ್ಟಿಕೊಂಡು ಸಮಾಜ ಸೇವೆಯಲ್ಲಿ ತೊಡಗಿದ್ದು, ಇದು ಅವರ ಜನಪ್ರಿಯತೆಗೆ ಸಾಕ್ಷಿ.

ಕನ್ನಡಪ್ರಭ ವಾರ್ತೆ ಕೆ.ಆರ್. ನಗರ

ನಾಡುಕಂಡ ಅಪರೂಪದ ರಾಜಕಾರಣಿಯಾಗಿದ್ದ ಸಂಸದ ವಿ. ಶ್ರೀನಿವಾಸಪ್ರಸಾದ್ ಅವರು ದೇಶದ ಇತರ ನಾಯಕರಿಗೆ ಮಾದರಿಯಾಗಿ ಬದುಕಿದ್ದರೆಂದು ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ ಹೇಳಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ನಡೆದ ವಿ. ಶ್ರೀನಿವಾಸಪ್ರಸಾದ್ ಒಂದು ನೆನಪು ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ನಂತರ ಮಾತನಾಡಿದ ಅವರು, ಜನನಾಯಕರಾಗಿದ್ದ ಅವರು ಒಂದು ಜಾತಿಗೆ ಸೀಮಿತರಾಗದೇ ಸರ್ವ ಜನಾಂಗದ ನೇತಾರರಾಗಿದ್ದರು ಎಂದರು.

ಅತ್ಯಂತ ಜನಾನುರಾಗಿಯೂ, ಸಮಾಜಮುಖಿ ಚಿಂತನೆಗಳನ್ನು ಹೊಂದಿದ ಅವರ ಮಾರ್ಗದರ್ಶನದಲ್ಲಿ ಸಾವಿರಾರು ಮಂದಿ ರಾಜಕಾರಣಿಗಳು ತಮ್ಮ ಬದುಕು ಕಟ್ಟಿಕೊಂಡು ಸಮಾಜ ಸೇವೆಯಲ್ಲಿ ತೊಡಗಿದ್ದು, ಇದು ಅವರ ಜನಪ್ರಿಯತೆಗೆ ಸಾಕ್ಷಿ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ನಮ್ಮ ಕುಟುಂಬಕ್ಕೂ ಕಾಲ ಕಾಲಕ್ಕೆ ಮಾರ್ಗದರ್ಶನ ನೀಡಿದ ಅವರು, ಇಂದಿನ ರಾಜಕೀಯ ಏಳಿಗೆಗೆ ಕಾರಣರಾಗಿದ್ದು, ಅವರ ಸಹಕಾರವನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲವೆಂದು ಪ್ರಜ್ಞೆ ವ್ಯಕ್ತಪಡಿಸಿದರು.

ನೇರ ನುಡಿ ಮತ್ತು ಸ್ವಾಭಿಮಾನದ ರಾಜಕಾರಣಕ್ಕೆ ಹೆಸರುವಾಸಿಯಾಗಿದ್ದ ವಿ. ಶ್ರೀನಿವಾಸಪ್ರಸಾದ್ ಅವರ ನೆನಪು ಸದಾ ಅಜರಾಮವಾಗಿರಲಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಶಾಸಕ ಡಿ. ರವಿಶಂಕರ್ ಮಾತನಾಡಿ, ವಿ. ಶ್ರೀನಿವಾಸಪ್ರಸಾದ್ ಅವರು ಶೋಷಿತರು, ದಲಿತರು, ಹಿಂದುಳಿದವರು ಮತ್ತು ಬಡವರ ಧ್ವನಿಯಾಗಿ ಕೆಲಸ ಮಾಡಿ ಸರ್ವರ ಉದ್ಧಾರಕ್ಕೆ ದುಡಿದ ಮಹಾನ್ ಚೇತನ ಎಂದರು.

ಸಕ್ರಿಯ ರಾಜಕಾರಣದ ಜೊತೆಗೆ ಅಭ್ಯರ್ಥಿಯನ್ನು ಮೈಗೂಡಿಸಿಕೊಂಡಿದ್ದ ಪ್ರಸಾದ್ಅವರು ದೇಶ ಕಂಡ ಅಪ್ರತಿಮ ರಾಜಕಾರಣಿಯಾಗಿದ್ದು, ಅಂತಹ ಮಹಾನ್ ನಾಯಕ ನಮ್ಮ ನಾಡಿನಲ್ಲಿ ಜನಿಸಿದ್ದು ಎಲ್ಲರ ಪುಣ್ಯ ವಿಶೇಷ ಎಂದು ಸಂತಸ ವ್ಯಕ್ತಪಡಿಸಿದರು.

ಜಿಪಂ ಮಾಜಿ ಸದಸ್ಯರಾದ ಶಿವರಾಂ, ರಾಜಯ್ಯ, ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿ.ಪಿ. ರಮೇಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ. ಎಸ್. ಮಹದೇವ್, ಉದಯಶಂಕರ್, ನಗರಾಧ್ಯಕ್ಷ ಎಂ.ಜೆ. ರಮೇಶ್, ಮಹಿಳಾ ಘಟಕದ ಅಧ್ಯಕ್ಷೆ ಲತಾ, ರಾಜ್ಯ ಕಾಂಗ್ರೆಸ್ ಎಸ್ಟಿ ವಿಭಾಗದ ಉಪಾಧ್ಯಕ್ಷ ಶ್ರೀನಿವಾಸ್, ರಾಜ್ಯ ಕಾಂಗ್ರೆಸ್ ಕಾನೂನು ಘಟಕದ ಸಲಹೆಗಾರ ಕಾಂತರಾಜು, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಎಸ್. ಸಿದ್ದೇಗೌಡ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್. ಮಹೇಶ್, ನಿರ್ದೇಶಕರಾದ ಕೆ.ಎನ್. ಪ್ರಸನ್ನಕುಮಾರ್, ಸರಿತಾ ಜವರಪ್ಪ, ಮುಖಂಡರಾದ ರಾಜಯ್ಯ, ಕಂಠಿಕುಮಾರ್, ಶಾಂತಿರಾಜ್, ನಂದೀಶ್ ಇದ್ದರು.