ಕಾಂಗ್ರೆಸ್ ಗೆಲುವಿಗೆ ಗ್ಯಾರಂಟಿ ಯೋಜನೆಗಳೇ ಶ್ರೀರಕ್ಷೆ: ರೆಡ್ಡಿ ಶ್ರೀನಿವಾಸ

| Published : Mar 29 2024, 12:50 AM IST

ಕಾಂಗ್ರೆಸ್ ಗೆಲುವಿಗೆ ಗ್ಯಾರಂಟಿ ಯೋಜನೆಗಳೇ ಶ್ರೀರಕ್ಷೆ: ರೆಡ್ಡಿ ಶ್ರೀನಿವಾಸ
Share this Article
  • FB
  • TW
  • Linkdin
  • Email

ಸಾರಾಂಶ

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳೇ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರೀರಕ್ಷೆಯಾಗಲಿವೆ.

ಕನ್ನಡಪ್ರಭ ವಾರ್ತೆ ಯಲಬುರ್ಗಾ

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳೇ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರೀರಕ್ಷೆಯಾಗಲಿವೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ ಹೇಳಿದರು.

ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಲೋಕಸಭೆ ಚುನಾವಣೆ ಪ್ರಯುಕ್ತ ಬುಧವಾರ ಸಂಜೆ ಗ್ಯಾರಂಟಿ ಯೋಜನೆಗಳ ಸಮಿತಿ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು, ಗ್ಯಾರಂಟಿ ಯೋಜನೆಗಳ ಸಮಿತಿಯ ಸರ್ವ ಸದಸ್ಯರು, ಜನರ ಮನೆಬಾಗಿಲಿಗೆ ತೆರಳಿ ಗ್ಯಾರಂಟಿ ಯೋಜನೆಗಳ ಬಗ್ಗೆ ಹೆಚ್ಚು ಪ್ರಚಾರ ಮಾಡುವ ಮೂಲಕ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಕೈ ಜೋಡಿಸಬೇಕು ಎಂದರು.

ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಯೋಜನೆಗಳನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ಅನುಷ್ಠಾನಗೊಳಿಸುವ ಮೂಲಕ ಬಡವರ ಏಳಿಗೆಗಾಗಿ ಶ್ರಮಿಸುತ್ತಿದೆ. ಗ್ಯಾರಂಟಿ ಯೋಜನೆ ಸಮಿತಿಗೆ ನೇಮಕಗೊಂಡ ಅಧ್ಯಕ್ಷರು ಮತ್ತು ಸದಸ್ಯರು ಪಟ್ಟಣ ಮತ್ತು ಗ್ರಾಮ ಮಟ್ಟದಲ್ಲಿ ಈ ಯೋಜನೆಗಳ ಕುರಿತು ಜನಜಾಗೃತಿ ಮೂಡಿಸಬೇಕು. ಈ ಯೋಜನೆಯಡಿ ಪ್ರತಿ ಕುಟುಂಬಗಳೂ ಲಾಭ ಪಡೆಯುತ್ತಿವೆ. ಹೀಗಾಗಿ ಕೊಪ್ಪಳ ಲೋಕಸಭೆಗೆ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಅವರ ಗೆಲುವಿಗೆ ಎಲ್ಲರೂ ಶಕ್ತಿಮೀರಿ ಶ್ರಮಿಸಬೇಕು ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಮಾತನಾಡಿ, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಜನತೆಗೆ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆ ಜಾರಿಗೊಳಿಸಿ ರಾಜ್ಯದ ಜನಸಾಮಾನ್ಯರ ಹಿತ ಕಾಪಾಡುತ್ತಿದೆ. ಇಂತಹ ಬರಗಾಲದಲ್ಲಿ ಯೋಜನೆಗಳು ಬಡವರ ಪಾಲಿಗೆ ವರದಾನವಾಗಿವೆ ಎಂದರು.

ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಯಂಕಣ್ಣ ಯರಾಶಿ ಮಾತನಾಡಿದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ತಾಲೂಕಾಧ್ಯಕ್ಷ ಸುಧೀರ ಕೊರ್ಲಳ್ಳಿ, ಮುಖಂಡರಾದ ಹನುಮಂತಗೌಡ ಪಾಟೀಲ್, ಶರಣಪ್ಪ ಗಾಂಜಿ, ಡಾ. ಶಿವನಗೌಡ ದಾನರೆಡ್ಡಿ, ಮಲ್ಲು ಜಕ್ಕಲಿ, ಹಂಪಯ್ಯ ಹಿರೇಮಠ, ಸಾವಿತ್ರಿ ಗೊಲ್ಲರ, ಫರೀದಾ ಬೇಗಂ, ಶ್ರೀನಿವಾಸ ಸೇರಿದಂತೆ ತಾಲೂಕಿನ ಗ್ಯಾರಂಟಿ ಯೋಜನೆಗಳ ಸಮಿತಿ ಸರ್ವ ಸದಸ್ಯರು ಇದ್ದರು.