ಸಾರಾಂಶ
ಶ್ರೀರಾಮ ಪ್ರಾಣ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಬೆಂಗಳೂರಿನ ದೇಗುಲಗಳಲ್ಲಿ ವಿಶೇಷ ಪೂಜೆಯಲ್ಲಿ ಭಾಗವಹಿಸಲಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠಾಪನೆ, ಪೂಜಾ ಕಾರ್ಯಕ್ರಮ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರು ಸೋಮವಾರ ನಗರದ ದೇವಸ್ಥಾನಗಳಲ್ಲಿ ಆಯೋಜಿಸಿರುವ ಶ್ರೀರಾಮ ಪ್ರತಿಷ್ಠಾಪನೆ, ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ.ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನ ರಾಣಿ ಅಬ್ಬಕ್ಕ ಆಟದ ಮೈದಾನದಲ್ಲಿ ಆಯೋಜಿಸಿರುವ ರಾಮತಾರಕ ಮಹಾಯಾಗದಲ್ಲಿ ಭಾಗವಹಿಸುತ್ತಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ- ಆಂಜನೇಯಸ್ವಾಮಿ ದೇವಸ್ಥಾನ, ಬಾಣಸವಾಡಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ - ಮಾರುತಿ ಮಂದಿರ ದೇವಸ್ಥಾನ, ವಿಜಯನಗರ, ಬೆಂಗಳೂರು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ - ರಾಮತಾರಕ ಮಹಾಯಾಗ, ರಾಣಿ ಅಬ್ಬಕ್ಕೆ ಆಟದ ಮೈದಾನ, ಮಹಾಲಕ್ಷ್ಮೀ ಲೇಔಟ್, ಬೆಂಗಳೂರು, ಸಂಸದ ಡಿ.ವಿ. ಸದಾನಂದಗೌಡ- ಮಾರುತಿ ಮಂದಿರ, ಆರ್.ಎಂ.ವಿ 2ನೇ ಹಂತ, ಡಾಲರ್ಸ್ ಕಾಲೋನಿ, ಬೆಂಗಳೂರು, ಮಾಜಿ ಸಚಿವ ರಾಮಚಂದ್ರೇಗೌಡ - ರಾಮತಾರಕ ಮಹಾಯಾಗ, ರಾಣಿ ಅಬ್ಬಕ್ಕೆ ಆಟದ ಮೈದಾನ, ಮಹಾಲಕ್ಷ್ಮಿ ಲೇಔಟ್, ಬೆಂಗಳೂರು, ಶಾಸಕ ಡಾ। ಸಿ.ಎನ್. ಅಶ್ವತ್ಥ ನಾರಾಯಣ ಅವರು ಬೆಂಗಳೂರಿನ ಮಲ್ಲೇಶ್ವರದ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ.