ಸಾರಾಂಶ
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಶ್ರೀರಂಗಪಟ್ಟಣದಲ್ಲಿ ಸೆ.25 ರಿಂದ 4 ದಿನಗಳ ಕಾಲ ದಸರಾ ನಡೆಯಲಿರುವ ದಸರಾ ಕಾರ್ಯಕ್ರಮಗಳ ಬಗ್ಗೆ ಜಿಲ್ಲಾದ್ಯಂತ ಪ್ರಚಾರ ಕೈಗೊಳ್ಳಬೇಕು ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಅಧಿಕಾರಿಗಳಿಗೆ ಸೂಚಿಸಿದರು.ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ದಸರಾ ಉತ್ಸವದ ಹಿನ್ನೆಲೆಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಮೊದಲ ಬಾರಿಗೆ ದಸರಾ ಉತ್ಸವದಲ್ಲಿ ರಾಸುಗಳ ಮೆರವಣಿಗೆ ಏರ್ಪಡಿಸಲಾಗುತ್ತಿದೆ. ಪಶುಪಾಲನಾ ಇಲಾಖೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದರು.
ಮಹಿಳಾ ದಸರಾ, ರೈತ ದಸರಾ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಬೇಕು. ದಸರಾ ಉತ್ಸವಕ್ಕೆ ಬರುವ ಆನೆಗಳಿಗೆ ಪಶುಪಾಲನಾ ಇಲಾಖೆ ಅಗತ್ಯ ಮೇವು ಒದಗಿಸಬೇಕು ಎಂದು ತಾಕೀತು ಮಾಡಿದರು.ಪಟ್ಟಣದ ಶ್ರೀರಂಗನಾಥಸ್ವಾಮಿ ದೇವಾಲಯದ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ವೇದಿಕೆಯಲ್ಲಿ ಸರ್ಕಾರದ ಯೋಜನೆಗಳನ್ನು ಪ್ರಚಾರ ಪಡಿಸಬೇಕು. ಅತಿಥಿಗಳು ಮತ್ತು ಕಲಾವಿದರಿಗೆ ವಸತಿ ವ್ಯವಸ್ಥೆ ಸೇರಿದಂತೆ ಮೂಲ ಸೌಕರ್ಯಗಳನ್ನ ಕಲ್ಪಿಸಬೇಕು ಎಂದರು.
ವೇದ ಬ್ರಹ್ಮ ಡಾ.ವಿ.ಭಾನುಪ್ರಕಾಶ್ ಶರ್ಮಾ ಮಾತನಾಡಿ, ಕಾವೇರಿ ನದಿ ಸ್ನಾನಘಟ್ಟದ ಬಳಿ ಸೆ.25ರಿಂದ 28ರವರೆಗೆ ಕಾವೇರಿ ಆರತಿ ನಡೆಯಲಿದೆ. ಪ್ರತಿ ದಿನ ಸಂಜೆ ನಡೆಯುವ ಈ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.ಈ ವೇಳೆ ಪುರಸಭೆ ಪ್ರಭಾರ ಅಧ್ಯಕ್ಷ ಎಂ.ಎಲ್.ದಿನೇಶ್, ಜಿಪಂ ಉಪ ಕಾರ್ಯದರ್ಶಿ ಲಕ್ಷ್ಮಿ, ತಹಸೀಲ್ದಾರ್ ಚೇತನಾ ಯಾದವ್, ಡಿವೈಎಸ್ಪಿ ಶಾಂತಮಲ್ಲಪ್ಪ, ಪುರಸಭೆ ಮುಖ್ಯಾಧಿಕಾರಿ ರಾಜಣ್ಣ, ತಾಪಂ ಇಒ ವೇಣು, ತಾಲೂಕು ಯೋಜನಾಧಿಕಾರಿ ಎಂ.ಎಂ.ತ್ರಿವೇಣಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಪ್ರಿಯದರ್ಶಿನಿ, ತೋಟಗಾರಿಕೆ ಇಲಾಖೆ ಪ್ರದೀಪ್‌ಕುಮಾರ್, ಸಿಪಿಐ ಬಿ.ಜಿ.ಕುಮಾರ್ ಸೇರಿದಂತೆ ಅಧಿಕಾರಿಗಳು ಇದ್ದರು.
ಜಿಲ್ಲಾ ಮಟ್ಟದ ಸ್ಪರ್ಧೆಗೆ ಪ್ರಬಂಧಗಳ ಆಹ್ವಾನಕನ್ನಡಪ್ರಭ ವಾರ್ತೆ ಮಂಡ್ಯ
ಕನ್ನಿಕ ಶಿಲ್ಪ ನವೋದಯ ಎಜುಕೇಷನ್ ಟ್ರಸ್ಟ್, ಮಂಗಲ ಟಿ.ತಿಮ್ಮೇಗೌಡ ಪ್ರತಿಷ್ಠಾನದಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗಾಗಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಶಿಕ್ಷಕರ ಪಾತ್ರ ಕುರಿತಂತೆ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಟ್ರಸ್ಟ್‌ನ ಕಾರ್ಯದರ್ಶಿ ಎಚ್.ಆರ್.ಕನ್ನಿಕ ತಿಳಿಸಿದ್ದಾರೆ.ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ, ಅನುದಾನಿತ, ಅನುದಾನರಹಿತ, ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕರಿಗೆ ಮಾತ್ರ ಅವಕಾಶವಿದೆ. ಪ್ರವೇಶ ಉಚಿತವಾಗಿದ್ದು, ಪ್ರಬಂಧವು ೨೦೦೦ ಪದಗಳ ಮಿತಿಯೊಳಗಿರಬೇಕು. ವಿಜೇತರಿಗೆ ಪ್ರಥಮ ಬಹುಮಾನ ೩ ಸಾವಿರ ರು., ದ್ವಿತೀಯ ೨ ಸಾವಿರ ರು., ತೃತೀಯ ೧ ಸಾವಿರ ರು. ಹಾಗೂ ಐದು ಮಂದಿಗೆ ಸಮಾಧಾನಕರ ಬಹುಮಾನ ನೀಡುವುದರ ಜೊತೆಗೆ ಪ್ರಶಸ್ತಿ ಫಲಕ, ಫಲ-ತಾಂಬೂಲಗಳೊಂದಿಗೆ ಸನ್ಮಾನಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಬಂಧವನ್ನು ಸೆ.೨೫ರೊಳಗೆ ಖುದ್ದು ಅಥವಾ ಅಂಚೆ ಮೂಲಕ ತಲುಪಿಸಬಹುದು. ಸ್ಪರ್ಧಿಗಳು ಸ್ವವಿವರ ಮತ್ತು ಮೊಬೈಲ್ ಸಂಖ್ಯೆಯನ್ನು ಪ್ರತ್ಯೇಕವಾಗಿ ಪ್ರಬಂಧದ ಜೊತೆಗೆ ಲಕೋಟೆಯಲ್ಲಿ ಸರಿಯಾಗಿ ಬರೆದು ಕಳುಹಿಸುವುದು. ಪ್ರಬಂಧವನ್ನು ಕನ್ನಿಕ ಶಿಲ್ಪ ನವೋದಯ ಎಜುಕೇಷನ್ ಟ್ರಸ್ಟ್, ನಂ.೨೪೪೩, ೪ನೇ ಕ್ರಾಸ್, ಗಾಂಧೀನಗರ, ಮಂಡ್ಯ ಇಲ್ಲಿಗೆ ತಲುಪಿಸುವಂತೆ ಕೋರಲಾಗಿದೆ.