ಸಾರಾಂಶ
ಪ್ರತಿಭಾ ಕಾರಂಜಿ ಭಾಷಣ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ವಿದ್ಯಾರ್ಥಿನಿ ಶ್ರೀಶಾ ಆಯ್ಕೆಗೊಂಡಿದ್ದಾರೆ.
ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಪ್ರತಿಭಾ ಕಾರಂಜಿ ಭಾಷಣ ಸ್ಪರ್ಧೆ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ವಿದ್ಯಾರ್ಥಿನಿ ಶ್ರೀಶಾ ಆಯ್ಕೆಗೊಂಡಿದ್ದಾಳೆ.ಸುಂಟಿಕೊಪ್ಪ ನಾಡು ಪ್ರೌಢ ಶಾಲೆ ಕೊಡಗರಹಳ್ಳಿ 9ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯಾದ ಶ್ರೀಶಾ ಎ. ಎಸ್. ಅವರು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮತ್ತು ಈ ವರ್ಷ ಕಲಬುರ್ಗಿಯಲ್ಲಿ ನಡೆದಂತಹ ರಾಜ್ಯಮಟ್ಟದ ವಿಜ್ಞಾನ ಸಮಾವೇಶದಲ್ಲಿ ಯುವ ವಿಜ್ಞಾನಿಯಾಗಿ ಆಯ್ಕೆಯಾಗಿ ಜನವರಿಯಲ್ಲಿ ಮಧ್ಯ ಪ್ರದೇಶದ ಭೂಪಾಲ್ ನಲ್ಲಿ ನಡೆಯುವ ರಾಷ್ಟ್ರೀಯ ವಿಜ್ಞಾನ ಸಮಾವೇಶಕ್ಕೆ ಆಯ್ಕೆಗೊಂಡಿದ್ದಾರೆ.
-----------------------------------------------------ನಾಳೆ ‘ಶಾಲೆಯಲ್ಲಿದೆ ಶಿಕ್ಷಣದ ಜೊತೆ ರಕ್ಷಣೆ’ ಕುರಿತು ಕಾರ್ಯಾಗಾರ
ಮಡಿಕೇರಿ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ವತಿಯಿಂದ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ, ಆರ್‌ಟಿಇ ಕಾಯ್ದೆ ಪರಿಣಾಮಕಾರಿ ಅನುಷ್ಠಾನ ಕುರಿತು ಡಿ. 17 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭಾಂಗಣದಲ್ಲಿ ‘ಶಾಲೆಯಲ್ಲಿದೆ ಶಿಕ್ಷಣದ ಜೊತೆ ರಕ್ಷಣೆ’ ಕುರಿತು ಕಾರ್ಯಾಗಾರ ನಡೆಯಲಿದೆ.ಹಾಗೆಯೇ ಅಂದು ಮಧ್ಯಾಹ್ನ 2.30 ಗಂಟೆಗೆ ನಗರದ ಸಂತ ಮೈಕಲರ ಶಾಲೆಯಲ್ಲಿ ಜಿಲ್ಲೆಯ ವಿವಿಧ ಪ್ರೌಢ ಶಾಲೆಯ ವಿದ್ಯಾರ್ಥಿಗಳೊಂದಿಗೆ ಜಿಲ್ಲಾ ಮಟ್ಟದಲ್ಲಿ ಮಕ್ಕಳಿಂದ ಅಹವಾಲು ಸ್ವೀಕಾರ ಹಾಗೂ ಸಂವಾದ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಈರಸ್ವಾಮಿ ತಿಳಿಸಿದ್ದಾರೆ.