ಎಸ್ಎಸ್ಎಲ್.ಸಿ. ಪರೀಕ್ಷಾ ಫಲಿತಾಂಶ ಸುಧಾರಣೆಗೆ ಕ್ರಿಯಾಯೋಜನೆ: ಕ್ಷೇತ್ರ ಶಿಕ್ಷಣಾಧಿಕಾರಿ ಟಿ. ಗೋವಿಂದಪ್ಪ

| Published : Feb 08 2024, 01:30 AM IST

ಎಸ್ಎಸ್ಎಲ್.ಸಿ. ಪರೀಕ್ಷಾ ಫಲಿತಾಂಶ ಸುಧಾರಣೆಗೆ ಕ್ರಿಯಾಯೋಜನೆ: ಕ್ಷೇತ್ರ ಶಿಕ್ಷಣಾಧಿಕಾರಿ ಟಿ. ಗೋವಿಂದಪ್ಪ
Share this Article
  • FB
  • TW
  • Linkdin
  • Email

ಸಾರಾಂಶ

ತರೀಕೆರೆ ಹಾಗೂ ಅಜ್ಜಂಪುರ ತಾಲೂಕುಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ.ಪರೀಕ್ಷಾ ಫಲಿತಾಂಶ ಸುಧಾರಣೆಗಾಗಿ ಹಲವು ಕ್ರಿಯಾಯೋಜನೆಗಳನ್ನು ರೂಪಿಸಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಗೋವಿಂದಪ್ಪ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ, ತರೀಕೆರೆ

ತರೀಕೆರೆ ಹಾಗೂ ಅಜ್ಜಂಪುರ ತಾಲೂಕುಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ.ಪರೀಕ್ಷಾ ಫಲಿತಾಂಶ ಸುಧಾರಣೆಗಾಗಿ ಹಲವು ಕ್ರಿಯಾಯೋಜನೆಗಳನ್ನು ರೂಪಿಸಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಗೋವಿಂದಪ್ಪ ತಿಳಿಸಿದ್ದಾರೆ.

ತರೀಕೆರೆ ಹಾಗೂ ಅಜ್ಜಂಪುರ ತಾಲೂಕಿಗೆ ಸಂಬಂಧಿಸಿದಂತೆ ಶೈಕ್ಷಣಿಕ ಬ್ಲಾಕ್ ನಲ್ಲಿ 2024ನೇ ವರ್ಷದ ಮಾರ್ಚ್ /ಏಪ್ರಿಲ್ ತಿಂಗಳಿನಲ್ಲಿ ನಡೆಯುವ ಎಸ್.ಎಸ್.ಎಲ್.ಸಿ.ಪರೀಕ್ಷೆಗೆ ಸರ್ಕಾರಿ, ಅನುದಾನಿತ, ಅನುದಾನ ರಹಿತ ಹಾಗೂ ವಸತಿ ಶಾಲೆಗಳನ್ನು ಒಳಗೊಂಡಂತೆ 44 ಪ್ರೌಢಶಾಲೆಗಳಿಂದ 1031 ಗಂಡು ಹಾಗೂ 1121 ಹೆಣ್ಣು ಮಕ್ಕಳು ಸೇರಿದಂತೆ ಒಟ್ಟು 2152 ಮಕ್ಕಳು ಪರೀಕ್ಷೆ ಬರೆಯುತ್ತಿದ್ದು ತಾಲೂಕಿನಲ್ಲಿ ಒಂಭತ್ತು ಎಸ್.ಎಸ್.ಎಸ್.ಎಲ್.ಸಿ.ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಫಲಿತಾಂಶ ಸುಧಾರಣೆಗೆ ಕ್ರಮ: ಗುಂಪು ಅಧ್ಯಯನ, ದತ್ತು ಯೋಜನೆ, ತಾಯಂದಿರ ಸಭೆ, ಆಪ್ತ ಸಮಾಲೋಚನೆ, ಮನೆ ಭೇಟಿ ಕಾರ್ಯಕ್ರಮ, ಪ್ರೇರಣಾ ಕಾರ್ಯಕ್ರಮ, ಮಾದರಿ ಪ್ರಶ್ನಪತ್ರಿಕೆ ವಿಶ್ಲೇಷಣೆ ಮೂಲಕ ಫಲಿತಾಂಶ ಸುಧಾರಣೆಗೆ ಕ್ರಮವಹಿಸಲಾಗಿದೆ. ತರೀಕೆರೆ ತಾಲೂಕು ಪಂಚಾಯಿತಿ ಸಹಭಾಗಿತ್ವದಲ್ಲಿ ಎಲ್ಲ ಶಾಲೆಗಳಿಗೆ ಹಾರ್ಡ್ ಡಿಸ್ಕ್ ನಲ್ಲಿ ಈ ಸಂಪನ್ಮೂಲಗಳನ್ನು ಕ್ರೋಡಿಕರಿಸಿ ಪ್ರತಿ ಶಾಲೆಗಳಿಗೆ ವಿತರಿಸಲು ಸಿದ್ಧತೆ ನಡೆಸಲಾಗಿದೆ, ಎಸ್-ಎ-1ನಲ್ಲಿಯ ಫಲಿತಾಂಶ ಆಧರಿಸಿ ಅನುತ್ತೀರ್ಣಗೊಳ್ಳುವ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು, ವಿಷಯವಾರು ಸಂಪನ್ಮೂಲ ತಂಡಗಳನ್ನು ರಚಿಸಿ, ಪಾಸಿಂಗ್ ಪ್ಯಾಕೇಜ್, ಸ್ಕೋರಿಂಗ್ ಪ್ಯಾಕೇಜ್ ಪ್ರಶ್ನಪತ್ರಿಕೆಗಳನ್ನು ತಯಾರಿಸಿ ಪ್ರತಿ ಶಾಲೆಗಳಿಗೆ ವಿತರಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.

ತಾಲೂಕು ಹಂತದಲ್ಲಿ ವಿಷಯ ಶಿಕ್ಷಕರ ವೇದಿಕೆಯೊಂದಿಗೆ ಎಲ್ಲಾ ಶಾಲೆಗಳ ಶಿಕ್ಷಕರಿಗೆ ಕಾರ್ಯಾಗಾರ ಆಯೋಜಿಸ ಲಾಗಿರುತ್ತದೆ, ನಿರಂತರವಾಗಿ ಮುಖ್ಯ ಶಿಕ್ಷಕರ ಸಭೆ ಆಯೋಜಿಸಿ ಪ್ರಗತಿ ಪರಿಶೀಲನೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ವಿಶೇಷ ತರಗತಿಗಳ ಏರ್ಪಡಿಸುವಿಕೆ, ವಿದ್ಯಾರ್ಥಿಗಳನ್ನು ಶಿಕ್ಷಕರಿಗೆ ದತ್ತು ನೀಡುವ ಯೋಜನೆ, ಸಹಾಯವಾಣಿ ಸ್ಥಾಪನೆ, ತಾಯಂದಿರ ಸಭೆಗಳನ್ನು ನಿರಂತರವಾಗಿ ಆಯೋಜಿಸುವುದು, ತಾಲೂಕಿನ ಅನುಷ್ಠಾನಾಧಿಕಾರಿಗಳಿಗೆ ಶಾಲೆಗಳನ್ನು ದತ್ತು ನೀಡುವುದು, ಪ್ರೌಢಶಾಲೆಗಳಿಗೆ ವಿಶೇಷ ತರಗತಿ, ಗುಂಪು ಅಧ್ಯಯನ ಸಮಯದಲ್ಲಿ ಭೇಟಿ ನೀಡಿ ಮಾರ್ಗದರ್ಶನ ನೀಡುವುದು. ಹತ್ತನೆ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ, ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡುವ ಸಂಬಂಧ ಪ್ರೇರಣ ಕಾರ್ಯಕ್ರಮ ಹಮ್ಮಿಕೊಳ್ಳಲು ಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

6ಕೆಟಿಆರ್.ಕೆ.3ಃ

ತರೀಕೆರೆ ತಾಲೂಕಿನ ಕುಂಟಿನಮಡು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶೇಷ ತರಗತಿಗಳನ್ನು ಏರ್ಪಡಿಸಲಾಗಿತ್ತು.