ಸಾರಾಂಶ
- ಪರೀಕ್ಷೆ ತೆಗೆದುಕೊಂಡ ವಿದ್ಯಾರ್ಥಿಗಳ ಸಂಖ್ಯೆ 2125 । ಜಿಲ್ಲೆಯ 9 ಕೇಂದ್ರಗಳಲ್ಲಿ ಪರೀಕ್ಷೆ । ಜಿಪಂ ಸಿಇಒ ಡಾ. ಗೋಪಾಲಕೃಷ್ಣ ಅಧ್ಯಕ್ಷತೆ ಸಿದ್ಧತಾ ಸಭೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಎಸ್ಎಸ್ಎಲ್ ಸಿ ಪರೀಕ್ಷೆ-2 ಇಂದು (ಜೂ.14) ಆರಂಭವಾಗಲಿದ್ದು, ಜೂ. 22ಕ್ಕೆ ಮುಕ್ತಾಯಗೊಳ್ಳಲಿದೆ. ಪರೀಕ್ಷೆ ನಡೆಸಲು ಜಿಲ್ಲೆಯಲ್ಲಿ 9 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, 2125 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ.
ಈ ಸಂಬಂಧ ಜಿಲ್ಲಾ ಪಂಚಾಯ್ತಿಯಲ್ಲಿ ಗುರುವಾರ ನಡೆದ ಪರೀಕ್ಷಾ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿದ್ದ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಬಿ. ಗೋಪಾಲಕೃಷ್ಣ ಮಾತನಾಡಿ, ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಬೇಕು. ಸಿಸಿ ಕ್ಯಾಮರಾ ನಿರಂತರವಾಗಿ ಕಾರ್ಯನಿರ್ವಹಿಸುವಂತೆ ಯುಪಿಎಸ್ ವ್ಯವಸ್ಥೆ ಇರಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೆ ಪರೀಕ್ಷೆ ಯಶಸ್ವಿಯಾಗಿ ನಡೆಸು ವಂತೆ ಹಾಗೂ ಪರೀಕ್ಷೆಯಲ್ಲಿ ಅಕ್ರಮ ನಡೆಸಿದರೆ ನಿರ್ದಾಕ್ಷಿಣ್ಯವಾಗಿ ಕ್ರಮವಹಿಸಲಾಗುವುದು ಎಂದರು. ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಂಜುನಾಥ್ ಪರೀಕ್ಷೆಯ ಸಿದ್ಧತೆ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿ. ಪರೀಕ್ಷಾ ಕಾರ್ಯಕ್ಕೆ 9 ಅಧೀಕ್ಷಕರು, 2 ಉಪ ಅಧೀಕ್ಷಕರು, 8 ಕಸ್ಟೋಡಿಯನ್, 8 ಸ್ಥಾನಿಕ ಜಾಗೃತದಳ, 100 ಕೊಠಡಿ ಮೇಲ್ಪಿಚಾರಕರು, 8 ಮೊಬೈಲ್ ಸ್ವಾಧೀನಾಧಿಕಾರಿಗಳು, 10 ವಿಷಯ ನಿರ್ವಾಹಕರು, ಜಿಲ್ಲಾ ಮತ್ತು ತಾಲೂಕು ಜಾಗೃತ ದಳ ಹಾಗೂ ವೆಬ್ ಕ್ಯಾಮರಾ ವೀಕ್ಷಣಾ ತಂಡ, 8 ಮಾರ್ಗಾಧಿ ಕಾರಿಗಳು, ಡ್ರೈವರ್ 26 ಪೊಲೀಸ್ ಮತ್ತು 8 ಆರೋಗ್ಯ ಸಿಬ್ಬಂದಿ ಸೇರಿದಂತೆ ಒಟ್ಟು 170 ಅಧಿಕಾರಿಗಳು ಮತ್ತು ಸಿಬ್ಬಂದಿ ಪರೀಕ್ಷಾ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.ಈಗಾಗಲೇ ಪರೀಕ್ಷಾ ಕೇಂದ್ರಗಳು ಅಂತಿಮಗೊಂಡಿದ್ದು, ಪ್ರವೇಶ ಪತ್ರವನ್ನು ಎಲ್ಲಾ ಮಕ್ಕಳು ಡೌನ್ ಲೋಡ್ ಮಾಡಿಕೊಂಡಿದ್ದಾರೆ. ಪರೀಕ್ಷಾ ಕಾರ್ಯದಲ್ಲಿ ಭಾಗವಹಿಸುವ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ, ಆಸನ ವ್ಯವಸ್ಥೆ, ಕೊಠಡಿ ಸುರಕ್ಷತೆ ಬಗ್ಗೆ ಪರಿಶೀಲಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತ ಪರೀಕ್ಷಾ ದಿನ ಮತ್ತು ಸಮಯದಲ್ಲಿ 144 ಸೆಕ್ಷನ್ ಜಾರಿಯಲ್ಲಿರುತ್ತದೆ. ಪರೀಕ್ಷಾ ದಿನದಂದು ನಿರಂತರ ವಿದ್ಯುತ್ ವ್ಯವಸ್ಥೆ ಕಲ್ಪಿಸಲು ಸಿದ್ಧತೆ ಮಾಡಲಾಗಿದೆ ಎಂದರು.
ಸಿಸಿ ಕ್ಯಾಮರಾ ಎಲ್ಲಾ ಕೊಠಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯ 9 ಕೇಂದ್ರಗಳ ವೀಕ್ಷಣೆಗೆ ಜಿಲ್ಲಾ ಪಂಚಾಯಿತಿಯಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರಶ್ನೆ ಪತ್ರಿಕೆಗಳನ್ನು ಟ್ರಜರಿ ಯಿಂದ ಪರೀಕ್ಷಾ ಕೇಂದ್ರಗಳಿಗೆ ಸಾಗಿಸಲು ಮತ್ತು ಪರೀಕ್ಷಾ ಕೇಂದ್ರದ ಭದ್ರತೆಗಾಗಿ ಪೊಲೀಸ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಆರೋಗ್ಯ ಸಿಬ್ಬಂದಿಯನ್ನು ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾಗಿದೆ ಎಂದರು.ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಹಾಗೂ ತಾಲೂಕು ನೋಡಲ್ ಅಧಿಕಾರಿಗಳು ಹಾಜರಿದ್ದರು.---- ಬಾಕ್ಸ್ ------ಪರೀಕ್ಷಾ ವೇಳಾಪಟ್ಟಿಜೂನ್ 14 - ಪ್ರಥಮ ಭಾಷೆಜೂನ್ 15 - ತೃತೀಯ ಭಾಷೆ
ಜೂನ್ 18 - ಗಣಿತಜೂನ್ 20 - ವಿಜ್ಞಾನ
ಜೂನ್ 21 - ಇಂಗ್ಲೀಷ್ಜೂನ್ 22 - ಸಮಾಜ ವಿಜ್ಞಾನ
-13 ಕೆಸಿಕೆಎಂ 4
ಚಿಕ್ಕಮಗಳೂರಿನ ಜಿಪಂನಲ್ಲಿ ಗುರುವಾರ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಬಿ. ಗೋಪಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಪರೀಕ್ಷಾ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು.